Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*

ನವೆಂಬರ್ 29, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.29 NEWS DESK : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಸಲಹೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಹಾಗೆಯೇ ಗುರುತಿನ ಚೀಟಿಯನ್ನು ಶುಕ್ರವಾರ ವಿತರಿಸಿ ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ತಿಳಿಸಲಾಗಿದೆ. ಆದ್ದರಿಂದ ಮೂಲಭೂತ ಹಕ್ಕು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆ ದಿಸೆಯಲ್ಲಿ ಕಾನೂನು ಸೇವಾ ಪ್ರಾಧಿಕಾರವು ಕಾನೂನಿನ ಅರಿವು ಮತ್ತು ನೆರವು ನೀಡುತ್ತಿದೆ ಎಂದರು. ಕಾನೂನು ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಕಟ್ಟಕಡೆಯ ವ್ಯಕ್ತಿಗೂ ಸಹ ಕಾನೂನಿನ ಬಗ್ಗೆ ಅರಿವಿನ ಮಾಹಿತಿ ನೀಡುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ನೀಡಿದರು. ಕಾನೂನಿನಲ್ಲಿ ಎರಡು ರೀತಿ ಇದ್ದು, ಜನರೇ ಮಾಡಿರುವ ಕಾನೂನುಗಳು ಮತ್ತು ನಿಸರ್ಗ ಮಾಡಿದ ಕಾನೂನು ಆಗಿದೆ. ಎರಡನ್ನು ಪಾಲಿಸಿದ್ದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಕಾನೂನುಗಳನ್ನು ಪಾಲಿಸಿ ಅಸ್ತಿತ್ವವನ್ನು ಉಳಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ವಿವರಿಸಿದರು. ಸಮಾಜದಲ್ಲಿನ ಅಸಹಾಯಕರ ಬದುಕು ಸುಧಾರಣೆಯಾಗಬೇಕು. ಆ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ತಮ್ಮ ಸುತ್ತಲಿನ ವ್ಯಾಪ್ತಿಯಲ್ಲಿ ಕಾನೂನಿನ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡುವಂತಾಗಬೇಕು ಎಂದರು. ‘ಸಮಾಜದಲ್ಲಿ ಇಂದಿಗೂ ಸಹ ಹಲವು ಕುಟುಂಬಗಳು ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ತಿಣುಕಾಡುತ್ತಿವೆ. ಆದ್ದರಿಂದ ಇಂತಹ ಕುಟುಂಬಗಳಿಗೆ ಅಗತ್ಯ ಕಾನೂನು ನೆರವು ನೀಡುವಂತಾಗಬೇಕು. ಸಮಾಜವು ಅನಾಗರಿಕತೆಯಿಂದ ನಾಗರಿಕತೆಯ ಎಡೆಗೆ ಮುನ್ನಡೆಯಬೇಕು. ಆ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಸಮಾಜದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ನೀಡಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಅವರು ಮಾತನಾಡಿ ಕಾನೂನು ಸ್ವಯಂ ಸೇವಕರು ಕಾನೂನು ಸೇವಾ ಪ್ರಾಧಿಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕೆಲಸ ಮಾಡುವಂತಾಗಬೇಕು ಎಂದು ತಿಳಿಸಿದರು. ಕಟ್ಟಕಡೆಯ ನಾಗರಿಕರಿಗೆ ನ್ಯಾಯ ದೊರಕಿಸುವುದು ಅತೀ ಮುಖ್ಯವಾಗಿದೆ. ಜನ ಸಾಮಾನ್ಯರು ಹಾಗೂ ಸೌಲಭ್ಯಗಳಿಂದ ವಂಚಿತರಾದವರಿಗೆ ಅವಕಾಶಗಳನ್ನು ಕಲ್ಪಿಸುವಂತಾಗಬೇಕು ಮತ್ತು ಕಾನೂನಿನ ಬಗ್ಗೆ ಅರಿವು ಜಾಗೃತಿ ಉಂಟುಮಾಡಬೇಕು ಎಂದರು. ಸಮಾಜದಲ್ಲಿನ ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ, ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವುದು ಆದ್ಯತೆಯಾಗಬೇಕು. ಕಾನೂನು ದುರ್ಬಳಕೆ ಆಗದಂತೆ ಗಮನಹರಿಸುವುದು ಅತ್ಯಗತ್ಯ ಎಂದು ಎಂ.ಎ.ನಿರಂಜನ್ ಅವರು ಪ್ರತಿಪಾದಿಸಿದರು. ‘ಕುಟುಂಬ ಅಥವಾ ಇನ್ನಿತರ ಯಾವುದೇ ರೀತಿಯ ಭಿನ್ನಾಭಿಪ್ರಾಯ/ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಮುಂದಾಗಬೇಕು. ಸಣ್ಣಪುಟ್ಟ ವಿಚಾರಗಳಿಗೆ ನ್ಯಾಯಾಲಯಕ್ಕೆ ಹೋಗಬಾರದು. ಸಾಧ್ಯವಾದಷ್ಟು ತಳಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು. ಧ್ವೇಷ ಸಾಧಿಸುವುದರಿಂದ ಯಾರಿಗೂ, ಯಾವುದೇ ರೀತಿಯ ಪ್ರಯೋಜನ ಇಲ್ಲ ಎಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರು ಒತ್ತಿ ಹೇಳಿದರು.’ ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ತಿಂಗಳಿಗೆ 10 ರಿಂದ 15 ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿಂದೆ ಒಂದು ವರ್ಷಕ್ಕೆ ಇಷ್ಟು ಪ್ರಕರಣಗಳು(10 ರಿಂದ 15) ದಾಖಲಾಗುತ್ತಿದ್ದವು ಎಂದು ಎಂ.ಎ.ನಿರಂಜನ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಶ್ರೀಸಾಮಾನ್ಯರಿಗೆ ಕಾನೂನು ಸೇವೆ ತಲುಪಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕೈಜೋಡಿಸುವಂತಾಗಬೇಕು ಎಂದು ಕೋರಿದರು.
ವಕೀಲರಾದ ಕೆ.ಎಂ.ಮೀನಾ ಕುಮಾರಿ ಮಾತನಾಡಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನಿನ ಅರಿವು ಕುರಿತು ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಜಿ.ವಿಮಲ ಅವರು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು. ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಪ್ರಶಾಂತಿ ಜಿ., ಮೂರನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಸವರಾಜ ಸಿ.ಕೆ., ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸುಬ್ರಮಣಿ ಎನ್., ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ. ಎನ್.ಬಿ. ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಮುನಿರತ್ನಮ್ಮ ಸಿ.ಎನ್., ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನಾಗೇಶ್ ಎನ್.ಎ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.