Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಸಮಾವೇಶ*

ಡಿಸೆಂಬರ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.1: ಬುಡಕಟ್ಟು ಸಮುದಾಯದ ಮಕ್ಕಳಲ್ಲಿ ಉತ್ತಮ  ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರಲ್ಲಿ ಸುಪ್ತವಾಗಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅವರನ್ನು ಶೈಕ್ಷಣಿಕವಾಗಿ  ಉತ್ತೇಜಿಸುವ ಮೂಲಕ ಅವರನ್ನು ಸಮಾಜದ‌ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆ, ಕರ್ನಾಟಕದ ವತಿಯಿಂದ ಡಿಸೆಂಬರ್ ಅಂತ್ಯದ ವೇಳೆಗೆ  ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಡಿಕೇರಿಯಲ್ಲಿ ತಿಳಿಸಿದರು.  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ  ಮಡಿಕೇರಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು ಸಂಸ್ಥೆಯ ವಜ್ರ‌ಮಹೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು.      ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಾಲಾ ಮಕ್ಕಳಿಂದ ಕುಶಾಲನಗರದಲ್ಲಿ ಜಿಲ್ಲಾಮಟ್ಟದ‌ Rally ನಡೆಸುವ ಮೂಲಕ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕಾರ್ಯಕ್ರಮಗಳು ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುವುದು,   ಡಿಸೆಂಬರ್ ಅಂತ್ಯದೊಳಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಳ ನೋಂದಾವಣಿ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಪಿ.ಜಿ.ಆರ್. ಸಿಂಧ್ಯ ಸಲಹೆ ನೀಡಿದರು. ಸಂಸ್ಥೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ  ಪರೀಕ್ಷೆಯನ್ನು ಎದುರಿಸುವ ಕುರಿತು ಆತ್ಮಸ್ಥೈರ್ಯ ಬೆಳೆಸಿ ಅವರಲ್ಲಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಬೆಳೆಸುವ ತರಬೇತಿ ಕಾರ್ಯಾಗಾರ ಸಂಘಟಿಸುವಂತೆ ಸಲಹೆ ನೀಡಿದರು. ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ರಾಜ್ಯ ಸ್ಕೌಟ್ಸ್ ವಿಭಾಗದ ಸಂಘಟಕರೂ ಆದ ಜಿಲ್ಲಾ ‌ಉಸ್ತುವಾರಿ ಸಂಘಟಕ  ಪ್ರಭಾಕರ್ ಭಟ್ ಮಾತನಾಡಿ, ಸಂಸ್ಥೆಯ ವತಿಯಿಂದ ವಿವಿಧ ತರಬೇತಿಗಳನ್ನು ಸಂಘಟಿಸುವ ಮೂಲಕ ಮಕ್ಕಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ರಾಜ್ಯಮಟ್ಟದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದರು. ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ವತಿಯಿಂದ ಪ್ರಸ್ತುತ ಕೈಗೊಳ್ಳುತ್ತಿರುವ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಡಿಸೆಂಬರ್ ಮೂರನೇ ವಾರದಲ್ಲಿ ಸಂಸ್ಥೆಯ ವತಿಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಸಭೆಯಲ್ಲಿ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ತರಬೇತಿ ಆಯುಕ್ತ ಕೆ.ಯು.ರಂಜಿತ್, ರೋವರ್ ನಾಯಕ ಜನಾರ್ಧನ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಶ್ರೀ ಕೋಟಿ ಮಹಾಗಣಪತಿ ದಸರಾ ದಶಮಂಟಪ ಸಮಿತಿ ವತಿಯಿಂದ 2026-27ನೇ ಸಾಲಿನ ದಸರಾ…

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.