Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.20ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.20ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ*

ಡಿಸೆಂಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.19 NEWS DESK : ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಎಂದು ಘೋಷಣೆ ಮಾಡಬಾರದು ಹಾಗೂ ರೈತರಿಗೆ ಭೂಮಿಯ ಹಕ್ಕುಪತ್ರವನ್ನು ನೀಡಬೇಕು ಎಂದು ಆಗ್ರಹಿಸಿ ಡಿ.20ರಂದು  ಮಡಿಕೇರಿ ಗಾಂಧಿ ಮೈದಾನದಲ್ಲಿ ರೈತರ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟಕ್ಕೆ ರೈತ ಸಂಘ, ಜಿಲ್ಲೆಯ 50ರಷ್ಟು ಸಂಘಸಂಸ್ಥೆಗಳು, ಗ್ರಾಮಾಭಿವೃದ್ಧಿ ಮಂಡಳಿಗಳು, ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ ಎಂದು ಅವರು  ಹೇಳಿದರು.
ಬೆಳಗಾವಿ ಅಧಿವೇಶನದಲ್ಲಿ ಜಿಲ್ಲೆಯ ಇಬ್ಬರು ಶಾಸಕರುಗಳಾದ ಡಾ.ಮಂತರ್‌ಗೌಡ ಹಾಗೂ ಎ.ಎಸ್.ಪೊನ್ನಣ್ಣ, ಸಿ ಆ್ಯಂಡ್ ಡಿ ಭೂಮಿ ರೈತರಿಗೆ ಸಿಗಬೇಕು ಎಂದು ತಮ್ಮ ವಾದ ಮಂಡಿಸಿದ್ದಾರೆ. ಅವರಿಗೆ ಜಿಲ್ಲೆಯ ರೈತರು ಚಿರರುಣಿಗಳಾಗಿರುತ್ತೇವೆ. ಶಾಶ್ವತ ಪರಿಹಾರ ಸಿಗುವ ತನಕ, ರೈತರ ಹೋರಾಟಕ್ಕೆ ತಮ್ಮ ಸಹಕಾರ ನೀಡಬೇಕು ಎಂದು ಹೇಳಿದರು. ಸಿ ಆ್ಯಂಡ್ ಡಿ ಭೂಮಿಯೂ ಕೂಡ ಪೈಸಾರಿ ಜಾಗವಾಗಿದ್ದು, ಕೃಷಿಗೆ ಯೋಗ್ಯವಾದ ಭೂಮಿಯಾಗಿದೆ. ಪೈಸಾರಿ ಜಾಗವೆಂಬುದು ರೈತರಿಗೆ ಸೇರಿದ್ದು, ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆ ಮಾಡಿದ ರೈತರಿಗೆ ಸರ್ಕಾರ ಅಕ್ರಮ-ಸಕ್ರಮದಲ್ಲಿ ಹಕ್ಕುಪತ್ರ ನೀಡುತ್ತಿದೆ. ಆದರೆ ಹಿಂದೆ ಕೆಲ ಕಂದಾಯ ಅಧಿಕಾರಿಗಳು ಸರ್ವೇ ಮಾಡದೆ, ಪೈಸಾರಿ ಜಾಗವನ್ನೇ ಸಿ ಆ್ಯಂಡ್ ಡಿ ಭೂಮಿ ಎಂದು ವರ್ಗೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ದಾಖಲೆಯಲ್ಲಿ ಡೀಮ್ಡ್ ಫಾರೆಸ್ಟ್ ಎಂದು ನಮೂದಾಗಿದೆ. ಇನ್ನು ಮುಂದಾದರೂ ಸರ್ಕಾರಗಳು ರೈತಪರವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಸಿ ಆ್ಯಂಡ್ ಡಿ ಭೂಮಿ ಹೋರಾಟ ರೈತರಿಗೆ ನ್ಯಾಯ ಸಿಗುವವರೆಗೂ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟವಲ್ಲ. ರೈತರು ಶಕ್ತಿ ಮತ್ತು ಸಂಕಷ್ಟಗಳನ್ನು ತೋರಿಸಲು ಪ್ರತಿಭಟನೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಹೋರಾಟ ನಡೆಯಲಿದೆ ಎಂದು ಹೇಳಿದರು. ಸಂಚಾಲಕ ಬಿ.ಜೆ.ದೀಪಕ್ ಮಾತನಾಡಿ, 10 ಗಂಟೆಗೆ ಸುಮಾರಿಗೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ರೈತರು ಸುದರ್ಶನ ಸರ್ಕಲ್‌ನಲ್ಲಿ ಸೇರಿಕೊಂಡು, ಅಲ್ಲಿಂದ ಗಾಂಧಿ ಮೈದಾನದ ವರೆಗೂ ಮೆರವಣಿಗೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಯಲಿದೆ. ರೈತರು ಶಾಂತಿಯುತವಾಗಿ ಧರಣಿ ನಡೆಸಲಿದ್ದಾರೆ ಎಂದು ಹೇಳಿದರು. ಸಂಚಾಲಕ ಕೆ.ಎಂ.ಲೋಕೇಶ್ ಕುಮಾರ್ ಮಾತನಾಡಿ, ರೈತರ ಹೋರಾಟ ರಾಜಕೀಯ ರಹಿತವಾಗಿದ್ದು, ಜಿಲ್ಲೆಯ ಹಾಲಿ, ಮಾಜಿ ಶಾಸಕರುಗಳು, ಸಂಸದರು ಗಾಂಧಿ ಮೈದಾನಕ್ಕೆ ಆಗಮಿಸಿ, ರೈತರಿಗೆ ಭರವಸೆ ನೀಡಬೇಕು ಎಂದು ಹೇಳಿದರು. ಸಂಚಾಲಕ ಎಸ್.ಬಿ. ಭರತ್ ಕುಮಾರ್ ಮಾತನಾಡಿ, ರೈತರು ಯಾವುದೇ ಮೀಸಲು ಅರಣ್ಯವನ್ನು ಒತ್ತುವರಿ ಮಾಡಿಲ್ಲ. ಸಿ ಆ್ಯಂಡ್ ಡಿ ಭೂಮಿಯಲ್ಲಿ ಮರಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿದ್ದಾರೆ. ಆಹಾರ ಬೆಳೆಗಳನ್ನು ಬೆಳೆದು, ಜನರ ಹಸಿವನ್ನು ನೀಗಿಸಿದ್ದಾರೆ. ವ್ಯವಸಾಯ ಮಾಡುವ ಭೂಮಿ ರೈತರ ಹಕ್ಕು. ಸರ್ಕಾರಗಳು ಕೂಡ ರೈತರ ಹಕ್ಕುಗಳಿಗೆ ಚ್ಯುತಿ ಬರದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ ಆಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ರೈತಪರ ಹೋರಾಟಗಾರ ಕೆ.ಎ.ಯಾಕೂಬ್ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.8 : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜಯಂತಿಯನ್ನು ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕಳೆದ…

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.