Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*

ನವೆಂಬರ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.28 NEWS DESK : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣೀಯರು ಸಹ ಕಾಲ ಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ಅಂತ್ಯದವರೆಗೆ 5 ವರ್ಷದೊಳಗಿನ 15 ಶಿಶುಗಳು ವಿವಿಧ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಈ 15 ಶಿಶುಗಳಲ್ಲಿ 7 ಪ್ರಕರಣಗಳು ಅವಧಿ ಪೂರ್ವ ಜನನ, ಅನುವಂಶೀಯ ಕಾರಣಗಳು ಹಾಗೂ ಜನನ ಸಂದರ್ಭದಲ್ಲಿ ರಕ್ತಸ್ರಾವ ಸಂಭವಿಸಿದ ಉಸಿರಾಟದ ತೊಂದರೆಯಿಂದ ಸಾವು. ಉಳಿದಂತೆ ನಾಟಿ ಔಷಧಿ ಕುಡಿಸಿ, ಜ್ವರ, ಶೀತ, ಕೆಮ್ಮು ಬಂದು ಮಕ್ಕಳ ಸಾವು ಸಂಭವಿಸಿದೆ. ಗರ್ಭಿಣೀಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದಿರುವುದು ಹೀಗೆ ಹಲವು ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಶೇ.87 ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಅವರು ಮಾಹಿತಿ ನೀಡಿ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಆರೋಗ್ಯ ಮತ್ತು ಪರಿಸರ ಶುಚಿತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ ನಾಯಿ ಕಡಿತ ಪ್ರಕರಣಗಳು 4,356, ಹಾವು ಕಡಿತ ಪ್ರಕರಣಗಳು 297, ಅತಿಸಾರ ಬೇಧಿ 2,427 ಪ್ರಕರಣಗಳು, ಡೆಂಗ್ಯೂ 272, ಇಲಿಜ್ವರ 13, ಕಾಲರಾ ಮತ್ತು ಮಲೇರಿಯಾ ತಲಾ 3 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಹ ಗುಣಮುಖರಾಗಿದ್ದಾರೆ. ನಾಯಿ ಮತ್ತು ಹಾವು ಕಡಿತಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ದಾಸ್ತಾನು ಇದೆ ಎಂದು ಡಾ.ಶ್ರೀನಿವಾಸ್ ಅವರು ಮಾಹಿತಿ ನೀಡಿದರು. ಯಾವುದೇ ಪ್ರಾಣಿ ಕಚ್ಚಿದರೂ ಸಹ ಉದಾಸೀನ ಮಾಡದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತಾಗಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ಮಾಹಿತಿ ನೀಡಿ ಜಿಲೆಯಲ್ಲಿ ಜನವರಿಯಿಂದ ಇದುವರೆಗೆ 371 ಕ್ಷಯರೋಗ ಪ್ರಕರಣಗಳು ವರದಿಯಾಗಿದ್ದು, ಕಾಲ ಕಾಲಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ತಾಲ್ಲೂಕು ವೈದ್ಯಾಕಾರಿಗಳಾದ ಡಾ.ಯತಿರಾಜು, ಡಾ.ಚೇತನ್, ಸ್ತ್ರೀ ಆರೋಗ್ಯ ತಜ್ಞರಾದ ಡಾ.ಸೋಮಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪಶುಪಾಲನ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಆಹಾರ ಸುರಕ್ಷತೆ ವಿಭಾಗದ ಮಂಜುನಾಥ್, ಜಿ.ಪಂ.ಇಇ ನಾಯಕ್, ವಿವಿಧ ಇಲಾಖಾ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.