Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೀರ ಸೇನಾನಿಗಳಿಗೆ ಅಗೌರವ : ಮಾಜಿ ಸೈನಿಕರಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೀರ ಸೇನಾನಿಗಳಿಗೆ ಅಗೌರವ : ಮಾಜಿ ಸೈನಿಕರಿಂದ ಪ್ರತಿಭಟನೆ*

ಡಿಸೆಂಬರ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.6 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲೆಯ ಮಾಜಿ ಸೈನಿಕರು, ಕೊಡವ ಸಮಾಜಗಳ ಪ್ರತಿನಿಧಿಗಳು ಹಾಗೂ ಸದಸ್ಯರು ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಸಮಾವೇಶಗೊಂಡು, ವೀರ ಸೇನಾನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದ ಪ್ರಥಮ ಮಹಾ ದಂಡ ನಾಯಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಸೈನಿಕರ ಸೇನಾನಿ ಎಂದೇ ಖ್ಯಾತರಾದ ಜ.ತಿಮ್ಮಯ್ಯ ಭಾರತದ ಹೆಮ್ಮೆಯ ಶ್ರೇಷ್ಠ ಪುತ್ರರು. ಅವರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಅವಹೇಳನ ಭಾರತೀಯರಿಗೆಲ್ಲರಿಗು ಮಾಡಿರುವ ಅವಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವೀರಸೇನಾನಿಗಳನ್ನು ಅವಮಾನಿಸಿರುವ ಪ್ರಕರಣದಡಿ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಪೊನ್ನಂಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಐನಂಡ ಕೆ.ಮಂದಣ್ಣ ಮಾತನಾಡಿ, ಫೀ.ಮಾ.ಕಾರ್ಯಪ್ಪ ಹಾಗೂ ಜ.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವುದು ಕೇವಲ ಜಿಲ್ಲೆಯ ಮಾಜಿ ಸೈನಿಕರಿಗೆ ಮಾತ್ರ ನೋವನ್ನುಂಟು ಮಾಡಿಲ್ಲ. ಬದಲಾಗಿ ದೇಶದ ಇಡೀ ಸೈನಿಕ ಸಮೂಹಕ್ಕೆ ಆಘಾತವನ್ನುಂಟು ಮಾಡಿದೆ ಎಂದು ತಿಳಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಕೊಡಗಿನ ಹೆಮ್ಮೆಯ ಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜ.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವುದು ಸೈನಿಕರ ನಾಡು ಕೊಡಗಿನ ಪ್ರತಿಯೊಬ್ಬರ ರಕ್ತವನ್ನು ಕುದಿಯುವಂತೆ ಮಾಡಿದೆ. ಶಾಂತಿ ಸೌಹಾರ್ದತೆಯ ಕೊಡಗಿನಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ ಪ್ರಯತ್ನ ನಡೆಯುತ್ತಿದೆ. ಸರ್ಕಾರ ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷÀ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ವೀರಸೇನಾನಿಗಳನ್ನು ತನ್ನ ಅವಹೇಳನಕಾರಿ ಸಂದೇಶದ ಮೂಲಕ ತೇಜೋವಧೆ ಮಾಡಲು ಮುಂದಾದ ವ್ಯಕ್ತಿಯನ್ನು ಮಡಿಕೇರಿ ವಕೀಲರ ಸಂಘ ಶಾಶ್ವತವಾಗಿ ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಬೇಕು ಹಾಗೂ ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಮತ್ತಿತರರು ಮಾತನಾಡಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಪ್ರತಿಭಟನೆಯಲ್ಲಿ ಚೇರಂಬಾಣೆಯ ಮಾಜಿ ಸೈನಿಕರ ಸಂಘ, ಸುಂಟಿಕೊಪ್ಪದ ಜೈಜವಾನ್ ಮಾಜಿ ಸೈನಿಕರ ಟ್ರಸ್ಟ್, ಕುಶಾಲನಗರ, ಫೀ.ಮಾ.ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಫೋರಂ, ಚೇರಂಬಾಣೆ, ಪೊನ್ನಂಪೇಟೆ, ಮೂರ್ನಾಡು, ಸೋಮವಾರಪೇಟೆ, ಮಡಿಕೇರಿ ಸೇರಿದಂತೆ ವಿವಿಧೆಡೆಗಳ ಕೊಡವ ಸಮಾಜಗಳು, ಸಿಎನ್‍ಸಿ, ಕೊಡವ ಮಕ್ಕಡ ಕೂಟ, ಹಿಂದು ಹಿತರಕ್ಷಣಾ ಸಮಿತಿ ಸಂಘಟನೆಗಳು ಪಾಲ್ಗೊಂಡಿದ್ದವು. ಕರ್ನಾಟಕ ಮಾಜಿ ಸೈನಿಕ ಸಂಘದ ಅಧ್ಯಕ್ಷ ಡಾ.ಶಿವಣ್ಣ, ಕರ್ನಾಟಕ ಮಾಜಿ ಸೈನಿಕ ಸಂಘದ ಕೊಡಗು ಘಟಕದ ಕಾರ್ಯದರ್ಶಿ ಸಿ.ಜಿ.ತಿಮ್ಮಯ್ಯ, ಸಹ ಕಾರ್ಯದರ್ಶಿ ಎಂ.ಕೆ.ನಾಚಪ್ಪ, ಸಂಚಾಲಕರಾದ ನಾಟೋಳಂಡ ಸೋಮಯ್ಯ, ಫೀ.ಮಾ. ಕಾರ್ಯಪ್ಪ, ಜ.ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸುಬ್ಬಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ, ಮಾಳೇಟಿರ ಅಭಿಮನ್ಯು ಕುಮಾರ್, ಬೊಳ್ಳಜಿರ ಅಯ್ಯಪ್ಪ, ಹಂಚೆಟ್ಟೀರ ಮನು ಮುದ್ದಪ್ಪ, ರಾಬಿನ್ ದೇವಯ್ಯ, ಪ್ರವೀಣ್ ಸಿದ್ದಾಪುರ, ಸುರೇಶ್ ಮುತ್ತಪ್ಪ, ಸಂಪತ್ ಕುಮಾರ್, ಕುಕ್ಕೇರ ಅಜಿತ್, ತಂಬುಕುತ್ತೀರ ಮಧು, ಕಾಡ್ಯಮಾಡ ಮೋಟಯ್ಯ ಮತ್ತಿತರರು ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.