Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ*
  • *ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*
  • *ದೇವಣಗೇರಿ : ಬೀದಿ ನಾಟಕಗಳಿಂದ ಜಾಗೃತಿ ಹೆಚ್ಚಲಿದೆ : ಶಶಿ ಸುಬ್ರಮಣಿ*
  • *ಕೂಡ್ಲೂರು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ವಿಠಲ ಸಾಲಿಯಾನ*
  • *ಸೋಮವಾರಪೇಟೆ : 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ*
  • *ಜೂ.21ರಂದು ಮಡಿಕೇರಿಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ*
  • *ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ*
  • *ಮಡಿಕೇರಿ ಲಯನ್ಸ್ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ : ಜೂ.27ರಂದು ಪದಗ್ರಹಣ*
  • *ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ : ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಒಳ್ಳೆಯ ಪ್ರಜೆಗಳಾಗಿ ರೂಪಿಸಿ : ವೆಂಕಟೇಶ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ : ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಒಳ್ಳೆಯ ಪ್ರಜೆಗಳಾಗಿ ರೂಪಿಸಿ : ವೆಂಕಟೇಶ್ ಸಲಹೆ*

ಡಿಸೆಂಬರ್ 7, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.7 NEWS DESK : ಹದಿನೆಂಟು ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ದೈಹಿಕ ಹಾಗೂ ಭಾಷಾ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ವಯಸ್ಕ ಮಕ್ಕಳಲ್ಲಿ ಕಲಿಕೆಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಜೊತೆಗೆ ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಯಲು ಅವಕಾಶಗಳಿದ್ದು, ಆ ನಿಟ್ಟಿನಲ್ಲಿ ಮನೆಯಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ವೆಂಕಟೇಶ್ ಕರೆ ನೀಡಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಗ್ರಾಮೀಣ ಶಿಕ್ಷಣ ಪಡೆ, ಗ್ರಂಥಾಲಯ, ಅಂಗನವಾಡಿಯಲ್ಲಿ ಬಾಲ ವಿಕಾಸ, ಹೀಗೆ ಹಲವು ಸಮಿತಿಗಳಿದ್ದು, ಮೂರು ತಿಂಗಳಿಗೊಮ್ಮೆಯಾದರೂ ಸಭೆ ನಡೆಸಿ ಮಕ್ಕಳ ಶಿಕ್ಷಣ, ಆರೋಗ್ಯ ಕಡೆ ಗಮನಹರಿಸಿ ವಿಶೇಷ ಆದ್ಯತೆ ನೀಡಬೇಕು ಎಂದರು. ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಸೇರಿದಂತೆ ವಿವಿಧ ಸಮಿತಿ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರಿ ಶಾಲೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಉತ್ತೇಜಿಸಬೇಕು ಎಂದು ಅವರು ಹೇಳಿದರು. ‘ಆಯಾಯ ಕುಟುಂಬದಲ್ಲಿ ತೊಂದರೆಗೆ ಸಿಲುಕಿದಾಗ ಮಾತ್ರ ಮಕ್ಕಳು ಮತ್ತು ಮಹಿಳೆಯರ ಬಗ್ಗೆ ಕಾಳಜಿ ವಹಿಸುತ್ತೇವೆ. ಆದರೆ ಹತ್ತಿರದ ಯಾರಾದರೂ ಸಹ ದೌರ್ಜನ್ಯ, ಶೋಷಣೆ, ನಿಂಧನೆ, ಚಿತ್ರಹಿಂಸೆಗೆ ಒಳಗಾದರೆ ನಮಗೇಕೆ ಎಂದು ಮೂಗು ಮುರಿಯುತ್ತೇವೆ. ಇದು ಸಮಾಜಕ್ಕೆ ಕಂಟಕ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಬೇಸರ ವ್ಯಕ್ತಪಡಿಸಿದರು.’ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬರೂ ಕಾಳಜಿ ವಹಿಸಿದಾಗ ಸಮಾಜದಲ್ಲಿ ಸುಧಾರಣೆ ಮತ್ತು ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳು ಮತ್ತು ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು ಎಂದು ವಿವರಿಸಿದರು. ‘ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಕಾನೂನು ಕಾಯ್ದೆಗಳು ಜಾರಿಗೊಂಡಿದ್ದರೂ ಸಹ ಮಹಿಳೆಯರು ಮತ್ತು ಮಕ್ಕಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುವುದು ಕಡಿಮೆಯಾಗಿಲ್ಲ. ಆದ್ದರಿಂದ ವ್ಯವಸ್ಥೆಯನ್ನು ಸರಿಪಡಿಸಲು ಯುವಜನರಲ್ಲಿ ಬಾಲ್ಯ ವ್ಯವಸ್ಥೆಯಲ್ಲಿಯೇ ಮೌಲ್ಯಯುತ ಶಿಕ್ಷಣ ಕಲಿತಿರಬೇಕು. ಅಂತಃಕರಣ ಮಾನವೀಯತೆ ಇದ್ದಾಗ ಮಾತ್ರ ಸಮಾಜದಲ್ಲಿ ಉತ್ತಮ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶುಶ್ರೂಷಕರ ಕ್ಷೇತ್ರದಲ್ಲಿ ದುಡಿಯುತ್ತಿರುವವರ ಪಾತ್ರ ಹೆಚ್ಚಿನದ್ದಾಗಿದೆ ಎಂದು ವಿವರಿಸಿದರು.’ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಹೇಗಿದೆ ಎಂದು ಅರಿತುಕೊಳ್ಳಬೇಕು. ತೊಂದರೆಗೆ ಸಿಲುಕಿದವರನ್ನು ರಕ್ಷಿಸಬೇಕು. ಯಾವುದೇ ಕಾರಣಕ್ಕೂ ಒತ್ತಡ ನಿರ್ಮಾಣ ಮಾಡಬಾರದು ಎಂದರು. ಭಾರತ ಸರ್ಕಾರವು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಆ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸುಸ್ಥಿರ ಅಭಿವೃದ್ಧಿ ಮಾನದಂಡಗಳ ಕುರಿತು ಹೇಳಲಾಗಿದ್ದು, 2030 ರ ವೇಳೆಗೆ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ ಎಂದರು. ಹರೆಯದ ವಯಸ್ಸಿನಲ್ಲಿ ನಿಯಂತ್ರಣ ಅತ್ಯಗತ್ಯ. ಬದುಕಿನ ಜೀವನ ಒಂದು ರೀತಿ ಕಠಿಣವಾಗಿದ್ದು, ಮಕ್ಕಳು ದುಶ್ಚಟಗಳಿಗೆ ಬಲಯಾಗದೆ ಮೌಲ್ಯಯುತ ಬದುಕು ನಡೆಸಬೇಕು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟು ಮಾಡಿಕೊಳ್ಳಬಾರದು. ಮೋಸ, ವಂಚನೆಗೆ, ಆಸೆ, ಆಕಾಂಕ್ಷೆಗಳಿಗೆ ಬಲಿಯಾಗದೆ ಪ್ರಬುದ್ಧರಾಗಿ ಯೋಚಿಸಬೇಕು ಎಂದರು. ಮಕ್ಕಳು ದೌರ್ಜನ್ಯಕ್ಕೆ ಒಳಗಾಗುವುದನ್ನು ತಡೆಯಬೇಕು. ಮಾಹಿತಿ ಶಿಕ್ಷಣ ನೀಡಬೇಕು. ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ವೆಂಕಟೇಶ್ ವಿವರಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿ, ಸಮಾಜದಲ್ಲಿ ಬಾಲ್ಯ ವಿವಾಹಕ್ಕೆ ಜವಾಬ್ದಾರಿ ಕಳೆದುಕೊಳ್ಳುವುದು, ಮೂಡನಂಬಿಕೆ, ಅಜ್ಞಾನ ಮತ್ತಿತರವು ಕಾರಣವಾಗಿದೆ. ಆದ್ದರಿಂದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದರು. ಬಾಲ್ಯ ವಿವಾಹ ಮಾಡಿದ್ದಲ್ಲಿ ಹೆಣ್ಣು ಮಕ್ಕಳು ಬಾಲ್ಯವನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಮುಂದಾಗಬಾರದು ಎಂದರು. ಮಹಿಳೆಯರು ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಮುಕ್ತವಾಗಿ ಚರ್ಚಿಸುವಂತಾಗಬೇಕು. ಆಟವಾಡುವ ವಯಸ್ಸಿನಲ್ಲಿ ಮಕ್ಕಳಿಗೆ ಮದುವೆ ಮಾಡಬಾರದು. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಆಸೆ, ಆಕಾಂಕ್ಷೆಗಳಿಗೆ ಸಿಲುಕಬಾರದು ಎಂದು ಸಲಹೆ ನೀಡಿದರು. ‘ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ನಿರ್ವಹಿಸುವ ಕೆಲಸವನ್ನು ಪ್ರೀತಿಯಿಂದ ಮಾಡಬೇಕು. ಇದರಿಂದ ಒಳ್ಳೆಯ ಫಲಿತಾಂಶ ದೊರೆಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಅಭಿಪ್ರಾಯಪಟ್ಟರು.’ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ ಮಾತನಾಡಿ, ಮಕ್ಕಳ ರಕ್ಷಣಾ ಘಟಕ ವತಿಯಿಂದ ಪ್ರಮುಖವಾಗಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಪುನರ್‍ವಸತಿ ಕಲ್ಪಿಸುವುದು, ಆರೋಗ್ಯ ಶಿಕ್ಷಣ ನೀಡುವುದು ಮತ್ತಿತರ ಕಾರ್ಯಕ್ರಮಗಳಾಗಿದೆ ಎಂದರು. ‘ಅನಾದಿ ಕಾಲದಿಂದಲೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಶೋಷಣೆ ನಡೆಯುತ್ತಲೇ ಬಂದಿದೆ. ಮಹಿಳೆಯರು ಮತ್ತು ಮಕ್ಕಳನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಮಹಿಳೆಯರು ಕುಟುಂಬದ ಸುಖ, ದುಃಖ, ಸಂತಸದಲ್ಲಿ ಪಾಲ್ಗೊಂಡರೂ ಸಹ ಶೋಷಣೆ ತಪ್ಪುವುದಿಲ್ಲ, ಹಲವು ಸಂಪ್ರದಾಯ ಆಚರಣೆಗೆ ಒಳಗಾಗಿ ಪದೇ ಪದೇ ನಿಂದನೆಗೆ ಒಳಗಾಗುವುದು ಕಂಡು ಬರುತ್ತಿದೆ ಎಂದರು.’ ‘ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಹಾಡಿಗಳು ಮತ್ತು ಲೈನ್‍ಮನೆಗಳಲ್ಲಿ ಕಂಡುಬರುತ್ತಿವೆ. ಹಾಗೆಯೇ ಜಿಲ್ಲೆಯಲ್ಲಿ ಪ್ರತಿ ತಿಂಗಳು 50 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಕೆಟ್ಟ ಪದ್ಧತಿಯನ್ನು ತೊಡೆದುಹಾಕಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು. ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ ನೋಡಿಕೊಂಡು ಸುಮ್ಮನಿರಬಾರದು. ಅನಿಷ್ಠ ಪದ್ಧತಿ ಹೋಗಲಾಡಿಸಲು ಎಲ್ಲರೂ ಪ್ರಯತ್ನಿಸಬೇಕು. ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಹೊಣೆಗಾರಿಕೆ ಇದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಈರಸ್ವಾಮಿ ಒತ್ತಿ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎ.ಎಂ.ಸೂರಜ್, ಮಕ್ಕಳ ವಿಶೇಷ ಪೊಲೀಸ್ ಘಟಕದ ಎಂ.ಬಿ.ಸುಮತಿ, ಅವರು ಮಾತನಾಡಿದರು. ಪೊಲೀಸ್ ಉಪಾಧೀಕ್ಷಕರಾದ ರವಿ ಇತರರು ಇದ್ದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕ ಕಾಲೇಜಿನ ಪ್ರಾಂಶುಪಾಲರಾದ ಎ.ಕೆ.ಮಂಜುಳ ಸ್ವಾಗತಿಸಿದರು. ವಿದ್ಯಾರ್ಥಿನೀಯರು ಪ್ರಾರ್ಥಿಸಿದರು. ಸಹ ಪ್ರಾಧ್ಯಾಪಕರಾದ ಕೆ.ಪಿ.ಗುರುಪಾದ ಅವರು ನಿರೂಪಿಸಿದರು. ಎಸ್.ಎನ್.ರಂಜಿನಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ*

ಜೂನ್ 11, 2026

*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*

ಜೂನ್ 11, 2026

*ದೇವಣಗೇರಿ : ಬೀದಿ ನಾಟಕಗಳಿಂದ ಜಾಗೃತಿ ಹೆಚ್ಚಲಿದೆ : ಶಶಿ ಸುಬ್ರಮಣಿ*

ಜೂನ್ 11, 2026

*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*

ಜೂನ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.11 NEWS DESK : ದೇಶಭಕ್ತಿ, ಸಮಗ್ರತೆಯ ಪರಿಕಲ್ಪನೆ, ನಾಯಕತ್ವದ ಗುಣಗಳೊಂದಿಗೆ, ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ಯುವ ಸಮೂಹದಲ್ಲಿ…

*ದೇವಣಗೇರಿ : ಬೀದಿ ನಾಟಕಗಳಿಂದ ಜಾಗೃತಿ ಹೆಚ್ಚಲಿದೆ : ಶಶಿ ಸುಬ್ರಮಣಿ*

ಜೂನ್ 11, 2026

*ಕೂಡ್ಲೂರು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ವಿಠಲ ಸಾಲಿಯಾನ*

ಜೂನ್ 11, 2026

*ಸೋಮವಾರಪೇಟೆ : 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ*

ಜೂನ್ 11, 2026

*ಜೂ.21ರಂದು ಮಡಿಕೇರಿಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 11, 2026

*ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ*

ಜೂನ್ 11, 2026

*ಮಡಿಕೇರಿ ಲಯನ್ಸ್ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ : ಜೂ.27ರಂದು ಪದಗ್ರಹಣ*

ಜೂನ್ 11, 2026

*ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಜೂನ್ 11, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.