Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.29 ರಂದು ವಿಶ್ವಮಾನವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.29 ರಂದು ವಿಶ್ವಮಾನವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ* 

ಡಿಸೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 NEWS DESK : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಡಿ.29 ರಂದು ವಿಶ್ವಮಾನವ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಈ ಸಂಬಂಧ ನಗರದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕುವೆಂಪು ಅವರ ಕುರಿತು ಉಪನ್ಯಾಸ, ಕವನವಾಚನ, ಗಮಕ ವಾಚನ ಏರ್ಪಡಿಸುವುದು, ಗೀತಾಗಾಯನ ಮತ್ತಿತರ ಕಾರ್ಯಕ್ರಮವನ್ನು ಆಚರಿಸುವುದರ ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳನ್ನು ಆಹ್ವಾನಿಸುವುದರ ಜೊತೆಗೆ ಹಲವು ಕಾರ್ಯಕ್ರಮ ಆಯೋಜಿಸುವ ಸಂಬಂಧ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಸಂದೇಶಗಳನ್ನು ಯುವಜನರಿಗೆ ತಲುಪಿಸುವಲ್ಲಿ ಶ್ರಮಿಸಬೇಕು. ಕನ್ನಡ ನಾಡು ನುಡಿಗೆ ಕುವೆಂಪು ಅವರ ಕೊಡುಗೆ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ಅವರು ಸಲಹೆ ನೀಡಿದರು. ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ಹೀಗೆ ವಿವಿಧ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಂತೆ ಟಿ.ಪಿ.ರಮೇಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕುವೆಂಪು ಅವರ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸುವಂತಾಗಬೇಕು. ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ ನಗರದ ಡಿಸಿಸಿ ಬ್ಯಾಂಕ್ ಬಳಿ ಇರುವ ಕುವೆಂಪು ಅವರ ಪುತ್ಥಳಿಯನ್ನು ಸ್ವಚ್ಛಗೊಳಿಸಬೇಕು. ಸುತ್ತಮುತ್ತ ಪರಿಸರವನ್ನು ಶುಚಿ ಮಾಡಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಮಾತನಾಡಿ, ಕುವೆಂಪು ಅವರ ಸಂದೇಶಗಳು ಯುವಜನರಿಗೆ ತಲುಪಬೇಕು. ಕನ್ನಡ ನಾಡು ನುಡಿಗೆ ಕುವೆಂಪು ಅವರು ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸಲಹೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ ಸರ್ಕಾರದ ನಿರ್ದೇಶನದಂತೆ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜೊತೆ ಎಲ್ಲರೂ ಸಹಕರಿಸುವಂತೆ ಕೋರಿದರು. ವಿಶ್ವ ಮಾನವ ದಿನಾಚರಣೆ ಪ್ರಯುಕ್ತ ಉಪನ್ಯಾಸ, ಕವನ ವಾಚನ, ಗಮಕ ವಾಚನ, ಹಾಡುಗಾರಿಕೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.