Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಡಿಸೆಂಬರ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಡಿ.6 NEWS DESK :  ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ: : ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು. ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ. ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.