Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*
  • *ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ಮೇಳ : ಕಾವೇರಿ ಶಾಲೆಗೆ ಸಮಗ್ರ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ಮೇಳ : ಕಾವೇರಿ ಶಾಲೆಗೆ ಸಮಗ್ರ ಪ್ರಶಸ್ತಿ*

ಡಿಸೆಂಬರ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.18 NEWS DESK : ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜು ಶಿಕ್ಷಣಕ್ಕೆ ಸಂಸ್ಥೆಯ ವತಿಯಿಂದ ಸಹಕಾರ ನೀಡುವುದಾಗಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ತಿಳಿಸಿದರು. ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮೇಳದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಮೊಬೈಲ್ ಲೋಕದಲ್ಲಿ ಕಳೆದು ಹೋಗುವ ಮೂಲಕ ಕಲೆ ಸೇರಿದಂತೆ ದೈಹಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ ಎಂದು  ಬೇಸರ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಬೆನ್ನಿ ಜೋಸೆಫ್ ಮಾತನಾಡಿ, ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.95 ರಷ್ಟು ಅಂಕ ಪಡೆಯುವ ಯಾವುದೇ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಘೋಷಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಪ್ರಕಾಶ್, ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕ ಡಾ.ಹೇಮಂತ್, ಪ್ರಾಥಮಿಕ ಶಾಲಾ ವಿಭಾಗಗಳ ಮುಖ್ಯಶಿಕ್ಷಕರು ಉಪಸ್ಥಿತರಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು.
ವಿರಾಜಪೇಟೆಯ ಕಾವೇರಿ ಶಾಲೆಯ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಮೇಳದಲ್ಲಿ ಆಯೋಜಿಸಿದ್ದ ವಿವಿಧ 7 ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ಸಮಗ್ರ ಪ್ರಶಸ್ತಿ ಪಡೆದ ಕಾವೇರಿ ಶಾಲೆಯ ತಂಡವು ಆಕರ್ಷಕ ಟ್ರೋಫಿ ಹಾಗೂ 25,555 ರೂ ನಗದು ಬಹುಮಾನವನ್ನು ಪಡೆದುಕೊಂಡಿತು. ಮಿಶ್ರ ಕ್ರಿಕೆಟ್ ನಲ್ಲಿ ಲೂರ್ಡ್ಸ್ ಶಾಲೆಯು ಪ್ರಥಮ ಹಾಗೂ ಸಂತ ಅನ್ನಮ್ಮ ಅನುದಾನಿತ ಶಾಲೆಯು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಟ್ರಷರ್ ಹಂಟ್ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯು ಪ್ರಥಮ ಬಹುಮಾನ ಪಡೆದುಕೊಂಡರೆ, ಮರ್ಕಜ್ ಶಾಲೆಯು ದ್ವಿತೀಯ ಬಹುಮಾನ ಪಡೆದುಕೊಂಡಿತು. ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಕಾವೇರಿ ಶಾಲೆಯು ಪ್ರಥಮ ಹಾಗೂ ಮರ್ಕಜ್ ಶಾಲೆಯು ದ್ವಿತೀಯ ಬಹುಮಾನ ಪಡೆದುಕೊಂಡಿತು. ಆಹಾರ ಮೇಳದಲ್ಲಿ ಕಾವೇರಿ ಶಾಲೆಯು ಪ್ರಥಮ ಹಾಗೂ ಸಂತ ಅನ್ನಮ್ಮ ಅನುದಾನಿತ ಶಾಲೆಯು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ನೃತ್ಯ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯು ಪ್ರಥಮ ಬಹುಮಾನ ಪಡೆದುಕೊಂಡರೆ, ಎಸ್.ಎಂ.ಎಸ್ ಶಾಲೆಯು ದ್ವಿತೀಯ ಬಹುಮಾನ ಪಡೆಯಿತು. ಲಗೋರಿ ಸ್ಪರ್ಧೆಯಲ್ಲಿ ಎಸ್.ಎಂ.ಎಸ್ ಶಾಲೆಯು ಪ್ರಥಮ ಸ್ಥಾನ ಪಡೆದರೆ, ಲೂರ್ಡ್ಸ್ ಶಾಲೆಯು ದ್ವಿತೀಯ ಸ್ಥಾನ ಪಡೆಯಿತು. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯು ಪ್ರಥಮ ಬಹುಮಾನ ಪಡೆದರೆ, ಜ್ಞಾನಜ್ಯೋತಿ ಶಾಲೆಯು ದ್ವಿತೀಯ ಬಹುಮಾನ ಪಡೆದುಕೊಂಡಿತು. ಸಾಂಸ್ಕೃತಿಕ ಮೇಳದಲ್ಲಿ ಜಿಲ್ಲೆಯ ವಿವಿಧೆಡೆಯ ಸುಮಾರು 17ಕ್ಕು ಹೆಚ್ಚು ಶಾಲೆಗಳ ತಂಡಗಳು ಭಾಗವಹಿಸಿದ್ದವು. ಇದೇ ಮೊದಲ ಬಾರಿಗೆ ಪ್ರತಿ ಸ್ಪರ್ಧೆಗಳಲ್ಲಿ ಒಬ್ಬೊಬ್ಬ ಶಿಕ್ಷಕರು ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು. ಶಿಕ್ಷಕರು ತಮ್ಮ ವಿದ್ಯಾರ್ಥಿಗಳೊಂದಿಗೆ ನೃತ್ಯ, ಕ್ರಿಕೇಟ್, ಲಗೋರಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಆನಂದಿಸಿದರು.ಈ ಸಂದರ್ಭದಲ್ಲಿ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶೀಘ್ರದಲ್ಲೇ ಕೊಡಗು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪದಲ್ಲಿ ಮೊಂತಿಪೆಸ್ತ್ ಹಬ್ಬದ ಸಂಭ್ರಮ; ಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ವಿಶೇಷ ಪ್ರಾರ್ಥನೆ, ಅಡಂಬರ ಬಲಿಪೂಜೆ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 8: ಯೇಸುಕ್ರಿಸ್ತರ ತಾಯಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಮೊಂತಿಪೆಸ್ತ್ (ತೆನೆಹಬ್ಬ)ವನ್ನು ಸುಂಟಿಕೊಪ್ಪ…

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.