Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿಂದುಳಿದ ವರ್ಗಗಳ ಕಲ್ಯಾಣ ನಿಗಮಗಳಿಗೆ ಅನುದಾನ ನೀಡಲು ಆಗ್ರಹ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಿಂದುಳಿದ ವರ್ಗಗಳ ಕಲ್ಯಾಣ ನಿಗಮಗಳಿಗೆ ಅನುದಾನ ನೀಡಲು ಆಗ್ರಹ : ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ*

ಡಿಸೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.13 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದ ಪ್ರತಿಭನಾಕಾರರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಹಿಂದುಳಿದ ಸಮೂಹಗಳ ನೆರವಿನಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪ್ರಸ್ತುತ ಅವರನ್ನೆ ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಘೋಷಿಸಿರುವ ಭಾಗ್ಯಗಳನ್ನು ಪೂರೈಸುವ ಏಕಮಾತ್ರ ಉದ್ದೇಶದಿಂದ ವಿವಿಧ ನಿಗಮಗಳ ಹಣವನ್ನು ‘ಭಾಗ್ಯ’ಗಳಿಗೆ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ತಾವೇ ಘೋಷಿಸಿದ ಭಾಗ್ಯಗಳಿಗೆ ಅಗತ್ಯ ಹಣವನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೆಂದು ವ್ಯಂಗ್ಯವಾಡಿದ ಅವರು, ವಾಲ್ಮೀಕಿ ನಿಗಮದ ಭ್ರಷ್ಟಾಚಾರದಿಂದ ಸಚಿವರೊಬ್ಬರು ಜೈಲಿಗೆ ಹೋಗಿ ಬರುವಂತಾಗಿದೆ. ಮುಡಾ ಹಗರಣದ ಆರೋಪಗಳು ತಮ್ಮ ವಿರುದ್ಧ ತಿರುಗುತ್ತಿರುವಂತೆಯೇ 14 ನಿವೇಶನಗಳನ್ನು ಏಕಾಏಕಿ ಹಿಂದಕ್ಕೆ ನೀಡಿದ ಬೆಳವಣಿಗೆಯೂ ನಡೆದಿದೆ ಎಂದು ಟೀಕಿಸಿದರು. ವಕ್ಫ್‌ಗೆ ಸೇರಿರುವ ಹಾಗೂ ಅದನ್ನು ಕಬಳಿಸಿರುವವರ ಆಸ್ತಿಯನ್ನು ಪತ್ತೆ ಮಾಡಿ ತೆರವುಗೊಳಿಸಲಿ. ಅನಗತ್ಯವಾಗಿ ಎಷ್ಟೋ ವರ್ಷಗಳಿಂದ ಕೃಷಿಮಾಡಿಕೊಂಡು ಬಂದ ಭೂಮಿಯನ್ನು, ಮಠ ಮಾನ್ಯಗಳ ಆಸ್ತಿಯನ್ನು ವಕ್ಫ್ ಆಸ್ತಿಯೆಂದು ಪಡೆಯಲು ಮುಂದಾದಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಸೇರಿದ ವಾಲ್ಮೀಕಿ, ಕಾಡುಗೊಲ್ಲರು ಸೇರಿದಂತೆ ವಿವಿಧ ಸಮೂಹಗಳ ಅಭಿವೃದ್ಧಿಗೆ ಇರುವ ನಿಗಮ ಮಂಡಳಿಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಒದಗಿಸುವಲ್ಲಿ ತಾರತಮ್ಯ ಧೋರಣೆಯನ್ನು ತಳೆದಿದೆ. ಹಿಂದೆ ನಿಗಮ ಮಂಡಳಿಗಳಿಗೆ 576 ಕೋಟಿ ಅನುದಾನವನ್ನು ಒದಗಿಸಲಾಗಿತ್ತು. ಕಳೆದ 2023-24ನೇ ಸಾಲಿನಲ್ಲಿ ಕಾಂಗ್ರೆಸ್ ಸರ್ಕಾರ 340 ಕೊಟಿ ರೂ.ಗಳನ್ನಷ್ಟೆ ನೀಡಿದ್ದು, ಇದರಲ್ಲಿ ಕೇವಲ 170 ಕೋಟಿಯಷ್ಟು ಬಳಕೆಯಾಗಿದೆಯೆಂದು ಆರೋಪಿಸಿದರು. ಗಂಗಾಕಲ್ಯಾಣ ಯೋಜನೆಯಡಿ 2 ಹೆಕ್ಟೇರ್ ಒಳಗಿನ ಬಡ ರೈತರಿಗೆ ಅಗತ್ಯ ನೆರವು ಒದಗಿಸಲು ಅರ್ಜಿಗಳನ್ನು ಸ್ವೀಕರಿಸಲಾಗಿದ್ದರು, ನೆರವನ್ನು ಬಿಡುಗಡೆ ಮಾಡಿಲ್ಲವೆಂದು ಟೀಕಿಸಿದರು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಮಾತನಾಡಿ ಬಜೆಟ್‍ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದರಿಂದ ಹಿಂದುಳಿದ, ಅತೀ ಹಿಂದುಳಿದ, ಅಲೆಮಾರಿ ಸಮುದಾಯಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಇತರ ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದರು. ಈ ಹಿಂದಿನ ಸರಕಾರದಲ್ಲಿ ಸ್ವ-ಉದ್ಯೋಗ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್‍ವೆಲ್ ಸೌಲಭ್ಯ ಬಹುತೇಕ ಸ್ಥಗಿತಗೊಂಡಿದೆ. ಪಂಚಭಾಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ವಿನಿಯೋಗವಾಗಬೇಕಿದ್ದ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ. ರಾಜಕೀಯ ಸ್ವಾರ್ಥಕ್ಕಾಗಿ ಅಹಿಂದ ಮಂತ್ರ ಪಠಿಸುವ ಹಾಗೂ ಹಿಂದುಳಿದ ಸಮುದಾಯಗಳನ್ನು ಬಳಸಿಕೊಳ್ಳುವ ಸಿಎಂ ಸಿದ್ಧರಾಮಯ್ಯನವರು ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ಕೆ ಕಲ್ಲು ಹಾಕಿದ್ದಾರೆ ಎಂದು ಅಪ್ರು ರವೀಂದ್ರ ಆರೋಪಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಮುಖಂಡ ಶಾಂತೆಯಂಡ ರವಿ ಕುಶಾಲಪ್ಪ, ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಪ್ರದೀಪ್ ಪೂಜಾರಿ, ನಗರಾಧ್ಯಕ್ಷ ಗಜ ಭಗವತಿ, ಸುಂಟಿಕೊಪ್ಪ ಅಧ್ಯಕ್ಷ ಪಿ.ಆರ್.ಸುನಿಲ್, ವಿರಾಜಪೇಟೆ ಪೊಟ್ಟಂಡ ನವೀನ್ ಉತ್ತಪ್ಪ, ಉಪಾಧ್ಯಕ್ಷ ಗಿರೀಶ್, ಸೋಮವಾರಪೇಟೆ ಉಪಾಧ್ಯಕ್ಷ ಗಂಗಾಧರ ಪಿ.ಎನ್, ಮಡಿಕೇರಿ ತಾಪಂ ಮಾಜಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಬಿಜೆಪಿ ಎಸ್‍ಸಿ ಮೋರ್ಚಾ ಅಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ಆರ್.ಕೆ.ಚಂದ್ರು, ಬಿ.ಕೆ.ಅರುಣ್ ಕುಮಾರ್, ಕನ್ನಂಡ ಸಂಪತ್, ಬಿ.ಕೆ. ಜಗದೀಶ್, ಸುರೇಶ್ ಸಿದ್ದಾಪುರ, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ಸಜಿಲ್ ಕೃಷ್ಣ, ಬೊಳ್ಳಜಿರ ಬಿ.ಅಯ್ಯಪ್ಪ, ಬಿ.ಪಿ.ಡಿಶು, ಕುಶಾಲಪ್ಪ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.17 NEWS DESK : ಕೊಡವ ಜನಪದೀಯ ಸಾಹಿತ್ಯವನ್ನು ಜೀವಂತವಾಗಿಡುವ ಉದ್ದೇಶದಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ…

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.