Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*

ನವೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.27 NEWS DESK : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಕಾನೂನನ್ನು ಉಲ್ಲಂಘಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಎಚ್ಚರಿಸಿದರು. ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಬಾಲ್ಯ ವಿವಾಹ ತಡೆ’ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನಕ್ಷರತೆ, ಬಡತನ, ಮೂಢನಂಬಿಕೆ ಇಂತಹವುಗಳು ಬಾಲ್ಯವಿವಾಹಕ್ಕೆ ಕಾರಣವಾಗಿವೆ. ಬಾಲ್ಯ ವಿವಾಹ ತಡೆ ಜಾಗೃತಿಯಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು. ಬಾಲ್ಯವಿವಾಹದಂತಹ ಘಟನೆಗಳು ಕಂಡುಬಂದಾಗ ವಿದ್ಯಾರ್ಥಿಗಳು ಕೂಡಲೆ ಸಂಬಂಧಪಟ್ಟವರಿಗೆ ವಿಷಯ ಮುಟ್ಟಿಸಬೇಕು. ನಂತರ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು. 21 ವರ್ಷ ಒಳಗಿನ ಹುಡುಗ ಹಾಗೂ 18 ವರ್ಷ ಒಳಗಿನ ಹುಡುಗಿಯರ ನಡುವಿನ ಮದುವೆ ಬಾಲ್ಯವಿವಾಹವಾಗುತ್ತದೆ. ಗಿರಿಜನರಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು. ಜಾಗೃತಿಯ ಮೂಲಕ ಬಾಲ್ಯವಿವಾಹವನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್.ವಿಠಲ್ ಮಾತನಾಡಿ, ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ಅನೇಕ ಕಾಯಿದೆಗಳಿವೆ. ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ ತಡೆ ಇನ್ನಿತರ ಕಾಯಿದೆಗಳಿವೆ. ಅದರಲ್ಲೂ ಪೋಕ್ಸೋ ಕಾಯಿದೆ ಕಠಿಣವಾಗಿದೆ. ವಿದ್ಯಾರ್ಥಿನಿಯರನ್ನು ಚುಡಾಯಿಸುವುದು, ಡಬ್ಬಲ್‍ಮೀನಿಂಗ್‍ನಲ್ಲಿ ಮಾತನಾಡುವುದು, ಹಿಂಬಾಲಿಸುವುದು, ಕೆಟ್ಟ ಸ್ಪರ್ಶ ಇವೆಲ್ಲವೂ ಪೋಕ್ಸೋ ಕಾಯಿದೆಯಡಿ ಬರುತ್ತವೆ. ಇಂತಹ ಕಿರುಕುಳಕ್ಕೆ ತುತ್ತಾದ ವಿದ್ಯಾರ್ಥಿನಿಯರು ಕೂಡಲೆ ಪೊಲೀಸ್ ಠಾಣಾ ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು. ಕಾಲೇಜು ವಿದ್ಯಾರ್ಥಿನಿಯರು ವಿದ್ಯೆ ಕಲಿಯುವ ಸಂದರ್ಭದಲ್ಲಿ ತಪ್ಪು ಹೆಜ್ಜೆಗಳನ್ನು ಇಡಬಾರದು. ವಿದ್ಯೆಯಿಂದ ಮಾತ್ರ ನಿಮ್ಮೆಲ್ಲ ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳಬಹುದು. ಸಮಾಜ ದ್ರೋಹಿಗಳು ಅಪ್ರಾಪ್ತ ಹೆಣ್ಣುಮಕ್ಕಳನ್ನು ಬುಟ್ಟಿಗೆ ಹಾಕಿಕೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿರುತ್ತಾರೆ. ಬೈಕ್‍ಗಳಲ್ಲಿ ಹಿಂಬಾಲಿಸುತ್ತಾರೆ. ಮೊಬೈಲ್ ನಂಬರ್ ಪಡೆದು, ಮೆಸೆಜ್ ಕಳುಹಿಸುತ್ತಾರೆ. ಬಣ್ಣದ ಮಾತುಗಳನ್ನಾಡುತ್ತಾರೆ. ಇದಕ್ಕೆ ಯಾರು ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು. ಎಚ್ಚರ ತಪ್ಪಿದ ಹೆಣ್ಣು ಮಕ್ಕಳ ಮುಖದ ಮೇಲೆ ಆ್ಯಡಿಸ್ ಎರಚುವುದು, ಚಾಕು ಹಾಕಿ ಕೊಂದ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಮಕ್ಕಳಿಗೆ ಮೂಲಭೂತ ಹಕ್ಕುಗಳಿವೆ. ನಿಮ್ಮ ರಕ್ಷಣೆಗೆ ಕಾನೂನು ಇದೆ. ತಪ್ಪು ಹಾದಿ ತುಳಿಯದೆ ನಿಶ್ಚಿಂತೆಯಿಂದ ವಿದ್ಯಾಭ್ಯಾಸ ಮುಂದುವರಿಸಿ ಎಂದು ಹೇಳಿದರು. ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಮಿಲ್‍ಡ್ರೆಡ್ ಗೋನ್ಸಾಲ್ವೆಸ್ ಮಾತನಾಡಿ, ಬಾಲ್ಯವಿವಾಹ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯಾರೇ ಪೋಷಕರು ಯಾವತ್ತು ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಕೊಟ್ಟರೆ ತಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದಂತೆ. ಬಾಲ್ಯವಿವಾಹವನ್ನು ತಡೆಯಲು ನಾಗರಿಕ ಸಮಾಜ ಕೈಜೋಡಿಸಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಉಪನ್ಯಾಸಕ ಲಾಂಚನ್ ಕಾರೇಕಾರ್ ಇದ್ದರು. ಉಪನ್ಯಾಸಕರಾದ ಸೌಮ್ಯ, ಭವ್ಯ ಮತ್ತು ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ…

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.