Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನೂತನ ಆಸ್ಪತ್ರೆಗೆ ಶಂಕುಸ್ಥಾಪನೆ : ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು : ಮುಖ್ಯಮಂತ್ರಿ ಸಿದ್ಧರಾಮಯ್ಯ ಆಶಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ನೂತನ ಆಸ್ಪತ್ರೆಗೆ ಶಂಕುಸ್ಥಾಪನೆ : ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು : ಮುಖ್ಯಮಂತ್ರಿ ಸಿದ್ಧರಾಮಯ್ಯ ಆಶಯ

ಡಿಸೆಂಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಡಿ.5 NEWS DESK : ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, ಆಗ ನಮ್ಮ‌ ಸರ್ಕಾರದ ಆಶಯ ಈಡೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ 500 ಬೆಡ್‌ಗಳ ನೂತನ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,  ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಮತ್ತೊಂದು ವೈದ್ಯಕೀಯ ಕಾಲೇಜು ಆದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಈಗ ಸುಸಜ್ಜಿತವಾದ ವೈದ್ಯಕೀಯ ಕಾಲೇಜು ನಿರ್ಮಾಣವಾಗಿ ಜನರಿಗೆ ಸೇವೆ ನೀಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಾಗಿ ಬರುವವರು ಶ್ರೀಮಂತ ವರ್ಗದವರಲ್ಲ. ಸಾಮಾನ್ಯವಾಗಿ ಬಡವರು, ಕೆಳವರ್ಗದವರು ಮಾತ್ರ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಬಡವರು ದುಬಾರಿ ವೆಚ್ಚವನ್ನು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಗಳು ಅಗತ್ಯವಿದೆ. ನನ್ನನ್ನೂ ಒಳಗೊಂಡಂತೆ ಬಹುತೇಕ ರಾಜಕಾರಣಿಗಳು ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಹಣವಿರುವವರು ಎಲ್ಲಿಗೆ ಬೇಕಾದರೂ ಹೋಗಿ ಚಿಕಿತ್ಸೆ ಪಡೆಯಬಹುದು. ಆದರೆ ಬಡವರು ಎಲ್ಲಿಗೆ ಹೋಗಲು ಸಾಧ್ಯ? ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಜೀವಿಸುವ ಹಕ್ಕಿದೆ ಎಂದು ಸ್ಪಷ್ಟವಾಗಿ ತಿಳಸಲಾಗಿದೆ. ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು, ಇದೇ ನಮ್ಮ ಆಶಯ ಎಂದರು. ಹಿಂದೆಲ್ಲಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಶ್ರೀಮಂತರ ಕಾಯಿಲೆ ಎನ್ನುತ್ತಿದ್ದರು. ಈಗ ಬಡವರಿಗೆ ಹಾಗೂ ಸಣ್ಣ ವಯಸ್ಸನವರಿಗೂ ಬರಲು ಶುರುವಾಗಿದೆ. ಊಟದ ಕ್ರಮದಲ್ಲಿ ಬದಲಾವಣೆಯಾಗಿದ್ದು ದೈಹಿಕ ವ್ಯಾಯಾಮ ಕೂಡ ಇಲ್ಲವಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಇರಲೇಬೇಕು. ಕ್ರೀಡಾಪಟುಗಳಿಗೂ ಸಾಮಾನ್ಯ ಜನರಿಗೂ ವ್ಯತ್ಯಾಸವನ್ನು ಸುಲಭವಾಗಿ ಗುರುತಿಸಬಹುದು. ಆರೋಗ್ಯ ಬಹಳ ಮುಖ್ಯ. ವಯಸ್ಸಿಗೆ ಸರಿಯಾಗಿ ದೈಹಿಕ ವ್ಯಾಯಾಮವಿಲ್ಲದೆ, ಆಹಾರ ಪದ್ದತಿಯನ್ನು ಉತ್ತಮವಾಗಿಟ್ಟುಕೊಳ್ಳದೇ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ. ನನ್ನನ್ನು ವೈದ್ಯನಾಗಿ ನೋಡಬೇಕೆಂದು ನನ್ನ ತಂದೆಗೆ ಆಸೆಯಿತ್ತು. ಆದರೆ ನನಗೆ ಉತ್ತಮ ಅಂಕಗಳು ಬರದ ಕಾರಣ ನಾನು ವಕೀಲನಾದೆ. ನನಗೆ ವೈದ್ಯಕೀಯ ಸೀಟು ಸಿಕ್ಕಿದ್ದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ಹೇಳಿದರು.  ಹಿಂದೆ ನಾನು ಹಣಕಾಸು ಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸುವ ತೀರ್ಮಾನ ಮಾಡಲಾಗಿತ್ತು. ಈಗ ಪ್ರಸ್ತುತ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸಮುದಾಯದವರಿಗೂ ಪ್ರಾತಿನಿಧ್ಯ ದೊರಕಲು, ಇಂತಹ ಆಸ್ಪತ್ರೆಗಳಲ್ಲಿ ವೈದ್ಯರು ಕಾರ್ಯನಿರ್ವಹಿಸಲು ಮೀಸಲಾತಿ ವ್ಯವಸ್ಥೆಯಾಗುತ್ತದೆ. ಸೂಕ್ತ ಅವಕಾಶ ದೊರೆತರೆ, ಎಲ್ಲರೂ ಜೀವನದಲ್ಲಿ ಅಭಿವೃದ್ಧಿ ಹೊಂದಬಹುದಾಗಿದೆ. ಸಮಾಜದಲ್ಲಿ ಅಶಕ್ತರಿಗೆ ಬದುಕುವ ಅವಕಾಶವನ್ನು ಸರ್ಕಾರ ಕಲ್ಪಿಸುತ್ತಿದೆ. 300 ಕೋಟಿ ರೂ. ವೆಚ್ಚದಲ್ಲಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ಶಂಕುಸ್ಥಾಪನೆ ಮಾಡಿ, ನಮ್ಮ ಅವಧಿಯಲ್ಲಿಯೇ ಉದ್ಘಾಟನೆಯನ್ನೂ ನೆರವೇರಿಸಲಾಗುವುದು. ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಪಾಲಿಸುವುದರಿಂದ ಸದೃಢ ಆರೋಗ್ಯವನ್ನು ಪಡೆಯಬಹುದಾಗಿದೆ. ಕ್ಯಾನ್ಸರ್ ರೋಗಕ್ಕೆ ಆರಂಭಿಕ ಹಂತದಲ್ಲಿದ್ದರೆ ಗುಣಪಡಿಸಬಹುದಾಗಿದೆ. ವೈಜ್ಞಾನಿಕ ಸಂಶೋಧನೆಗಳಿಂದ ಅನೇಕ ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗುತ್ತಿದೆ. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ವಹಣೆ, ಸ್ವಚ್ಚತೆ ಉತ್ತಮವಾಗಿರಬೇಕು, ಉತ್ತಮ ಆರೋಗ್ಯ ಸೇವೆ ದೊರೆಯುವಂತಾಗಬೇಕು. ಉತ್ತಮ ಜನಸಂಪರ್ಕ ಹೊಂದುವುದರಿಂದ ಆಸ್ಪತ್ರೆಗೆ ಸಾರ್ವಜನಿಕರಿಂದ ದೇಣಿಗೆಯೂ ದೊರೆಯಲಿದೆ, ಆ ಮೂಲಕ ಗುಣಮಟ್ಟದ ಸೇವೆಗಳನ್ನು ಆಸ್ಪತ್ರೆ ನೀಡಲು ಸಹಾಯವಾಗುತ್ತದೆ ಎಂದರು.  ಶಾಸಕ  ರಿಜ್ವಾನ್ ಅರ್ಷದ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಬಾಲ ಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.