Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*
  • *ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹವಾಮಾನ ವೈಪರೀತ್ಯ : ಅಗತ್ಯ ಮುನ್ನೆಚ್ಚರ ವಹಿಸಲು ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹವಾಮಾನ ವೈಪರೀತ್ಯ : ಅಗತ್ಯ ಮುನ್ನೆಚ್ಚರ ವಹಿಸಲು ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ಸೂಚನೆ*

ಡಿಸೆಂಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.3 NEWS DESK : ಹವಾಮಾನ ವೈಪರೀತ್ಯ ಸಂಬಂಧ ಮುನ್ನೆಚ್ಚರ ವಹಿಸಿದಲ್ಲಿ ಹಲವು ಅವಘಡಗಳನ್ನು ತಪ್ಪಿಸಬಹುದಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರವು ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿಯನ್ನು ಹಂಚಿಕೊಳ್ಳುವಂತೆ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನಿರ್ದೇಶಕರಾದ ಹರ್ಷಲ್ ಗೋಯಲ್ ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‍ಐಸಿ)ದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ಯಾವುದೇ ಸಂದರ್ಭದಲ್ಲಿಯೂ ಎದುರಾಗಬಹುದಾಗಿದ್ದು, ಆದ್ದರಿಂದ ಸದಾ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಕೆಎಸ್‍ಎನ್‍ಡಿಎಂಸಿ ನಿರ್ದೇಶಕರಾದ ಹರ್ಷಲ್ ಗೋಯಲ್ ಹೇಳಿದರು. ‘ಹವಾಮಾನ ಮುನ್ಸೂಚನೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಕೃಷಿಕರು, ಸ್ಥಳೀಯರಿಗೆ, ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು, ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹವಾಮಾನ ಮುನ್ಸೂಚನೆಯನ್ನು ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಹೊರಡಿಸುವ ಮಾಹಿತಿಯನ್ನು ಎಲ್ಲರಿಗೂ ತಲುಪಿಸುವಂತಾಗಲು ಮುಂದಾಗಬೇಕು ಎಂದು ಹರ್ಷಲ್ ಗೋಯಲ್ ನಿರ್ದೇಶನ ನೀಡಿದರು.’ ಕೊಡಗು ಜಿಲ್ಲೆಗೆ ಮುಂಗಾರು ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಹಿಂಗಾರು ಸಂದರ್ಭದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸಬೇಕಿದೆ. ಹವಾಮಾನ ವೈಪರೀತ್ಯಗಳು ಯಾವಾಗ ಸಂಭವಿಸುತ್ತವೆ ಎಂಬುದು ತಿಳಿಯುವುದಿಲ್ಲ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು. ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಮಟ್ಟದಲ್ಲಿ ವಾಟ್ಸ್‍ಆಪ್ ಗುಂಪುಗಳ ಮೂಲಕ ನೆಟ್‍ವರ್ಕ್ ಬಲಪಡಿಸಬೇಕು. ಭೂಕುಸಿತ ಪ್ರದೇಶದಲ್ಲಿ ಮುನ್ನೆಚ್ಚರವಹಿಸಬೇಕು. ಅಂಗನವಾಡಿ, ಶಾಲಾ ಕಾಲೇಜುಗಳು, ಆಸ್ಪತ್ರೆ ಕಟ್ಟಡಗಳು ಸುಸ್ಥಿತಿಯಲ್ಲಿರಬೇಕು. ಕಟ್ಟಡಗಳು ಮಳೆ ನೀರು ಸೋರದಂತೆ ಗಮನಹರಿಸಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹರ್ಷಲ್ ಗೋಯಲ್ ಅವರು ಸೂಚಿಸಿದರು. ವಲಸಿಗ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಕಲ್ಪಿಸಬೇಕು. ಅಧಿಕಾರಿಗಳು ಕೇಂದ್ರ ವ್ಯಾಪ್ತಿಯಲ್ಲಿದ್ದು ಕಾಲಕಾಲಕ್ಕೆ ಮಾಹಿತಿ ಒದಗಿಸುವಂತಾಗಬೇಕು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲೆಗೆ ಬೇಕಿರುವ ಅಗತ್ಯ ಉಪಕರಣ ಸೇರಿದಂತೆ ಅಗತ್ಯ ಮಾಹಿತಿಯ ಪ್ರಸ್ತಾವನೆ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರ. ಹವಾಮಾನ ವೈಪರೀತ್ಯದಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಒಬ್ಬರಿಗೆ ಒಬ್ಬರು ಕೈಜೋಡಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಲಿದೆ ಎಂದರು. ಮುಂಗಾರು ಸಂದರ್ಭದಲ್ಲಿ ಮನೆ, ರಸ್ತೆ, ಚರಂಡಿ, ಸೇತುವೆ ಮತ್ತಿತರ ಹಾನಿ ಬಗ್ಗೆ ಕೂಡಲೇ ಕ್ರಮವಹಿಸಬೇಕು. ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಪೊಲೀಸ್, ಸೆಸ್ಕ್, ಪೌರಾಡಳಿತ ಮತ್ತು ನಗರಾಭಿವೃದ್ಧಿ, ಅಗ್ನಿಶಾಮಕ, ಆರ್‍ಟಿಒ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹೀಗೆ ವಿವಿಧ ಇಲಾಖೆಗಳು ಕೈಜೋಡಿಸಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಮಾತನಾಡಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಮುಂಗಾರು ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರೇ ಈ ಸಂದರ್ಭದಲ್ಲಿಯೂ ತಮ್ಮ ತಮ್ಮ ಹಂತದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾಲ ಕಾಲಕ್ಕೆ ಹವಾಮಾನ ವೈಪರೀತ್ಯದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅಲ್ಲಿನ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದರು. ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಅವರು ಮಾತನಾಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕಂಟ್ರೋಲ್ ರೂಮ್ ಸಹಾಯವಾಣಿ ಕೇಂದ್ರ 24*7 ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ತಹಶೀಲ್ದಾರ್‍ರಾದ ಪ್ರವೀಣ್ ಕುಮಾರ್(ಮಡಿಕೇರಿ), ರಾಮಚಂದ್ರ(ವಿರಾಜಪೇಟೆ), ಕೆ.ಶ್ರೀಧರ್(ಸೋಮವಾರಪೇಟೆ), ಕಿರಣ್ ಗೌರಯ್ಯ(ಕುಶಾಲನಗರ), ಡಿವೈಎಸ್‍ಪಿ ರವಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಲೋಯಲ್ ಮಿರಂಡಾ, ತಾ.ಪಂ.ಇಒಗಳಾದ ಅಪ್ಪಣ್ಣ(ವಿರಾಜಪೇಟೆ), ಪರಮೇಶ ಕುಮಾರ್(ಸೋಮವಾರಪೇಟೆ), ಅಗ್ನಿಶಾಮಕ ಇಲಾಖೆ ಅಧಿಕಾರಿ ರಾಜೇಶ್ ಅವರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ ನಗರ ಕಾಂಗ್ರೆಸ್ ಸಭೆ: ನೂತನ ಪದಾಧಿಕಾರಿಗಳ ಆಯ್ಕೆಗೆ ಒಮ್ಮತದ ನಿರ್ಧಾರ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು…

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.