Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*
  • *ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*
  • *ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*
  • *ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
  • *ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*
  • *ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.15 ರಂದು ವಿವಿಧೆಡೆ ಅರೆಭಾಷೆ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.15 ರಂದು ವಿವಿಧೆಡೆ ಅರೆಭಾಷೆ ದಿನಾಚರಣೆ*

ಡಿಸೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಡಿ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿ.15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಪಟ್ಟಣ ಮತ್ತು ಐಗೂರು ಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹಾಗೂ ಬೆಳ್ತಂಗಡಿ, ಹಾಗೆಯೇ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಹೇಳಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಔನ್ನತ್ಯಕ್ಕೆ ಕೊಂಡೊಯ್ಯುವಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ ಅರೆಭಾಷೆಯಲ್ಲಿ ಪುಸ್ತಕ ಪ್ರಕಟಣೆ, ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮ ಹಾಗೂ ಅರೆಭಾಷೆ ಬರವಣಿಗೆಗೆ ಹೆಚ್ಚು ಒತ್ತು ನೀಡುವುದು. ಜೊತೆಗೆ ಸಂಶೋಧನೆಗೆ ಗಮನಹರಿಸುವಲ್ಲಿ ಅಕಾಡೆಮಿ ಕಾರ್ಯಪ್ರವೃತ್ತವಾಗಿದೆ ಎಂದು ಸದಾನಂದ ಮಾವಜಿ ತಿಳಿಸಿದ್ದಾರೆ. ಅರೆಭಾಷೆ ಗಡಿ ಉತ್ಸವ ಕಾರ್ಯಕ್ರಮವನ್ನು ಈಗಾಗಲೇ ಕಾಸರಗೋಡಿನ ಬಂದ್ಯಡ್ಕ, ಸುಳ್ಯ ತಾಲ್ಲೂಕಿನ ಮಂಡೆಕೋಲು ಹಾಗೂ ಕೊಡಗು ಜಿಲ್ಲೆಯ ಚೆಯ್ಯಂಡಾಣೆ ಗ್ರಾಮದಲ್ಲಿ ಆಯೋಜಿಸಿ, ಗ್ರಾಮೀಣ ಪ್ರದೇಶದಲ್ಲಿ ಅರೆಭಾಷೆ ಬೆಳವಣಿಗೆಗೆ ಶ್ರಮಿಸುತ್ತಿರುವುದು ವಿಶೇಷವಾಗಿದೆ. ಅರೆಭಾಷಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ವಿವಿಧ ಸಾಂಸ್ಕøತಿಕ ಮತ್ತು ಸಾಹಿತ್ಯಕ ಕಾರ್ಯಕ್ರಮ ಆಯೋಜಿಸುವ ಮೂಲಕ ಅರೆಭಾಷಿಕರು ಒಂದೆಡೆ ಸೇರಲು ‘ಅರೆಭಾಷೆ ಗಡಿ ಉತ್ಸವ’ ಸಹಕಾರಿಯಾಗಿದ್ದು, ಜನ ಮೆಚ್ಚುಗೆಗೆ ಪಾತ್ರವಾಗಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಅಕಾಡೆಮಿಯ ಉದ್ದೇಶ, ಗುರಿ, ಕಾರ್ಯಚಟುವಟಿಕೆಗಳು ಹೀಗೆ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯನಿರ್ವಹಿಸುತ್ತಿದೆ ಎಂದು ಸದಾನಂದ ಮಾವಜಿ ವಿವರಿಸಿದ್ದಾರೆ. ಈ ಬಾರಿ ಡಿಸೆಂಬರ್, 15 ರಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಅರೆಭಾಷೆ ಹಾಡು, ಮಿಮಿಕ್ರಿ, ಮಾತುಕತೆ, ಅರೆಭಾಷೆ ಪದ್ಯ, ಸಾಂಪ್ರದಾಯಿಕ ಉಡುಗೆ ಪ್ರದರ್ಶನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ. ಹಾಗೆಯೇ ಕೊಡಗು ಜಿಲ್ಲೆಯ ಕುಶಾಲನಗರ ಗೌಡ ಸಮಾಜ ಹಾಗೂ ಐಗೂರು ಗ್ರಾಮದಲ್ಲಿ ಅರೆಭಾಷೆ ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ವಿಜಯನಗರದ ಕೊಡಗು ಗೌಡ ಸಮಾಜದಲ್ಲಿ ಹಾಗೂ ಬೆಳ್ತಂಗಡಿಯಲ್ಲಿ ಅರೆಭಾಷೆ ಅಭಿಮಾನ ಬಳಗದಿಂದ ಅರೆಭಾಷೆ ದಿನಾಚರಣೆ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಸದಾನಂದ ಮಾವಜಿ ತಿಳಿಸಿದ್ದಾರೆ.

ಡಿ.15 ರಂದು ಸುಳ್ಯದಲ್ಲಿ ಅರೆಭಾಷೆ ದಿನಾಚರಣೆ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯ ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ, ನಗರ ಸಮಿತಿ ಮತ್ತು ನಗರ ಮಹಿಳಾ ಸಮಿತಿ ಇವರ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯು ಡಿಸೆಂಬರ್, 15 ರಂದು ಬೆಳಗ್ಗೆ 9.30 ಗಂಟೆಗೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಹಿರಿಯ ಎಂಜಿನಿಯರ್ ಡಿ.ಎಂ.ಸುಮಿತ್ರ, ಸಾಹಿತಿ ಶೈಲಜಾ ದಿನೇಶ್, ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷರಾದ ಕೆ.ಸಿ.ಸದಾನಂದ ಕುರುಂಜಿ, ಮೋಹನ್ ರಾಮ್ ಸುಳ್ಳಿ, ನಿವೃತ್ತ ಅರಣ್ಯ ಪಾಲಕರಾದ ಅಮೈ ಸುಂದರ ಗೌಡ ಇತರರು ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಸಂಭ್ರಮದ 18ನೇ ವರ್ಷದ ಓಣಂ ಆಚರಣೆ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ವಿರಾಜಪೇಟೆ : ಸಂತ ಅನ್ನಮ್ಮ ಚರ್ಚ್‌ನಲ್ಲಿ ಸಂಭ್ರಮದ ಮೇರಿಮಾತೆ ಜಯಂತಿ ಆಚರಣೆ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಐತಿಹಾಸಿಕ ಕ್ರೈಸ್ತ ದೇವಾಲಯವಾದ ಸಂತ ಅನ್ನಮ್ಮ ಚರ್ಚ್‌ನಲ್ಲಿ ಮೇರಿಮಾತೆ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ…

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತುರ್ತು ಚಿಕಿತ್ಸಾ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಮರಿಯಮ್ಮ ಜನ್ಮ ದಿನದ ಸಂಭ್ರಮ; ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಭಕ್ತಿಭಾವದಿಂದ ಆಚರಣೆ*

ಸೆಪ್ಟೆಂಬರ್ 8, 2026

*ಕುಶಾಲನಗರದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ನವಸಾಕ್ಷರರಿಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಶಿಕ್ಷಕಿ ವನಜಾಕ್ಷಿ ದಾಮೋದರ್‌ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026

*ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*

ಸೆಪ್ಟೆಂಬರ್ 8, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.