Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*
  • *ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*
  • *ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*
  • *ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*
  • *ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಣೆ : ರೀಬಿಲ್ಡ್ ಕೊಡಗು ಸಂಸ್ಥೆಯಿಂದ ವಿಶೇಷ ಚೇತನ ಮಕ್ಕಳಿಗೆ ಅಗತ್ಯ ಸಹಕಾರ : ಕೆ.ಎ.ಕುಶಾಲಪ್ಪ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಣೆ : ರೀಬಿಲ್ಡ್ ಕೊಡಗು ಸಂಸ್ಥೆಯಿಂದ ವಿಶೇಷ ಚೇತನ ಮಕ್ಕಳಿಗೆ ಅಗತ್ಯ ಸಹಕಾರ : ಕೆ.ಎ.ಕುಶಾಲಪ್ಪ ಭರವಸೆ*

ಡಿಸೆಂಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 NEWS DESK : ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು, ಅವರು ಸಮಾಜದಲ್ಲಿ ಎಲ್ಲರಂತೆ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ರೀಬಿಲ್ಡ್ ಕೊಡಗು ಸಂಸ್ಥೆ ವಿಶೇಷ ಚೇತನ ಮಕ್ಕಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ ಭರವಸೆ ನೀಡಿದ್ದಾರೆ. ರೀಬಿಲ್ಡ್ ಕೊಡಗು ಸಂಸ್ಥೆ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಶಾಲಾ ಸಿದ್ಧತಾ ಕೇಂದ್ರದಲ್ಲಿ ನಡೆದ ವಿಶೇಷ ಅಗತ್ಯತೆವುಳ್ಳ ವಿದ್ಯಾರ್ಥಿಗಳ ಪೋಷಕರ ಆಪ್ತ ಸಮಾಲೋಚನಾ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಈ ಹಿಂದೆ ವಿಶೇಷ ಚೇತನ ಮಕ್ಕಳ ಸಂಖ್ಯೆ ಹೆಚ್ಚಿತ್ತು. ಇದೀಗ ಜಾಗೃತಿ ಕಾರ್ಯಕ್ರಮಗಳಿಂದ ಕಡಿಮೆಯಾಗುತ್ತಿದೆ. ವಿಶೇಷ ಚೇತನ ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸಬೇಕು. ಆ ಮಕ್ಕಳ ಪ್ರತಿಭೆಗೆ ತಕ್ಕಂತೆ ಅವಕಾಶವನ್ನು ನೀಡಲು ಪೋಷಕರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಹೆಣ್ಣು ಮಕ್ಕಳು ವಿದ್ಯಾವಂತರಾದರೆ ಮನೆಯ ವಾತಾವರಣವೇ ಬದಲಾಗುತ್ತದೆ ಎನ್ನುವ ನಿಟ್ಟಿನಲ್ಲಿ ರೀಬಿಲ್ಡ್ ಕೊಡಗು ಸಂಸ್ಥೆ ಕನ್ನಡ ಶಾಲೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅಲ್ಲದೆ ಈ ಸಮಾಜಕ್ಕೆ ಏನಾದರೂ ಸಹಾಯ ಮಾಡಬೇಕು ಎನ್ನುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದರು. ಜಿಲ್ಲೆಯಲ್ಲಿ 2018-19ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ರೀಬಿಲ್ಡ್ ಕೊಡಗು ಸಂಸ್ಥೆ ಹುಟ್ಟಿಕೊಂಡಿದ್ದು, ಸಂಸ್ಥೆಯ ಮೂಲಕ ನಿರಂತರವಾಗಿ ಸಮಾಜ ಸೇವೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಸಂಸ್ಥೆಗೆ ಪ್ರಪಂಚದಾದ್ಯಂತದ ಆತ್ಮೀಯರು ಕೊಡುಗೆ ನೀಡಿದ್ದು, ಇದರಿಂದ ಇಲ್ಲಿಯವರೆಗೆ ನಮ್ಮ ಪ್ರಯಾಣ ಫಲಪ್ರದವಾಗಿದೆ ಮತ್ತು ತೃಪ್ತಿಕರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಕೆ.ಎ.ಕುಶಾಲಪ್ಪ, ನಮ್ಮ ಪ್ರಯತ್ನದಿಂದ ಸಾವಿರಾರು ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ವಿರಾಜಪೇಟೆಯ ನರ್ಸಿಂಗ್ ಹೋಮ್‍ನಲ್ಲಿ ರೀಬಿಲ್ಡ್ ಸಂಸ್ಥೆಯ ಈಕ್ವಿಪಿಕ್ ಬ್ಯಾಂಕ್ ಇದ್ದು, ವಿಶೇಷ ಚೇತನರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಅಗತ್ಯ ಇರುವವರು ತಮ್ಮನ್ನು ಸಂಪರ್ಕಿಸಿ ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಹೇಳಿದರು. ಮಡಿಕೇರಿ ಜಿಲ್ಲಾಸ್ಪತ್ರೆಯ ಮನೋತಜ್ಞ ಡಾ.ರಮೇಶ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಅತಿಯಾದ ತಂತ್ರಜ್ಞಾನದಿಂದ ನ್ಯೂನತೆಗಳು ಹೆಚ್ಚಾಗುತ್ತಿದ್ದು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ. ಅತೀ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿನ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಪೋಷಕರ ಅಭ್ಯಾಸಗಳಲ್ಲೂ ಬದಲಾವಣೆಗಳಲಾಗಬೇಕು ಎಂದು ಸಲಹೆ ನೀಡಿದರು. ಬೌದ್ಧಿಕ, ದೈಹಿಕ ಹಾಗೂ ಭಾವನಾತ್ಮಕವಾಗಿ ಅಸಾಮಥ್ರ್ಯವನ್ನು ಹೊಂದಿರುವ ವಿಶೇಷ ಚೇತನ ಮಕ್ಕಳಿಗೆ ವಿಶೇಷ ಆರೈಕೆಯೊಂದಿಗೆ ಶಿಕ್ಷಣವೂ ಬೇಕು. ಆ ನಿಟ್ಟಿನಲ್ಲಿ ಪೋಷಕರು ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಮಕ್ಕಳೊಂದಿಗೆ ಹೆಚ್ಚು ಕಾಲಹರಣ ಮಾಡುವದರ ಮೂಲಕ ಅವರಿಗೆ ಯೋಗ, ಧ್ಯಾನ ಮತ್ತಿತರ ಚಟುವಟಿಕೆಗಳನ್ನು ಮಾಡಿಸಬೇಕು ಹಾಗೂ ಅವರನ್ನು ನಿತ್ಯ ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು. ನಗರದ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ 11 ರಲ್ಲಿ ಪ್ರತಿ ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ವಿಶೇಷ ಮಕ್ಕಳ ಸಮಾಲೋಚನೆ ನಡೆಯಲಿದ್ದು, ಅಗತ್ಯ ಇರುವವರು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಡಾ.ರಮೇಶ್ ತಿಳಿಸಿದರು. ಮಡಿಕೇರಿ ಇನ್ನರ್‍ವಿಲ್ ಕ್ಲಬ್‍ನ ಅಧ್ಯಕ್ಷೆ ಎಗ್ನಿಸ್ ಮುತ್ತಣ್ಣ ಮಾತನಾಡಿ, ವಿಶೇಷ ಮಕ್ಕಳಿಗೆ ಸಹಕಾರಿಯಾಗಲೆಂದು ಮಡಿಕೇರಿಯ ಇನ್ನರ್‍ವಿಲ್ ಕ್ಲಬ್ ವತಿಯಿಂದ ಶಾಲಾ ಸಿದ್ಧತಾ ಕೇಂದ್ರಕ್ಕೆ ಅಗತ್ಯ ಸಲಕರಣೆಗಳನ್ನು ನೀಡಲಾಗಿದೆ ಎಂದು ಹೇಳಿದರು. ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್‍ನ ಸುನಿತಾ ಮಾತನಾಡಿ, ಯೂತ್ ಮೂಮೆಂಟ್‍ನಿಂದ ಲಭ್ಯವಾಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗಧಾಮಪ್ಪ, ಬಿಇಓ ಡಾ.ದೊಡ್ಡೆಗೌಡ, ಶಾಲಾ ಶಿಕ್ಷಣಾ ಇಲಾಖೆಯ ಡಿವೈಪಿಸಿ ಸೌಮ್ಯ ಪೊನ್ನಪ್ಪ, ಕೃಷ್ಣಪ್ಪ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಶಾಲಾ ಸಿದ್ದತಾ ಕೇಂದ್ರದ ಅಧಿಕಾರಿ ದಿವ್ಯ ಹಾಗೂ ಸಿಬ್ಬಂದಿಗಳು, ಮಕ್ಕಳ ಪೋಷಕರು ಹಾಜರಿದ್ದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರೋಗ್ರಾಮನರ್ ಪ್ರಸಾದ್ ನಿರೂಪಿಸಿದರು. ರೀಬಿಲ್ಡ್ ಕೊಡಗು ಸಂಸ್ಥೆ ವತಿಯಿಂದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ 95 ಟ್ರ್ಯಾಕ್ ಶೂಟ್ ಗಳನ್ನು ವಿತರಣೆ ಮಾಡಲಾಯಿತು. ಮಡಿಕೇರಿ ಇನ್ನರ್ ವಿಲ್ ಕ್ಲಬ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ; ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸವಿತಾ ಎಂ.ಜಿ.ಗೆ ಸನ್ಮಾನ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026

*ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವಾರ್ಷಿಕ ಮಹಾಸಭೆ 58.12. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ,NEWS DESK ಸೆ. 8:ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ 2025-26ನೇ ಸಾಲಿನ 75. ನೇ ವಾರ್ಷಿಕ ಮಹಾಸಭೆಯು ಸಂಘದ…

*ವಲಯ ಮಟ್ಟದ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆ ತಂಡ ವಿಜೇತ*

ಸೆಪ್ಟೆಂಬರ್ 8, 2026

*ಪದವಿ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆ; ಸೆ.15ರೊಳಗೆ ಪ್ರಬಂಧ ಸಲ್ಲಿಕೆಗೆ ಅವಕಾಶ*

ಸೆಪ್ಟೆಂಬರ್ 8, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 8, 2026

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.