
ಮಡಿಕೇರಿ ಡಿ.3 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.7 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಪ್ರಯುಕ್ತ ಭಕ್ತಾದಿಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.









