
ಮಡಿಕೇರಿ ಡಿ.11 NEWS DESK : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಆರು ಗಂಟೆಗಳ ಕೊಡಗು ಬಂದ್ ಗೆ ಕೊಡವ ಕೂಟಾಳಿಯಡ ಕೂಟ ಬೆಂಬಲ ನೀಡಲಿದೆ ಎಂದು ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.









