Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆ*

ಡಿಸೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಡಿ.12 : ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಫರ್ಟಿಲಿಟಿ‌ ಸೆಂಟರ್ ವತಿಯಿಂದ ಕುಶಾಲನಗರದಲ್ಲಿ ಔಟ್ರೀಚ್ ಕ್ಲಿನಿಕ್ ಸ್ಥಾಪಿಸುವ ಮೂಲಕ ಶೀಘ್ರದಲ್ಲೇ ಸೇವೆ ಒದಗಿಸಲಾಗುವುದು ಎಂದು ಕಾಂಗರೂ ಕೇರ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ನ ಫೌಂಡರ್ ಹಾಗೂ ಸಿಇಒ ಕೂಡ ಆದ ಮಕ್ಕಳ ತಜ್ಞ ಡಾ.ಶೇಖರ್ ಸುಬ್ಬಯ್ಯ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಮಹಿಳಾ ಮತ್ತು ಮಕ್ಕಳ ಚಿಕಿತ್ಸೆಗಾಗಿ ಸ್ಥಾಪಿಸಿರುವ ಆಸ್ಪತ್ರೆ ಬೆಂಗಳೂರು, ರಾಮನಗರ ಹಾಗೂ‌ ಮೈಸೂರಿನಲ್ಲಿ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಮೈಸೂರು ಸುತ್ತಮುತ್ತಲ ವ್ಯಾಪ್ತಿಯಲ್ಲಿ ಸೇವೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿ ಪ್ಲೆಕ್ಸ್ ಡಯಗ್ನಾಸ್ಟಿಕ್ ಲ್ಯಾಬ್ ಕೇಂದ್ರದಲ್ಲಿ ಔಟ್ ರೀಚ್ ಕ್ಲಿನಿಕ್ ಮುಂದಿನ ವಾರದಿಂದ ಕಾರ್ಯಾರಂಭ‌ ಮಾಡಲಿದೆ. ಕೊಡಗು ಜಿಲ್ಲೆಯ ವಿವಿಧೆಡೆಗಳಿಂದ ಹಾಗೂ ಗಡಿಭಾಗದಿಂದ ಮೈಸೂರಿಗೆ ಆಗಮಿಸುವವರಿಗೆ ಕುಶಾಲನಗರದಲ್ಲಿ ಔಟ್ ರೀಚ್ ಕ್ಲಿನಿಕ್ ಸ್ಥಾಪನೆಯಿಂದ ಅತ್ಯಂತ ಅನುಕೂಲ ಒದಗಲಿದೆ. ಮೈಸೂರಿನಿಂದ ತಜ್ಞ ವೈದ್ಯರು ತಪಾಸಣೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ. ಕೊಡಗು ಜಿಲ್ಲಾ ಮಡಿಕೇರಿ ಕೇಂದ್ರದಲ್ಲಿ ಕೂಡ ಕಾಂಗರೂ ಕೇರ್ ಆಸ್ಪತ್ರೆ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ ಎಂದು ಅವರು ತಿಳಿಸಿದರು. ಆಸ್ಪತ್ರೆಯ ಸ್ತ್ರೀರೋಗ, ಫಲವತ್ತತೆ ತಜ್ಞೆ ಡಾ.ಹೆಚ್.ಕೆ.ಸ್ವಾತಿ ಮಾತನಾಡಿ, ಇಂದಿನ ಆಧುನಿಕ, ಒತ್ತಡದ‌ ಜೀವನ ಶೈಲಿ, ಯೌವನದಲ್ಲಿನ ಕೆಲವು ದುಶ್ಚಟಗಳಿಂದ ಮಹಿಳೆಯರಲ್ಲಿ ಗರ್ಭಧಾರಣೆ ಸಮಸ್ಯೆ, ಬಂಜೆತನ ಪ್ರಕರಣ ಹೆಚ್ಚಾಗುತ್ತಿದೆ. ಮಹಿಳೆ ಹಾಗೂ ಪುರುಷರಲ್ಲಿ ಸಮಾನ‌ ಪ್ರಮಾಣದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳತೊಡಗಿವೆ. ಇದಕ್ಕೆ ಕಾರಣಗಳನ್ನು ಪತ್ತೆಹಚ್ಚಿ ಸ್ವಾಭಾವಿಕವಾಗಿಯೇ ಗರ್ಭಧಾರಣೆಗೆ ಅವಕಾಶಗಳನ್ನು ಪರಿಶೀಲಿಸಿ ಅಗತ್ಯ ಬಿದ್ದಲ್ಲಿ ಐವಿಎಫ್, ಐಸಿಎಸ್ ಐ, ಐ ಯು ಐ ನಂತಹ ಹೆಚ್ಚಿನ ಆಧುನಿಕ ಚಿಕಿತ್ಸೆಗಳ‌ ಮೊರೆ ಹೋಗಲು ಸೂಚಿಸಲಾಗುತ್ತದೆ. ಕೊಡಗು ಜಿಲ್ಲೆಯಿಂದ ಈಗಾಗಲೆ ಮೈಸೂರಿಗೆ ಹಲವು ಮಂದಿ ಸಮಸ್ಯೆಗಳ‌ ನಿವಾರಣೆಗೆ ಭೇಟಿ ನೀಡುತ್ತಿದ್ದು ಕುಶಾಲನಗರದಲ್ಲಿಯೇ ಈ ಸೇವೆ ಆರಂಭಿಸುವ  ಮೂಲಕ ಅಗತ್ಯ ಕೌಂಸಲಿಂಗ್, ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದರು. ಕುಶಾಲನಗರ ಮೆಡಿ ಪ್ಲೆಕ್ಸ್ ಕೇಂದ್ರದ ವೈದ್ಯೆ ಡಾ. ದಿವ್ಯ ಕರುಂಬಯ್ಯ ಮಾತನಾಡಿ, ದೂರದ ಮೈಸೂರಿಗೆ ಕೊಡಗಿನಿಂದ ತೆರಳುವವರಿಗಾಗಿ ಕುಶಾಲನಗರದಲ್ಲಿ ಸೇವೆ ಒದಗಿಸಲಾಗುತ್ತಿದ್ದು ಅಗತ್ಯವಿರುವವರು ಇದರ ಸದುಪಯೋಗ ಪಡೆದುಕೊಳ್ಳಲು ಸೂಚಿಸಿದರು. ಇದೇ ಸಂದರ್ಭ ಕಾಂಗರೂ ಆಸ್ಪತ್ರೆಯ ಇನ್ ಕ್ಯೂಬೇಟರ್ ನ್ಯೂ ಬಾರ್ನ್ ಐಸಿಯು ಸೌಲಭ್ಯದ ಬಗ್ಗೆ ಡಾ.ಶೇಖರ್ ಸುಬ್ಬಯ್ಯ ವಿವರ ನೀಡಿದರು. ನವಜಾತ ಶಿಶುಗಳ ಚಿಕಿತ್ಸೆ, ರವಾನೆಗೆ ಸಹಕಾರಿಯಾಗುವ ಅತ್ಯಾಧುನಿಕ ಇನ್ ಕ್ಯೂಬೇಟರ್ ನ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಜೂನ್ 11, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.10 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ…

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.