Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ವಿಧಿವಶ : ರಾಜ್ಯದಲ್ಲಿ 3 ದಿನ ಶೋಕಾಚರಣೆ : ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

*ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ವಿಧಿವಶ : ರಾಜ್ಯದಲ್ಲಿ 3 ದಿನ ಶೋಕಾಚರಣೆ : ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ*

ಡಿಸೆಂಬರ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಡಿ.10 NEWS DESK : ಕರ್ನಾಟಕ ಕಂಡ ಅಪರೂಪದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್‌ಎಂ ಕೃಷ್ಣ ( 92) ವಿಧಿವಶರಾಗಿದ್ದಾರೆ. ಮಾಜಿ ಕೇಂದ್ರ ಸಚಿವರೂ ಆಗಿದ್ದ ಅವರು ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ನಸುಕಿನ 2.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸದಾಶಿವನಗರದ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ (ಡಿ.11) ಅಂತ್ಯಕ್ರಿಯೆ ನಡೆಯಲಿದೆ. ಎಸ್‌ಎಂ ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ರಾಜ್ಯದಲ್ಲಿ 3 ದಿನ ಶೋಕಾಚರಣೆ :: ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಡ್ಯ ಹೈದನ ಅಮೆರಿಕ ಪದವಿ :: ಕರ್ನಾಟಕದ  ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

ರಾಜಕೀಯ ಪ್ರವೇಶ :: 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು. 1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್​​ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು. ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್​​ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್​ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್​ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.