Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ : ಇಂಗ್ಲೀಷ್ ಜೊತೆಯಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಸಂರಕ್ಷಣೆ ಅಗತ್ಯ : ಡಾ.ದೊಡ್ಡೇಗೌಡ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ : ಇಂಗ್ಲೀಷ್ ಜೊತೆಯಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ಸಂರಕ್ಷಣೆ ಅಗತ್ಯ : ಡಾ.ದೊಡ್ಡೇಗೌಡ ಅಭಿಮತ*

ನವೆಂಬರ್ 30, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.30 NEWS DESK : “ಇಂಗ್ಲೀಷ್”ನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೆ ಮಕ್ಕಳಿಗೆ ಕಲಿಸುವುದರ ಜೊತೆ ಜೊತೆಯಲ್ಲೆ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆಯೆಂದು ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿತ “ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೆ, ಕನ್ನಡ ಭಾಷೆಯ ಆಳವಾದ ಜ್ಞಾನವನ್ನು ಹೊಂದಿರುವ ಶಿಕ್ಷಕ ವರ್ಗದ ಮೂಲಕ, ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ ನಾವೆಲ್ಲ ಒಂದೆನ್ನುವ ಭಾವವನ್ನು ಮನದಲ್ಲಿ ತುಂಬಿಕೊಂಡು ಒಟ್ಟಾಗಿ ಕನ್ನಡದ ಕಂಪನ್ನು ಪಸರಿಸಬೇಕಾಗಿದೆಯೆಂದು ಮನದುಂಬಿ ನುಡಿದರು.
ಎರಡು ಸಾವಿರ ವರ್ಷಗಳ ಶ್ರೀಮಂತ ಪರಂಪರೆಯ ಕನ್ನಡಕ್ಕೆ ಶಾಸ್ತ್ರೀಯವಾದ ಸ್ಥಾನ ಮಾನಗಳು ದೊರಕಿದೆಯಾದರು, ‘ಕನ್ನಡ’ವನ್ನು ತಮ್ಮದೆಂದು ಅಪ್ಯಾಯಮಾನವಾಗಿ ಅಪ್ಪಿಕೊಳ್ಳುವ ಮನಸ್ಥಿತಿಗಳು ಕಾಣುತ್ತಿಲ್ಲ.ಈ ಹಿನ್ನೆಲೆಯಲ್ಲಿ ಕನ್ನಡ ಪರಂಪರೆಯನ್ನು ಮುಂದುವರೆಸುವ ಮಹತ್ವದ ಜವಾಬ್ದಾರಿ ಹೊಂದಿರುವ ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯ ಒಲವನ್ನು ಮೂಡಿಸುವ, ಕನ್ನಡದ ಓದನ್ನು ಪ್ರೋತ್ಸಾಹಿಸುವ ಪ್ರಯತ್ನ ಅವಶ್ಯವಾಗಿ ನಡೆಯಬೇಕು. ಇಂತಹ ಮಹತ್ವದ ಚಿಂತನೆಗಳಡಿ ಜಿಲ್ಲಾ ಕಸಾಪ ಶಾಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಮೆಚ್ಚುಗೆಯ ವಿಚಾರವೆಂದು ನುಡಿದರು.
ಬದುಕಿನಲ್ಲಿ ನಾಲ್ಕು ಮಂದಿಗೆ ಕನ್ನಡ ಕಲಿಸಿ-ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಕನ್ನಡಿಗರಾದ ನಾವೆಲ್ಲ ನಮ್ಮ ಬದುಕಿನಲ್ಲಿ ನಾಲ್ಕು ಮಂದಿಗೆ ಕನ್ನಡವನ್ನು ಕಲಿಸಿದಲ್ಲಿ ಕನ್ನಡದ ಉದ್ಧಾರ ಸಾಧ್ಯವಾಗುತ್ತದೆ. ಪ್ರಸ್ತುತ ಬದುಕಿಗಾಗಿ ಕನ್ನಡ ನೆಲದಲ್ಲಿ ನೆಲೆ ನಿಂತ ಮಂದಿಯೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕಾದ ನಾವು, ಅವರ ಭಾಷೆಯಲ್ಲೆ ಮಾತನಾಡುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಇದನ್ನು ಮೀರಿ ನಮ್ಮೆಲ್ಲ ವ್ಯವಹಾರಗಳಲ್ಲಿ ಕನ್ನಡದ ಬಳಕೆಗೆ ಒತ್ತು ನೀಡುವಂತಾಗಬೇಕೆನ್ನುವ ಆಶಯ ವ್ಯಕ್ತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಮಾತನಾಡಿ, ಕನ್ನಡ ಭಾಷಾ ಸಂಸ್ಕೃತಿ ಅತ್ಯಂತ ಶಕ್ತಿಯುತವಾದದ್ದು. ಇದರ ಬೆನ್ನೆಲುಬೆ ‘ಸಾಹಿತ್ಯ’ವೆಂದು ವ್ಯಾಖ್ಯಾನಿಸಿ, ಇಂದು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ಅಗತ್ಯ ಸ್ಪಂದನ ದೊರಕುತ್ತಿಲ್ಲವೆನ್ನುವ ಭಾವನೆ ಮೂಡುತ್ತಿದೆ. ಇಂತಹ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಪ್ರತಿಯೊಬ್ಬರು ಹೃದಯವಂತಿಕೆಯನ್ನು ಮೆರೆದು, ಈ ನೆಲದ ಸಂಸ್ಕೃತಿಯ ಬೆಳವಣಿಗೆಗೆ ಮುಂದಾಗಬೇಕೆಂದು ಕರೆ ನೀಡಿದರು. ಸ್ಪರ್ಧಾತ್ಮವಾದ ಈ ಯುಗದಲ್ಲಿ ಎಲ್ಲವೂ ತನ್ನದೆನ್ನುವ ಭಾವನೆ ಜಾಸ್ತಿಯಾಗಿದೆ. ಗಳಿಸಿದ್ದರಲ್ಲಿ ಒಂದಷ್ಟನ್ನು ಹಂಚುವ ಮನಸ್ಥಿತಿ ಇಲ್ಲವಾಗಿz.ಎಲ್ಲರೂ ನಮ್ಮವರು ಎಂಬ ಭಾವನಾತ್ಮಕ ಸಂಬಂಧಗಳಿಂದ ದೂರ ಸರಿಯುತ್ತಿದ್ದೇವೆಂದು ಕಳವಳ ವ್ಯಕ್ತಪಡಿಸಿ, ಇವುಗಳನ್ನು ಮೀರಿ ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಪ್ರಯತ್ನ ನಡೆಯಲೆಂದು ಹಾರೈಸಿದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರು ಹಾಗೂ ದತ್ತಿ ದಾನಿಗಳಾದ ಟಿ.ಪಿ. ರಮೇಶ್ ಮಾತನಾಡಿ, ನಮ್ಮ ಸುತ್ತಮುತ್ತಲ ಪ್ರದೇಶಗಳಲ್ಲೆ ಕನ್ನಡೇತರರು ಅವರ ಭಾಷೆಗಳಲ್ಲೆ ವ್ಯವಹರಿಸುವುದನ್ನು ನಾವಿಂದು ಕಾಣುತ್ತಿದ್ದೇವೆ. ಇಂತಹ ಪರಿಸ್ಥಿತಿಗಳಿಗೆ ಯಾರನ್ನೂ ನಾವು ದೂಷಿಸಲು ಸಾಧ್ಯವಿಲ್ಲ. ಕರ್ನಾಟಕ ರಾಜ್ಯ ಎಲ್ಲಾ ಭಾಷಿಗರಿಗೆ ನೆಲೆಯನ್ನು ನೀಡಿ, ಸಹೋದರತ್ವದಿಂದ ನೋಡುತ್ತಿರುವ ನೆಲವಾಗಿದೆ. ಇಲ್ಲಿನ ನೆಲ ಜಲವನ್ನು ಬಳಸುವ ಮಂದಿ ಇಲ್ಲಿನ ಭಾಷೆಯನ್ನು ಕಲಿಯುವ ಮತ್ತು ಗೌರವಿಸುವ ಮನಸ್ಥಿತಿಯನ್ನು ಹೊಂದಬೇಕು. ಪರಸ್ಪರ ಅನ್ಯೋನ್ಯತೆಯ ಮೂಲಕ ಕನ್ನಡವನ್ನು ನಾವಿಂದು ಬೆಳೆಸಬೇಕಾಗಿದೆಯೆಂದು ಅಭಿಪ್ರಾಯಿಸಿದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ಮಾತನಾಡಿ, ಬಳಗ ಮತ್ತು ಕಸಾಪ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡು ಸಂಘಟನೆಗಳು ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಶ್ರಮಿಸುತ್ತಿರುವುದಾಗಿ ನುಡಿದರು. ಸಮಾರಂಭದಲ್ಲಿ ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಸಾಪ ಪದಾಧಿಕಾರಿಗಳು ಕನ್ನಡ ನಾಡಗೀತೆಯನ್ನು ಪ್ರಸ್ತುತ ಪಡಿಸಿದರು. ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್ ಸ್ವಾಗತಿಸಿ, ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ರಂಜಿಸಿದ ಜನಪದ ನೃತ್ಯ ಸ್ಪರ್ಧೆ : ವೇದಿಕೆ ಕಾರ್ಯಕ್ರಮಗಳ ಬಳಿಕ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜನಪದ ನೃತ್ಯ ಸ್ಪರ್ಧೆ ಅತ್ಯಾಕರ್ಷಕವಾಗಿ ಮೂಡಿ ಬಂದಿತು. ನಗರದ ವಿವಿಧ ಶಾಲೆಗಳ ಕಲಾ ತಂಡಗಳು ವಿವಿಧ ಜಾನಪದ ಹಾಡುಗಳಿಗೆ ಪ್ರದರ್ಶಿಸಿದ ನೃತ್ಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

::: ಅದವಿಯಗೆ ಪ್ರಶಸ್ತಿ ಪ್ರದಾನ :::
2023-24 ನೇ ಏಪ್ರಿಲ್ ನಲ್ಲಿ ನಡೆದ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕೊಡಗು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದವಿಯ ಯು. ಗೆ ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿ ನಿಧಿ ಪ್ರಶಸ್ತಿಯನ್ನು ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರದಾನ ಮಾಡಿದರು. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರ್, ನವೀನ್ ಅಂಬೇಕಲ್, ರೇವತಿ ರಮೇಶ್, ಭಾರತಿ ರಮೇಶ್, ಕಡ್ಲೇರ ತುಳಸಿ, ಜಲಜಾ ಶೇಖರ್, ಟಿ.ಜಿ.ಪ್ರೇಮಕುಮಾರ್, ಜೆ.ಸಿ.ಶೇಖರ್, ನಾಗರಾಜ್, ಕೆ.ವಿ.ಉಮೇಶ್, ಮಂಜುನಾಥ್ ಹಾಗೂ ವಿದ್ಯಾರ್ಥಿನಿಯ ಪೋಷಕರಾದ ಅಮೀನ ಕೆ.ಎ, ಉಮ್ಮರ್ ಸಿ.ಎಂ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ…

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.