Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಡಿ.17 ರಂದು ಕೈಮುಡಿಕೆ ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.17 ರಂದು ಕೈಮುಡಿಕೆ ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ*

ಡಿಸೆಂಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.3 NEWS DESK : ಬೊಟ್ಟಿಯತ್ ಮೂಂದ್ ನಾಡ್ ಪುತ್ತರಿ ಕೈಮುಡಿಕೆ ಕೋಲ್ ಮಂದ್ ಡಿ.17 ರಂದು ನಡೆಯಲಿದೆ ಎಂದು ಮೂರು ನಾಡಿನ ತಕ್ಕಮುಖ್ಯಸ್ಥ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈಚೂರುವಿನ ದವಸ ಭಂಡಾರದ ಸಭಾಂಗಣದಲ್ಲಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳಿಗೆ ಸೇರಿದ ಇತಿಹಾಸ ಪ್ರಸಿದ್ಧದ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕುರಿತು ನಡೆದ ಪೂರ್ವಭಾವಿ  ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಡಿ.17 ರಂದು ಕೈಮುಡಿಕೆ ಕೋಲ್ ಮಂದ್ ನಡೆಸಲು ಒಮ್ಮತದ ತೀರ್ಮಾನ ಕೈಕೊಳ್ಳಲಾಯಿತು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿಯೂ ಕೈಮುಡಿಕೆ ಪುತ್ತರಿ ಕೋಲ್ ಮಂದನ್ನು ವಿಜ್ರಂಭಣೆಯಿಂದ ಸಾರ್ವಜನಿಕವಾಗಿ ಆಚರಿಸುವಂತೆ ಹಾಗೂ  ವಿವಿಧ ಕಾರ್ಯಕ್ರಮ ನಡೆಸುವಂತೆ  ತಿರ್ಮಾನಿಸಲು ಸಭೆ ನಡೆಸುತ್ತಿರುವುದಾಗಿ ಹೇಳಿದರು. ಅಂದು ಬೆಳಿಗ್ಗೆ 10 ಗಂಟೆಗೆ ಮೂರು ನಾಡಿನವರು ಮೂರು ಕಡೆಯಿಂದ ಓಡಿಬಂದು ಮಂದ್ ಮಧ್ಯದಲ್ಲಿರುವ ಅರಳಿ ಮರಕ್ಕೆ ಕೋಲು ಹೊಡೆಯುವ ಮೂಲಕ ಮಂದ್ ಹಿಡಿಯುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ನಂತರ ವಿವಿಧ ಪೈಪೋಟಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲೆ, ಫ್ರೌಢ ಹಾಗೂ ಪದವಿ ಪೂರ್ವ ಮತ್ತು ಪದವಿ ಹಾಗೂ ಸಾರ್ವಜನಿಕರು ಎಂದು ಮೂರು ವಿಭಾಗದಲ್ಲಿ  ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪುತ್ತರಿ ಕೋಲಾಟ್, ಉಮ್ಮತ್ತಾಟ್, ಬೊಳಕಾಟ್, ಕತ್ತಿಯಾಟ್, ಬಾಳೋಪಾಟ್, ಪರೆಯಕಳಿ, ವಾಲಗತ್ತಾಟ್, ಕೊಡವ ಪಾಟ್ ಪೈಪೋಟಿ ಸೇರಿದಂತೆ ಸ್ಥಳೀಯ ಬುಡಕಟ್ಟು ಸಮುದಾಯದ ಜನರಿಗೆ ಯರವಾಟ್ ಪೈಪೋಟಿ ಇರುತ್ತದೆ ಎಂದು ತಕ್ಕ ಮುಖ್ಯಸ್ಥರು ಮಾಹಿತಿ ನೀಡಿದರು. ಸಭೆಯ ಮೊದಲಿಗೆ ಕೈಮುಡಿಕೆ ಮಂದ್ ಕಾರ್ಯದರ್ಶಿ ನಾಳಿಯಮ್ಮನ ಉಮೇಶ್ ಕೇಚಮಯ್ಯ ಸ್ವಾಗತಿಸಿ, ಕಳೆದ ವರ್ಷದ ವರದಿಯನ್ನು ಓದಿ ಅನುಮೋದನೆ ಪಡೆದರು. ಈ ಸಂದರ್ಭದಲ್ಲಿ ಬೇರಳಿನಾಡ್ ತಕ್ಕರಾದ ಮಳವಂಡ ಭುವೇಸ್ ದೇವಯ್ಯ, ಕುತ್ತ್’ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಕೈಮುಡಿಕೆ ಮಂದ್ ಸಹಕಾರ್ಯದರ್ಶಿ ಅಪ್ಪಂಡೇರಂಡ ಮನು ಮೋಹನ್, ಹಿರಿಯರಾದ ತೀತಿಮಾಡ ಕುಶಾಲಪ್ಪ, ಮೂರು ನಾಡಿನ ವಿವಿಧ ಗ್ರಾಮಗಳ ತಕ್ಕಮುಖ್ಯಸ್ಥರು ಉಪಸ್ಥಿತರಿದ್ದರು. ಪೈಪೋಟಿಗೆ ಭಾಗವಹಿಸುವವರು ಅಂದು ಬೆಳಿಗ್ಗೆ 10 ಗಂಟೆಯ ಒಳಗೆ ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಚಮ್ಮಟೀರ ಪ್ರವೀಣ್ ಉತ್ತಪ್ಪ -9880967573 ಅಥವಾ ಅಪ್ಪಂಡೇರಂಡ ಮನು ಮೋಹನ್-9901262398 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.