Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*
  • *ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*
  • *ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*
  • *ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*
  • *ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಸ್ತೆ ಡಾಂಬರೀಕರಣಕ್ಕಾಗಿ ಒತ್ತಾಯಿಸಿ ಡಿ.18 ರಂದು ಗಾಳಿಬೀಡು ಗ್ರಾಮಸ್ಥರಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಸ್ತೆ ಡಾಂಬರೀಕರಣಕ್ಕಾಗಿ ಒತ್ತಾಯಿಸಿ ಡಿ.18 ರಂದು ಗಾಳಿಬೀಡು ಗ್ರಾಮಸ್ಥರಿಂದ ಪ್ರತಿಭಟನೆ*

ಡಿಸೆಂಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.17 NEWS DESK : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆಂದು ಒತ್ತಾಯಿಸಿ ಡಿ.18 ರಂದು ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಗಾಳಿಬೀಡು ಗ್ರಾಮದ ಪ್ರಮುಖ ಪಾಂಡೀರ ಸುಬ್ರಮಣಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ 10ಗಂಟೆಗೆ ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಯಲಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲೇ ಜನಪ್ರಿಯ ಪ್ರವಾಸಿತಾಣ ಮಾಂದಲ್ ಪಟ್ಟಿ ಮತ್ತು ಹಲವು ಪ್ರತಿಷ್ಠಿತ ರೆಸಾರ್ಟ್‍ಗಳಿವೆ. ನಿತ್ಯ ಸಾವಿರಾರು ವಾಹನಗಳ ಸಂಚಾರವಿದ್ದರೂ ಹಾಗೂ ಪ್ರವಾಸೋದ್ಯಮದ ಮೂಲಕ ಸರ್ಕಾರಕ್ಕೆ ಹೆಚ್ಚು ಆದಾಯ ಸಂದಾಯವಾಗುತ್ತಿದ್ದರೂ ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಶಾಸಕರಾದಿಯಾಗಿ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದರೂ ಇಲ್ಲಿಯವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಹೊಂಡ, ಗುಂಡಿಗಳಲ್ಲಿ ರಸ್ತೆಯನ್ನು ಹುಡುಕಬೇಕಾದ ಪರಿಸ್ಥಿತಿ ಇದ್ದರೂ ತೇಪೆ ಕಾರ್ಯಕ್ಕೆ ಮುಂದಾಗಿರುವುದು ಖಂಡನೀಯ ಮತ್ತು ಇದನ್ನು ಈ ಭಾಗದ ಎಲ್ಲಾ ಗ್ರಾಮಸ್ಥರು ವಿರೋಧಿಸುತ್ತೇವೆ. ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಬೇಕು ಮತ್ತು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ಒತ್ತಾಯಿಸಿ ಡಿ.18 ರಂದು ನಡೆಯುವ ಪ್ರತಿಭಟನೆಯಲ್ಲಿ ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ ಗ್ರಾಮಸ್ಥರು ಭಾಗಿಯಾಗಲಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲವೆಂದು ಎಚ್ಚರಿಕೆ ನೀಡಿದರು. ಮತ್ತೋರ್ವ ಗ್ರಾಮಸ್ಥ ಹರೀಶ ರೈ ಮಾತನಾಡಿ, ಗಾಳಿಬೀಡು ರಸ್ತೆಯಲ್ಲಿರುವ ಗುಂಡಿಗಳನ್ನು ತಪ್ಪಿಸಲು ಹೋಗಿ ಅನೇಕ ಬಾರಿ ಅಪಘಾತಗಳು ಸಂಭವಿಸಿವೆ. ಕ್ಲಬ್ ಮಹೀಂದ್ರದಿಂದ ವಣಚಲು ವರೆಗೆ ಸುಮಾರು 15 ಕಿ.ಮೀ ವರೆಗಿನ ರಸ್ತೆಯನ್ನು ಸಂಪೂರ್ಣ ಡಾಂಬರೀಕರಣಗೊಳಿಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಶಿವಪ್ರಸಾದ್ ರೈ, ನವೀನ್ ದೇರಳ, ಯು.ಎಸ್.ಗಿರೀಶ್ ಹಾಗೂ ಯಾಲದಾಳು ರಾಜಶೇಖರ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.17 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದರೂ ಅರಣ್ಯ ಅಧಿಕಾರಿಗಳು…

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026

*ಭಾಗಮಂಡಲ : ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿ : ಮೊಹಮ್ಮದ್ ನಲಪ್ಪಾಡ್ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್*

ಆಗಷ್ಟ್ 16, 2026

*ಮಡಿಕೇರಿಯಲ್ಲಿ ಎಸ್.ಜಾನಕಿ ಗೀತ ನಮನ* 

ಆಗಷ್ಟ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.