Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ : ಸುಶಿಕ್ಷಿತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮುಖ್ಯ : ಡಾ.ಬರ್ನಾಡ್ ಮೋರಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ : ಸುಶಿಕ್ಷಿತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮುಖ್ಯ : ಡಾ.ಬರ್ನಾಡ್ ಮೋರಸ್*

ಡಿಸೆಂಬರ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.21 NEWS DESK :  ಶಿಕ್ಷಣ ಸಂಸ್ಥೆಗಳು ಒಬ್ಬ ವ್ಯಕ್ತಿಗೆ ಉತ್ತಮ ಶಿಕ್ಷಣ ನೀಡಿ  ಸುಸಂಸ್ಕೃತರನ್ನಾಗಿ ಮಾಡುತ್ತದೆ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಉತ್ತಮ ವಿದ್ಯಾರ್ಥಿಯನ್ನು ಕೊಡಗೆಯಾಗಿ ನೀಡುತ್ತದೆ ಎಂದು ಮೈಸೂರು ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಹಾಗೂ ಪ್ರಧಾನ ಧರ್ಮಗುರು ಡಾ.ಬರ್ನಾಡ್ ಮೋರಸ್ ಹೇಳಿದರು. ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧರ್ಮಗುರುಗಳು ಮನುಜನಿಗೆ ಗ್ರಹಿಸಲು ಜ್ಞಾನಿಸಲು ಶಿಕ್ಷಣ ಬಹುಮುಖ್ಯವಾಗಿದೆ. ಶಿಕ್ಷಿತರೇ ಇಂದು ಭ್ರಷ್ಟಚಾರದಂತ ಕೃತ್ಯಗಳಲ್ಲಿ ಭಾಗಿಗಳಾಗಿ ಸಮಾಜಕ್ಕೆ ಮಾರಕವಾಗಿದ್ದಾರೆ. ತಮ್ಮ ಜೀವನಕ್ಕೆ ಆದ್ಯಾತ್ಮಿಕ ಮೌಲ್ಯಗಳು ಒಳಪಡಿಸಿಕೊಂಡು ಮಾನವನಾಗಿ ಜೀವಿಸಲು ಕಲಿಯಬೇಕು. ಪ್ರತಿಯೋಬ್ಬನು ಶಿಕ್ಷೀತನಾದಲ್ಲಿ  ಮಾತ್ರ ಉತ್ತಮ ಸಮಾಜ ರೂಪಿಸಿಲು ಸಾದ್ಯ. ಈ ನಿಟ್ಟಿನಲ್ಲಿ ಮೈಸೂರು ಧರ್ಮ ಕೇಂದ್ರಕ್ಕೆ ಒಳಪಟ್ಟಿರುವ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಸೃಷ್ಟಿಸಿದೆ. ಇಲ್ಲಿ ವಿದ್ಯಾಭ್ಯಾಸ ಪಡದ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥರಗಳಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಪಾರಿವಾಳಗಳನ್ನು ಹಾರಿಬಿಟ್ಟು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅರಮೇರಿ ಕಳಂಚೇರಿ ಮಠದ ಪಿಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಶತಮಾನಗಳಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣವನ್ನು ಪೂರೈಸಿಕೊಂಡು ಬರುತ್ತಿರುವ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ಕಾರ್ಯವೈಖರಿ ಸಮಾಜದಲ್ಲಿ ಪ್ರಚಲಿತದಲ್ಲಿದೆ. ಶಿಕ್ಷಣ ಮತ್ತು ಸಂಸ್ಕಾರದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾದ್ಯ. ನಾವುಗಳು ಗಳಿಸುವ ಶಿಕ್ಷಣ ಸೇವಾ ಮನೋಭಾವದ ಕಾರ್ಯಕ್ಕೆ ವಿನಿಯೋಗವಾಗಬೇಕು. ಪ್ರಸ್ತುತ ಮಾದ್ಯಮಗಳಲ್ಲಿ ಕೊಲೆ, ಸುಲಿಗೆ, ಅಪರಾಧ ಕೃತ್ಯಗಳನ್ನು ಕಾಣುತಿದ್ದೇವೆ. ಇದರಲ್ಲಿ ಭಾಗಿಗಳಾಗುವವರು ಶಿಕ್ಷೀತರಾಗಿದ್ದಾರೆ. ಇದು ಸಮಾಜಕ್ಕೆ ಅಪಾಯಕಾರಿ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಶಿಕ್ಷಣವು ಗಳಿಕೆಗೆ ಮಾತ್ರ ಸೀಮಿತವಾಗದೆ ಸಮಾಜದ ಸೇವೆಗೆ ಉಪಯುಕ್ತವಾದಲ್ಲಿ ಮಾತ್ರ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು. ಪ್ರಾಸ್ತಾವಿಕ ಭಾಷಣ ಮಾಡಿದ ಎಂ.ಡಿ.ಇ.ಎಸ್. ಮೈಸೂರು ಕಾರ್ಯದರ್ಶಿ ರೆ.ಫಾ. ಎಡ್ವರ್ಡ್ ವಿಲಿಯಮ್ ಸಲ್ಡಾನ  ಮಾತನಾಡಿ ವಿದ್ಯೆ ಇರುವುದು ಹೊಟ್ಟೆಪಾಡಿಗಾಗಿ. ಪದವಿ ಮತ್ತು ಸ್ನಾತ್ತಕೊತ್ತರ ಪದವಿಗಳನ್ನು ಪಡೆಯುವುದು ಗಳಿಕೆಗಾಗಿ ಮತ್ತು ಉತ್ತಮ ಜೀವನ ನಿರ್ವಾಹಣೆಗಾಗಿ ಎಂದು ತಿಳಿಯುವ ಬದಲು ವಿದ್ಯಾವಂತರಾಗಲು ಮತ್ತು ಸುಸಂಸ್ಕೃತರಾಗಲು ಎಂದು ತಿಳಿಯಬೇಕು ಎಂದು ಹೇಳಿದರು. ಪೋಷಕರು ಇಂದು ಮಕ್ಕಳ ಮೇಲೆ ವಿದ್ಯಾರ್ಜನೆಗಾಗಿ ಬಂಡವಾಳ ಹೂಡಿಕೆ ಮಾಡುತ್ತಾ ಹಲವು ಕಸನುಗಳನ್ನು ಕಾಣುತ್ತಿದ್ದಾರೆ. ಆದರೆ ಶಿಕ್ಷಣ ಪಡೆದ ಯುವಕ ಯುವತಿಯರು ತಕ್ಕ ಪದವಿಗೆ ಉದ್ಯೋಗ ದೊರಕದೆ ಕಂಗಾಲಾಗಿದ್ದಾರೆ. ಪೋಷಕರು ಮಕ್ಕಳ ಮೇಲೆ ಹೂಡಿಕೆ ಮಾಡುವ ಬದಲು ಬದುಕು ನಡೆಸುವ ಜ್ಞಾನವನ್ನು ವಿನಿಯೋಗ ಮಾಡಬೇಕು. ರೈತ ಎಂದಿಗೂ ವಿದ್ಯೆ ಕಲಿತವನಲ್ಲ. ಆದರೇ ಪ್ರಾಕೃತಿಕವಾಗಿ ಜ್ಞಾನವನ್ನು ಸಂಪಾದಿಸಿದ್ದಾನೆ ಎಂದು ಹೇಳಿದರು. ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾತನಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯ ಉಪಯೋಗಕ್ಕೆ ಬಲಿಯಾಗಬಾರದು. ವಾಹನ
ಚಾಲನೆಯಲ್ಲಿ ನಿಯಮಗಳನ್ನು ಪಾಲಿಸುವಂತರಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಲ್.ಕೆ.ಜಿ ಯಿಂದ ಪದವಿ, ಸ್ನಾತ್ತಕೊತ್ತರ ಪದವಿ ಯ ವರೆಗಿನ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪಾರಿತೋಷಕ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ  ಬಿಂದು, ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಸಹಾಯಕ ಧರ್ಮಗುರು ರೆ.ಫಾ. ಮುದಲೈ ಮುತ್ತು, ಪ್ರಧಾನ ಧರ್ಮಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಪ್ರೌಢಶಾಲೆಯ ಪ್ರಾಂಶುಪಾಲರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಐಡಾ ಮತ್ತು ಸಿಸ್ಟರ್ ರೋಸಿ, ಸಂತ ಅನ್ನಮ್ಮ ಪಾಲಕ ಮತ್ತು ಶಿಕ್ಷಕರ ಸಂಘದ ಉಪಾಧ್ಯಕ್ಷ ಜೋಕಿಂ ರೋಡ್ರಿಗಸ್, ಡಿ.ಸಿ.ಸಿ ಹಾಗೂ ಕೆ.ಡಿ.ಪಿ ಸದಸ್ಯರಾದ ಮರ್ವಿನ್ ಲೋಬೋ ಉಪಸ್ಥಿತರಿದ್ದರು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್  ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ  ಡಾ.ಹೇಮಂತ್  ವಂದಿಸಿದರು. ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರು, ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.