Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವೀರ ಸೇನಾನಿಗಳಿಗೆ ಅಗೌರವ ಪ್ರಕರಣ : ಗಡಿಪಾರಿಗೆ ಆಗ್ರಹಿಸಿ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕೊಡಗು ಬಂದ್*
ಇತ್ತೀಚಿನ ಸುದ್ದಿಗಳು

*ವೀರ ಸೇನಾನಿಗಳಿಗೆ ಅಗೌರವ ಪ್ರಕರಣ : ಗಡಿಪಾರಿಗೆ ಆಗ್ರಹಿಸಿ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕೊಡಗು ಬಂದ್*

December 10, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಡಿ.10 : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ. ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ. ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು ರೂಪಿಸಲಾಗುವುದು ಎಂದರು. ಈ ಸಂಘಟನೆಯ ಮೊದಲ ಕಾರ್ಯಕ್ರಮವಾಗಿ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲ ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಡಿ.12 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಕೊಡಗು ಬಂದ್ ಗೆ ಕರೆ ನೀಡುತ್ತಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಬಂದ್ ಆಚರಿಸುವ ಮೂಲಕ ಜಿಲ್ಲೆಯ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ಮುಂದೆಂದೂ ಆಗಬಾರದು ಎನ್ನುವ ಸಂದೇಶವನ್ನು ನೀಡುತ್ತಿದ್ದೇವೆ. ಜಿಲ್ಲೆಯ ವಿವಿಧ ಜಾತಿಯ ಸಂಘಟನೆಗಳು, ಸಾರ್ವಜನಿಕ ಸಂಘ ಸಂಸ್ಥೆಗಳು, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್, ಜಿಲ್ಲಾ ಆಟೋ ಚಾಲಕರ ಸಂಘ, ಮಾಜಿ ಸೈನಿಕರ ಸಂಘ, ವಿವಿಧ ಧಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಕೊಡಗು ಬಂದ್ ಸಂದರ್ಭ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸರಕಾರಕ್ಕೆ ಈ ಮೂಲಕ ಮನವಿ ಮಾಡುತ್ತಿದ್ದೇವೆ. ಕೊಡಗು ಜಿಲ್ಲಾ ಬಸ್ ಮಾಲೀಕರ ಸಂಘ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಲಾರಿ ಮಾಲೀಕರು ಮತ್ತು ಚಾಲಕರ ಸಂಘ, ಕಾರು ಮಾಲೀಕರು ಮತ್ತು ಚಾಲಕರ ಸಂಘ ಸೇರಿದಂತೆ ಎಲ್ಲಾ ಸಾರ್ವಜನಿಕ ಸಂಪರ್ಕ ವಾಹನಗಳ ಸಂಘಟನೆಗಳನ್ನು, ಜಿಲ್ಲೆಯ ಎಲ್ಲಾ ಅಂಗಡಿ ವಹಿವಾಟು ಮಾಲೀಕರನ್ನು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರನ್ನು, ಶಿಕ್ಷಣ ಸಂಸ್ಥೆಗಳ ಪ್ರಮುಖರನ್ನು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು, ಹಾಗೂ ಸಾರ್ವಜನಿಕರನ್ನು ಸಾಂಕೇತಿಕ ಬಂದ್ ಗೆ ಬೆಂಬಲ ನೀಡುವಂತೆ ಕೋರುವುದಾಗಿ ರಾಜೀವ್ ಬೋಪಯ್ಯ ಹೇಳಿದರು. ಈ ಬಂದ್ ವೀರ ಸೇನಾನಿಗಳಿಗೆ ಗೌರವ ಸೂಚಕವೂ ಆಗಿದ್ದು, ಸರಕಾರದ ಗಮನ ಸೆಳೆಯುವ ಪ್ರಯತ್ನವೂ ಆಗಿದೆ. ವೀರ ಸೇನಾನಿಗಳನ್ನು ಅವಮಾನ ಮಾಡಿದ ವ್ಯಕ್ತಿಯ ವಿರುದ್ಧ ಒಕ್ಕೂಟ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.
::: ಸೌಹಾರ್ದತೆ ಸ್ಥಾಪನೆಯಾಗಬೇಕು :::
ಕೊಡಗಿನ ಎಲ್ಲಾ ಸಂಘಟನೆಗಳನ್ನು ಒಗ್ಗೂಡಿಸಿ ಸಾಮಾಜಿಕ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಒಕ್ಕೂಟ ಕಾರ್ಯನಿರ್ವಹಿಸಲಿದೆ. ಜಾತಿ ಮತ್ತು ಮತಗಳ ನಡುವಿನ ವೈಮನಸ್ಯ ದೂರವಾಗಬೇಕು, ಕೋಮು ಸೌಹಾರ್ದತೆ ಸ್ಥಾಪನೆಯಾಗಬೇಕು, ಪ್ರೀತಿ, ವಾತ್ಸಲ್ಯ, ನಂಬಿಕೆ, ಸಾಮರಸ್ಯದ ಬದುಕು ಕಂಡು ಬರಬೇಕು ಎಂಬ ನಿಟ್ಟಿನಲ್ಲಿ ಎಲ್ಲಾ ಜಾತಿ ಮತ ಧರ್ಮದವರನ್ನು ಒಂದೆಡೆ ಸೇರಿಸಿ ಕೊಡಗು ಸರ್ವ ಜನಾಂಗದ ಒಕ್ಕೂಟವನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮಗಳ ವಿರುದ್ಧ ಯಾರೇ ಆದರೂ ಸಾರ್ವಜನಿಕವಾಗಿ ನಿಂದಿಸಿದರೆ, ಮಾಧ್ಯಮ ಹೇಳಿಕೆಗಳನ್ನು ನೀಡಿದರೆ, ಸಾಮಾಜಿಕ ಜಾಲತಾಣವನ್ನು ಬಳಸಿ ಶಾಂತಿ ಕದಡುವ ಪ್ರಯತ್ನ ಮಾಡಿದರೆ ಇವುಗಳ ವಿರುದ್ಧ ಒಕ್ಕೂಟ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಉತ್ತಮ ರೂಪರೇಷೆಯನ್ನು ಕಲ್ಪಿಸಿ ಈ ಸಂಘಟನೆಯನ್ನು ಬಲಿಷ್ಠಗೊಳಿಸಲು ಸರ್ವ ಜನಾಂಗಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜೀವ್ ಬೋಪಯ್ಯ ತಿಳಿಸಿದರು.
ಚೇಂಬರ್ ಆಫ್ ಕಾಮರ್ಸ್ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಬಂಟರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ರೈ, ಹೊಟೇಲ್ ಅಸೋಸಿಯೇಷನ್ ಉಪಾಧ್ಯಕ್ಷ ಜಾಹಿರ್, ಆಟೋ ಮಾಲೀಕರ, ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ ಹಾಗೂ ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ನಿರ್ದೇಶಕ ಪ್ರಭು ಪೂಣಚ್ಚ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದು ವೀರ ಸೇನಾನಿಗಳಿಗೆ ಅಗೌರವ ತೋರಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಬಿ.ಜಿ.ನಟರಾಜ್ ಬೋರ್ಕರ್ ರಿಗೆ ಭಾರತ ಭೂಷಣ ಪ್ರಶಸ್ತಿ ಪ್ರದಾನ*
Next Article *ಚೆರಿಯಪರಂಬುವಿನಲ್ಲಿ ಕೊಡಗು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಡಿ.11 ರಿಂದ ನೋಂದಣಿ ಆರಂಭ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.