Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಜ್ರಮಹೋತ್ಸವ ಸಂಭ್ರಮದಲ್ಲಿ ಮದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ : ಡಿ.27 ರಂದು ಹಳೇವಿದ್ಯಾಥಿ೯ಗಳ ಸಮ್ಮಿಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಜ್ರಮಹೋತ್ಸವ ಸಂಭ್ರಮದಲ್ಲಿ ಮದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ : ಡಿ.27 ರಂದು ಹಳೇವಿದ್ಯಾಥಿ೯ಗಳ ಸಮ್ಮಿಲನ*

ಡಿಸೆಂಬರ್ 19, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK :  ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಇದೇ 27 ಮತ್ತು 28 ರಂದು ಸಂಸ್ಥೆಯ 60 ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ.ಕುಮಾರ್ ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕನ೯ಲ್ ಕುಮಾರ್, ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಢಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ.ಎ.ಪೊನ್ನಪ್ಪ, ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ.ಜಿ.ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ ಕುಮಾರ್, ದಿ| ಗುಂಡೂರಾವ್ ಅವರ ಕಾಲದಲ್ಲಿ ಕಾಲೇಜು ಸ್ಥಾಪನೆಯ ಕನಸು 1967ರಲ್ಲಿ ಈಡೇರಿತು ಎಂದು ಹೇಳಿದರು. ಪ್ರೌಡಶಾಲೆಯ ಪ್ರಥಮ ಮುಖ್ಯೋಪಾಧ್ಯಾಯರಾಗಿ ಕೊಡಗಿನ ಇತಿಹಾಸದ ಕೃತಿಕಾರ, ಖ್ಯಾತ ಸಾಹಿತಿ ದಿ. ಡಿ.ಎನ್. ಕೃಷ್ಣಯ್ಯ ಕಾಯ೯ನಿವ೯ಹಿಸಿದ್ದು, ಸಂಸ್ಥೆಯ ಪಾಲಿಗೆ ಹೆ್ಮ್ಮೆಯ ವಿಚಾರ ಎಂದೂ ಕುಮಾರ್ ಸ್ಮರಿಸಿದರು. ಪ್ರಸ್ತುತ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ಡಿ.27 ರಂದು ಶುಕ್ರವಾರ ಹಳೇ ವಿದ್ಯಾಥಿ೯ಗಳ ಸ್ನೇಹ ಸಮ್ಮಿಲನ ಕಾಯ೯ಕ್ರಮ ಆಯೋಜಿತವಾಗಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಳೇ ವಿದ್ಯಾಥಿ೯ಗಳಿಗೆ ವೈವಿಧ್ಯಮಯ ಮನರಂಜನಾ ಕ್ರೀಡಾಸ್ಪಧೆ೯ಗಳು ಆಯೋಜಿಸಲ್ಪಟ್ಟಿದೆ, ಮಧ್ಯಾಹ್ನ 1 ಗಂಟೆಗೆ ಸಭಾ ಕಾಯ೯ಕ್ರಮ ನಡೆಯಲಿದೆ, ಸಂಸ್ಥೆಯ ಹಳೇ ವಿದ್ಯಾಥಿ೯ ಸಂಘದ ಅಧ್ಯಕ್ಷ ಎಂ.ಜಿ.ಬೋಪಣ್ಣ, ಅಧ್ಯಕ್ಷತೆಯ ಕಾಯ೯ಕ್ರಮವನ್ನು , ಎಂ.ಜಿ ಬೋಪಣ್ಣ ಉದ್ಘಾಟಿಸಲಿದ್ದಾರೆ, ವಾಣಿಜ್ಯ ತೆರಿಗೆ ಇಲಾಖೆಯ ನಿವೖತ್ತ ಹೆಚ್ಚುವರಿ ಆಯುಕ್ತ ಬಿ.ಎ.ನಾಣಿಯಪ್ಪ, ಕಾಫಿ ಬೆಳೆಗಾರರಾದ ಸಿ.ಪಿ.ಮುದ್ದಪ್ಪ, ಕೆ.ಎಸ್.ಮಂಜುನಾಥ್, ಹೆಚ್.ಎ.ಎಸ್. ಉತ್ತಯ್ಯ, ಮೈಸೂರು ಆಕಾಶವಾಣಿಯ ಸಹಾಯಕ ನಿದೇ೯ಶಕ ಅಬ್ದುಲ್ ರಶೀದ್, ಅರಣ್ಯ ಇಲಾಖೆಯ ಹಿರಿಯ ಸಹಾಯಕಿ ಬಿ.ಆರ್. ವಿಜಯಲಕ್ಷ್ಮಿ, ಪತ್ರಕತ೯ ಅನಿಲ್ ಹೆಚ್. ಟಿ., ವಕೀಲ ಕೆ.ಎಸ್.ರತನ್ ತಮ್ಮಯ್ಯ, ಕನ೯ಲ್ ಪಾಸುರ ಮುತ್ತಪ್ಪ, ಕನ೯ಲ್ ಎಂ.ಜಿ.ತಿಮ್ಮಯ್ಯ, ಸಂಸ್ಥೆಯ ನಿವೖತ್ತ ಹಿರಿಯ ಕಛೇರಿ ಸಹಾಯಕಿ ಎಸ್. ಸಿ. ಮಾಲತಿ,ಲೆಕ್ಕಪರಿಶೋಧಕ ಫ್ರಾನ್ಸಿಸ್ ಪಿ.ಡಬ್ಲ್ಯು, ನಿವೃತ್ತ ಉಪನೋಂದಣಿಧಾಕಾರಿ ಕೆ.ಎಂ.ಭಾನುಮತಿ ಮೈಸೂರಿನ ಉದ್ಯಮಿ ಬಿ.ವಿ.ವೆಂಕಪ್ಪ , ಶಾಲಾ ಸಮಿತಿಯ ಪೋಷಕ ಸದಸ್ಯ ಹೆಚ್.ಎಸ್ ಗಣೇಶ್ , ಸವಿತ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರಿನ ಖ್ಯಾತಕಲಾವಿದರಿಂದ ಸಂಗೀತ, ನೖತ್ಯ ಕಾಯ೯ಕ್ರಮ ಆಯೋಜಿತವಾಗಿದೆ ಎಂದು ಸಂಸ್ಥೆಯ ಅಧ್ಕ್ಷಕ್ಷ ಕನ೯ಲ್ ಬಿ.ಜಿ.ವಿ.ಕುಮಾರ್ ತಿಳಿಸಿದರು. ಡಿ.28 ರಂದು  ಬೆಳಗ್ಗೆ 11 ಗಂಟೆಗೆ 20 ಲಕ್ಷ ರುಪಾಯಿ ಅಂದಾಜು ವೆಚ್ಚದಲ್ಲಿ ನಿಮಿ೯ಸಲಾಗಿರುವ ಭೋಜನಾಲಯವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಉದ್ಘಾಟಿಸಲಿದ್ದು, ಸಭಾ ಕಾಯ೯ಕ್ರಮವನ್ನು ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಸುಜಾಕುಶಾಲಪ್ಪ ಉದ್ಘಾಟಿಸಲಿದ್ದಾರೆ, ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೆಫ್ಪಿನೆಂಟ್ ಕನ೯ಲ್ ಸಿ.ಪಿ. ಕಾಯ೯ಪ್ಪ, ರಾಜ್ಯ ಸಕಾ೯ರದ ಚೀಫ್ ಎಲೆಕ್ಟಿಕಲ್ ಇನ್ಸ್ ಪೆಕ್ಟರ್ ರೋಷನ್ ಅಪ್ಪಚ್ಚು, ಅರಣ್ಯ ಮಹಾವಿದ್ಯಾಲಯದ ನಿವೖತ್ತ ಡೀನ್ ಸಿ.ಜಿ. ಕುಶಾಲಪ್ಪ, ಮಾಜಿ ಸಚಿವರಾದ ಎಂ.ಪಿ ಅಪ್ಪಚ್ಚು ರಂಜನ್, ಬಿ.ಎ.ಜೀವಿಜಯ, ಪಾಂಡಿಚೇರಿ ಸಕಾ೯ರದ ಪ್ರವಾಸೋದ್ಯಮ ಇಲಾಖೆಯ ನಿವೃತ್ತ ಕಾಯ೯ದಶಿ೯ ಬಿ.ಆರ್. ಬಾಬು ಸಂಸ್ಥೆಯ ಮಹಾಪೋಷಕ ಗೌತಮ್ ಬಸಪ್ಪ, ಎಂ.ಜಿ ಬೋಪಣ್ಣ, ಕಾಯ೯ದಶಿ೯ ಎಂ.ಬಿ. ಬೋಪಣ್ಣ ಜಿ.ಪಂ.ನ ನಿವೖತ್ತ ಮುಖ್ಯ ಲೆಕ್ಕಧಿಕಾರಿ ಬಿ.ಬಿ. ಪುಪ್ಪಾವತಿ, ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಮುಖ್ಯಶಿಕ್ಷಕಿ ಕೆ.ಯು.ರೀಟಾ ಪಾಲ್ಗೊಳ್ಳಲಿದ್ದಾರೆ ವಜ್ರದೀವಿಗೆ ಸ್ಮರಣ ಸಂಚಿಕೆಯನ್ನೂ ಲೋಕಾಪ೯ಣೆ ಮಾಡಲಾಗುತ್ತದೆ. ಸಭಾ ಕಾಯ೯ಕ್ರಮದ ನಂತರ ಸಂಸ್ಥೆಯ ವಿದ್ಯಾಥಿ೯ಗಳಿಂದ ವೈವಿಧ್ಯಮಯ ಸಾಂಸ್ಕೖತಿಕ ಕಾಯ೯ಕ್ರಮ ಆಯೋಜಿತವಾಗಿದೆ ಎಂದೂ ಕನ೯ಲ್ ಕುಮಾರ್ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಮಾತನಾಡಿ, ಮುಂದಿನ ಶೈಕ್ಷಣಿಕ ವಷ೯ದಿಂದ ಎಲ್ ಕೆಜಿ ಮತ್ತು ಯುಕೆಜಿಯನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಾರಂಭಿಸಲಾಗುತ್ತದೆ, ಪ್ರಸ್ತುತ ಸಂಸ್ಥೆಯಲ್ಲಿ 300 ವಿದ್ಯಾಥಿ೯ಗಳು ಶಿಕ್ಷಣ ಪಡೆಯುತ್ತಿದ್ದು, ಸುಸಜ್ಜಿತವಾದ 40 ಕಂಪ್ಯೂಟರ್ ಹೊಂದಿರುವ ಲ್ಯಾಬ್, 5 ಸಾವಿರ ಪುಸ್ತಕಗಳ ಗ್ರಂಥಾಲಯ, ಪ್ರಯೋಗಾಲಯ, 500 ಜನ ಕೂರಬಹುದಾದ ಸಭಾಂಗಣ, ವಿಶಾಲವಾದ ಆಟದ ಮೈದಾನವನ್ನು ಶಿಕ್ಷಣ ಸಂಸ್ಥೆಯು ವಿದ್ಯಾಥಿ೯ಗಳಿಗಾಗಿ ಹೊಂದಿದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ನಿದೇ೯ಶಕರಾದ ಬಿ.ಎ.ನಾಣಿಯಪ್ಪ, ಸಿ.ಪಿ. ಮುದ್ದಪ್ಪ, ಉಪನ್ಯಾಸಕ ಮೋಹನ್ ಹೆಗ್ಗಡೆ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.