Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಮಹಾಸಭೆ : ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರದೊಂದಿಗೆ ಸಮಾಲೋಚನೆ : ಜಿ.ಆರ್.ಶಿವಶಂಕರ್ ಭರವಸೆ
Uncategorized

ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಮಹಾಸಭೆ : ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರದೊಂದಿಗೆ ಸಮಾಲೋಚನೆ : ಜಿ.ಆರ್.ಶಿವಶಂಕರ್ ಭರವಸೆ

ಡಿಸೆಂಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.3 NEWSDESK : ಅತಿ ಕಡಿಮೆ ಗೌರವಧನ ಪಡೆದು ಹೆಚ್ಚಿನ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರಕಾರಿ ನೌಕರರೆಂದೇ ಪರಿಗಣಿಸಲು ಮತ್ತು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದೊಂದಿಗೆ ಸಮಾಲೋಚನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಭರವಸೆ ನೀಡಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನ ಪಡೆದು ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸರಕಾರ ಇವರನ್ನು ಕೂಡ ಸರಕಾರಿ ಉದ್ಯೋಗಿಗಳೆಂದು ಪರಿಗಣಿಸುವ ಅಗತ್ಯವಿದೆ. ನಿವೃತ್ತಿ ವೇತನ ಮತ್ತು ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರಕಾರದ ಗಮನ ಸೆಳೆಯಲಾಗಿದೆ. ಸರಕಾರಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವ ಬೇಡಿಕೆ ಕುರಿತು ರಾಜ್ಯಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂಡ ಮಾಜಿ ಅಧ್ಯಕ್ಷರಾದ ಸುರಯ್ಯ ಅಬ್ರಾರ್, ಮಹಿಳೆಯರ ಒಗ್ಗಟ್ಟಿನಲ್ಲಿ ಬಲವಿದೆ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ಉತ್ತಮ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗುರುತಿಸಿ ಸನ್ಮಾನಿಸಿರುವುದು ಶ್ಲಾಘನೀಯ. ಹೀಗೆ ಮಾಡುವುದರಿಂದ ಮತ್ತಷ್ಟು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.  ಮತ್ತೊಬ್ಬ ಅತಿಥಿ ಸಮಾಜ ಸೇವಕ ರವೂಫ್ ಎಂ.ಎನ್ ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳ ಗಮನಕ್ಕೆ ತಂದು ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾದ ಸಿ.ಯು.ಪವಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಮತ್ತು ನಿವೃತ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸೋಮವಾರಪೇಟೆ ತಾಲ್ಲೂಕು ಸಂಘದ ಅಧ್ಯಕ್ಷೆ ಧನಲಕ್ಷ್ಮಿ, ಕಾರ್ಯದರ್ಶಿ ತಾರಾ, ಮಾಜಿ ಜಿಲ್ಲಾಧ್ಯಕ್ಷೆ ತಾರಾಮಣಿ, ತಾಲ್ಲೂಕು ಮಾಜಿ ಅಧ್ಯಕ್ಷೆ ಅಕ್ಕಮ್ಮ, ಸಂಘಟನೆಯ ಪದಾಧಿಕಾರಿಗಳು, ಮಡಿಕೇರಿ ತಾಲ್ಲೂಕು 5 ವರ್ತುಲದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು. ಕ್ಷೇಮನಿಧಿ ವರದಿಯನ್ನು ಕ್ಷೇಮನಿಧಿ ಕಾರ್ಯದರ್ಶಿ ಮೇನಕೆ ಮಂಡಿಸಿದರು. ಉಷಾ ಪ್ರಾರ್ಥಿಸಿ, ಕಾರ್ಯದರ್ಶಿ ಆಶಾಲತಾ ಸ್ವಾಗತಿಸಿ, ಸುಮತಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.