Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
  • *ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*
  • *ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಡಿಸೆಂಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಡಿ.2 NEWS DESK : ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಡೀ ದೇಶದಲ್ಲಿ ರಾಜ್ಯದ ಜಿಎಸ್‌ಡಿಪಿ ನಂಬರ್ ಒನ್ ಆಗಿದೆ. ದೇಶದ ಜಿಡಿಪಿ ಬೆಳವಣಿಗೆ ದರ ಇನ್ನೂ 8 ಇದೆ. ಆದರೆ ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆ ದರ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದರು.
ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. ಎಸ್‌ಸಿಎಸ್‌ಪಿ / ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ. ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ. ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ನಮ್ಮ ನಂಬಿಕೆ  ಎಂದು ಹೇಳಿದರು. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಎಸ್‌ಡಿಪಿ ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ. ಹೀಗಾಗಿ ನಾವು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ…

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.