Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ : ಸದಸ್ಯರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ : ಸದಸ್ಯರ ಅಸಮಾಧಾನ*

ಡಿಸೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.13 NEWS DESK : ಕಳೆದ ಅಕ್ಟೋಬರ್‍ನಲ್ಲಿ ನಡೆದ ವಾಣಿಜ್ಯ ಮಳಿಗೆಗಳ ಹರಾಜನ್ನು ರದ್ದುಪಡಿಸಿ, ಮರು ಇ-ಟೆಂಡರ್ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ಆಗ್ರಹಿಸಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟೆಂಡರ್‍ನಲ್ಲಿ ಅಕ್ರಮ ನಡೆದಿದೆ ಎಂದು ಎಲ್ಲಾ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಟೆಂಡರ್‌ದಾರರ ಹೆಸರು, ಮಳಿಗೆ ಸಂಖ್ಯೆಗಳು ಮಧ್ಯವರ್ತಿಗಳ ಕೈಸೇರಿವೆ. ಪಂಚಾಯಿತಿ ಕಚೇರಿಯಲ್ಲಿ ಗೌಪ್ಯವಾಗಿರಬೇಕಾದ ಮಾಹಿತಿಗಳು ಸೋರಿಕೆಯಾಗಿರುವ ಕಾರಣ ಮಧ್ಯವರ್ತಿಗಳು ಡೀಲ್‍ಗೆ ಇಳಿಯಲು ಕಾರಣವಾಗಿದೆ. ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮಾಹಿತಿ ಸೋರಿಕೆ ಮಾಡಿದ್ದಾರೆ. ಈ ಬಗ್ಗೆ ಅಧ್ಯಕ್ಷರು ವಿವರಣೆ ನೀಡಬೇಕು. ಸೂಕ್ತ ಕ್ರಮಕೈಗೊಳ್ಳಬೇಕೆಂದು ಸರ್ಕಾರಿ ನಾಮನಿರ್ದೇಶನ ಸದಸ್ಯರಾದ ಡಿ.ಯು.ಕಿರಣ್, ವಿನಯ್, ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್, ಬಿ.ಸಂಜೀವ, ಜೀವನ್ ಆಗ್ರಹಿಸಿದರು. ನಿಯಮದಂತೆ ಟೆಂಡರ್ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೆ, ಬಿಡ್‍ದಾರರ ಹೆಸರು ಸೋರಿಕೆಯಾಗಿರುವುದು ತಮ್ಮ ಗಮನಕ್ಕೆ ಬಂದಿದೆ. ಸದಸ್ಯರ ಆರೋಪವೂ ಸರಿಯಾಗಿದೆ. ಸದಸ್ಯರ ತೀರ್ಮಾನದಂತೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು. ಟೆಂಡರ್‍ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿವರಣೆಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಇ ಟೆಂಡರ್ ಮಾಡುವಂತೆ ಮನವಿ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸೋಮವಾರಪೇಟೆ ಪಟ್ಟಣದಲ್ಲಿ ಸಂತೆ ದಿನ ಟ್ರಾಫಿಕ್ ಸಮಸ್ಯೆ ಹೆಚ್ಚಿದೆ. ಸಾರ್ವಜನಿಕರಿಗೆ ದೊಡ್ಡಮಟ್ಟದ ಕಿರಿಕಿರಿ ಆಗುತ್ತಿದೆ. ಪಟ್ಟಣದಲ್ಲಿ ಪೊಲೀಸರು ಇರುವ ಬಗೆಯೇ ಅನುಮಾನ ವ್ಯಕ್ತವಾಗಿದೆ. ಟ್ರಾಫಿಕ್ ವಿಷಯದಲ್ಲಿ ಖಾಸಗಿ ಬಸ್‍ಸ್ಟಾಂಡ್‍ನಲ್ಲಿ ರಾಜರೋಷವಾಗಿ ಹೊಡೆದಾಡಿಕೊಂಡರು ಕೇಳುವವರು ಇಲ್ಲದಂತಾಗಿದೆ. ಪೊಲೀಸರು ಇನ್ನಾದರೂ ಕ್ರಮಕೈಗೊಳ್ಳದಿದ್ದರೆ ಶಾಸಕರಾದ ಡಾ.ಮಂತರ್‍ಗೌಡ ಅವರಿಗೆ ನೇರವಾಗಿ ದೂರು ನೀಡುವಂತೆ ಸಭೆ ತೀರ್ಮಾನಿಸಿತು. ಕೆಎಸ್‍ಆರ್‍ಟಿಸಿ ಮುಂಭಾಗದಲ್ಲಿ ಮಾನವೀಯತೆ ದೃಷ್ಟಿಯಿಂದ ಆಟೋ ನಿಲ್ದಾಣಕ್ಕೆ ಜಾಗ ನೀಡಲಾಗಿದೆ. ಕೆಎಸ್‍ಆರ್‍ಟಿಸಿ ಗೇಟ್‍ನಿಂದ, ಸಿ.ಕೆ.ಸುಬ್ಬಯ್ಯ ರಸ್ತೆಗೆ ಸಂಪರ್ಕ ರಸ್ತೆಯಿದ್ದು, ಅ ರಸ್ತೆಯಲ್ಲಿ ಬೈಕ್‍ಗಳು ಸಂಚರಿಸಿದರೆ ಕೆಲ ಆಟೋ ಚಾಲಕರು ತಡೆದು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವಿದೆ. ಜೇಸಿ ವೇದಿಕೆಯ ಮುಂಭಾಗ ಹೆಚ್ಚಿನ ಬಾಡಿಗೆ ಕೊಟ್ಟು ವಾಣಿಜ್ಯ ಮಳಿಗೆಗಳನ್ನು ಪಡೆದುಕೊಂಡಿದ್ದಾರೆ. ಮಳಿಗೆಗಳ ಮುಂದೆ ದಿನವಿಡಿ ಆಟೋಗಳನ್ನು ನಿಲ್ಲಿಸಿದರೆ ವ್ಯಾಪಾರ ಮಾಡಲು ಸಾಧ್ಯವಿಲ್ಲ. ಆಟೋಗಳು ನಿಲ್ಲಲು ನಿಗದಿತ ಸ್ಥಳವನ್ನು ಗುರುತಿಸಿಕೊಡಬೇಕು. ಪಂಚಾಯಿತಿ ನಿಯಮವನ್ನು ಪಾಲಿಸುವಂತೆ ತಿಳಿಸಬೇಕು. ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸದಸ್ಯರು ಸೂಚಿಸಿದರು. ವಾರ್ಡ್ ಸದಸ್ಯರು, ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಕ್ಕೆ ಜನರು ಆಯ್ಕೆ ಮಾಡಿದ್ದಾರೆ. ಆದರೆ ಪಂಚಾಯಿತಿ ಸಿಬ್ಬಂದಿಯೋರ್ವರು ಬೇರೆಯವರ ಕೆಲಸ ಮಾಡಿಸಿಕೊಡಲು ಯಾಕೆ ಬರುತ್ತೀರಾ ಎಂದು ಪ್ರಶ್ನಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ನಿವೃತ್ತ ಡಿವೈಎಸ್ಪಿ ಒಬ್ಬರಿಗೆ ಸಹಾಯ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಇದು ಸದಸ್ಯರಿಗೆ ಆಗುತ್ತಿರುವ ಅವಮಾನ ಎಂದು ಸದಸ್ಯ ಮೃತ್ಯುಂಜಯ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ನನಗೆ ಅವಮಾನ ಮಾಡಿದ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು. ಕಳೆದ 15 ವರ್ಷಗಳಿಂದ ನಿಯಮಬಾಹಿರವಾಗಿ ಈ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಅವರ ವರ್ಗಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಬಿ.ಆರ್.ಮಹೇಶ್ ಅವಿರೋಧ ಆಯ್ಕೆಯಾದರು. ಇದೀಗ ವರ್ಗಾವಣೆಗೊಂಡಿರುವ ಮುಖ್ಯಾಧಿಕಾರಿ ನಾಚಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಪಿ.ಕೆ.ಚಂದ್ರ, ನಾಗರತ್ನ, ಶುಭಾಕರ್, ಎಚ್.ಎ.ನಾಗರಾಜ್ ಮುಖ್ಯಾಧಿಕಾರಿ ಸತೀಶ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿಲ್ಲವ ಹಾಗೂ ಬಂಟರ ಸಮಾಜದ ಅವಹೇಳನ : ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಜೂನ್ 11, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.10 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಹಾಗೂ…

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.