Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಭಾರತ

*ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*

ನವೆಂಬರ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ದೆಹಲಿ ನ.29 NEWS DESK : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ ವಿವಿಧ ವಿಷಯಗಳು ಕುರಿತು ಮಾತುಕತೆ ನಡೆಸಿದರು. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ  ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ.  2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ ಎಂದರು. ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದರು. ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ದಮಾಡಿರುವ ಬಗ್ಗೆ ತಿಳಿದುಬಂದಿದೆ. ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿದರು. ಮೂರನೆಯದಾಗಿ ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ.
ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕೋರಲಾಗಿದೆ. ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ. ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ಕೋರಿದರು. 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ರೂ.5495 ಕೋಟಿ ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ರೂ.6ಸಾವಿರ ಕೋಟಿ ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ. ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು. 16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಶಾಸ್ತ ಯುವಕ ಸಂಘದ ವತಿಯಿಂದ…

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.