Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಾ.ಬಿ.ಆರ್.ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ : ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಡಾ.ಬಿ.ಆರ್.ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ : ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಡಿಸೆಂಬರ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರಿ ಡಿ.6 NEWS DESK : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ.
ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು. ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು. ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ .ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾತಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನದುದ್ದಕ್ಕೂ ಸಾರಿದ್ದರು ಎಂದು ಹೇಳಿದರು. ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನದಲ್ಲಿರುವಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.