Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗಡಿಪಾರಿಗೆ ಆಗ್ರಹಿಸಿ ಕೊಡಗು ಬಂದ್, ಪ್ರತಿಭಟನೆ : ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು

*ಗಡಿಪಾರಿಗೆ ಆಗ್ರಹಿಸಿ ಕೊಡಗು ಬಂದ್, ಪ್ರತಿಭಟನೆ : ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ*

December 12, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.12 NEWS DESK : ವ್ಯಕ್ತಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿದ್ದ ಆರು ಗಂಟೆಗಳ ಕೊಡಗು ಬಂದ್ ಗೆ ಭಾಗಶಃ ಸ್ಪಂದನ ದೊರಕಿತು. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು, ಖಾಸಗಿ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಹೊಟೇಲ್ ಸೇರಿದಂತೆ ವಿವಿಧ ವ್ಯಾಪಾರೋದ್ಯಮಗಳು ಬಂದ್ ಆಗಿದ್ದವು. ಬೆರಳೆಣಿಕೆಯಷ್ಟು ಅಂಗಡಿ ಮತ್ತು ಹೊಟೇಲ್ ಗಳು ತೆರೆದಿದ್ದು, ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸಿದವು. ವಾಹನಗಳು, ಸರಕಾರಿ ಬಸ್ ಗಳು ಎಂದಿನOತೆ ಸಂಚರಿಸಿದವು. ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿತ್ತು. ಶೇ.50 ರಷ್ಟು ಆಟೋರಿಕ್ಷಾಗಳು ಸಂಚರಿಸಿದವು. ಸರಕಾರಿ ಕಚೇರಿಗಳು ಎಂದಿನOತೆ ಕಾರ್ಯನಿರ್ವಹಿಸಿದವು. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು ಮೊದಲಾದೆಡೆ ಬಂದ್ ಗೆ ಸ್ಪಂದನೆ ದೊರೆಯಿತು. ಗುರುವಾರ ಬೆಳಿಗ್ಗೆ 6 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿತ್ತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಹಾಲು, ಹಣ್ಣು ಹಂಪಲು, ಔಷಧಿ ಅಂಗಡಿಗಳನ್ನು ಹೊರತು ಪಡಿಸಿದಂತೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು.  ಜಿಲ್ಲಾಡಳಿತಕ್ಕೆ ಮನವಿ :::
ಕೊಡಗು ಸರ್ವ ಜನಾಂಗಗಳ ಒಕ್ಕೂಟದ ಸಂಚಾಲಕ ರಾಜೀವ್ ಬೋಪಯ್ಯ ಅವರ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ರಾಜೀವ್ ಬೋಪಯ್ಯ, ಇಡೀ ವಿಶ್ವದ ಗೌರವಾದರಗಳಿಗೆ ಪಾತ್ರರಾಗಿರುವ ಕೊಡಗಿನ ಹೆಮ್ಮೆಯ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜ.ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವುದು ಖಂಡನೀಯ. ಇದಕ್ಕೆ ಕಾರಣರಾದವರನ್ನು ಗಡಿಪಾರು ಮಾಡಬೇಕು ಮತ್ತು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಇದಕ್ಕೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಕುಟ್ಟದಿಂದ ಮಡಿಕೇರಿಯವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳುವುದಾಗಿ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಂತರ ಮೆರವಣಿಗೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿದ ಒಕ್ಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಸಮಾಜ, ಸಂಘ ಸಂಸ್ಥೆಗಳ ಪ್ರಮುಖರು ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವOಡ ಪಿ. ಮುತ್ತಪ್ಪ, ಮಾಜಿ ಸೈನಿಕ ಪ್ಯಾರಾಟ್ರೂಪರ್ ಬೊಟ್ಟಂಗಡ ಜಪ್ಪು, ಕೊಡಗು ಏಕೀಕರಣ ರಂಗದ ತಮ್ಮು ಪೂವಯ್ಯ, ರಾಬಿನ್ ದೇವಯ್ಯ, ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ದಿನೇಶ್ ಕಾರ್ಯಪ್ಪ, ಸುಲೆೆಮಾನ್, ನಜೀರ್, ಶರತ್, ಜಗದೀಶ್ ರೈ, ಕುಪ್ಪಂಡ ವಸಂತ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ*
Next Article *ವಿರಾಜಪೇಟೆ ಗೋಜೂ ರಿಯೊ ಕರಾಟೆ ತರಬೇತಿ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.