
ಸಿದ್ದಾಪುರ ಡಿ.7 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸತೀಶ್‌ನಾರಾಯಣ್ ಆಯ್ಕೆಯಾಗಿದ್ದಾರೆ. ಕೆಪಿಎಸ್ ಶಾಲಾ ಸಭಾಂಗಣದಲ್ಲಿ ಕೆಪಿಎಸ್ ಶಾಲಾ ಉಪಾಧ್ಯಕ್ಷ ಪಿ.ಕೆ.ಮುಸ್ತಫಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ಅಫ್ಸಲ್, ಕೋಶಾಧಿಕಾರಿಯಾಗಿ ಸಂಯುಕ್ತ, ಸಂಘಟನಾ ಕಾರ್ಯದರ್ಶಿಗಳಾಗಿ ಸುಜಾತ, ಬೆಳ್ಳಿಯಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರಾಗಿ ಶುಭ,ವಿನೋದ್, ನಿಶಾ, ಜಿಶಾ ಆಯ್ಕೆಯಾದರು. ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಆಲ್ವರೀಸ್, ಉಪಪ್ರಾಂಶುಪಾಲರಾದ ಅನಿಲ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಭಾರತಿ ಹಾಜರಿದ್ದರು.








