
ಮಡಿಕೇರಿ ಡಿ.20 NEWS DESK : ಮಡಿಕೇರಿಯ ಕನಕ ದಾಸ ರಸ್ತೆಯು ಸಂಪೂರ್ಣವಾಗಿ ಹದಗಿಟ್ಟಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ತಕ್ಷಣವೇ ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ನಗರ ಸಭಾ ಸದಸ್ಯ ಎಂ.ಎ.ಮುಸ್ತಫಾ ಒತ್ತಾಯಿಸಿದ್ದಾರೆ. ನಗರಸಭೆ ಪೌರಾಯುಕ್ತ ಹೆಚ್.ಆರ್.ರಮೇಶ್‍ಗೆ ಮನವಿ ಸಲ್ಲಿಸಿದ ಅವರು, ರಸ್ತೆ ಅವ್ಯವಸ್ಥೆ ಕುರಿತು ಗಮನ ಸೆಳೆದರು. ಈಗಾಗಲೇ ಈ ರಸ್ತೆಯಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುವಂತಾಗಿದ್ದು, ತಕ್ಷಣ ದುರಸ್ತಿ ಪಡಿಸುವಂತೆ ಒತ್ತಾಯಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಪೌರಾಯುಕ್ತರು ಶೀಘ್ರದಲ್ಲೇ ಸರಿಪಡಿಸಲಾಗುವುದೆಂದು ಭರವಸೆ ನೀಡಿದರು.









