Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಕೆಪಿಎಸ್ ಶಾಲೆಯಲ್ಲಿ ಪರೀಕ್ಷಾ ಸಿದ್ಧತೆ ಪ್ರೇರಣಾ ಕಾರ್ಯಕ್ರಮ : ನಿರಂತರ ಕಲಿಕೆಯಿಂದ ಯಶಸ್ಸು ಸಾಧ್ಯ : ಬಿ.ಜಿ ಅನಂತಶಯನ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ಕೆಪಿಎಸ್ ಶಾಲೆಯಲ್ಲಿ ಪರೀಕ್ಷಾ ಸಿದ್ಧತೆ ಪ್ರೇರಣಾ ಕಾರ್ಯಕ್ರಮ : ನಿರಂತರ ಕಲಿಕೆಯಿಂದ ಯಶಸ್ಸು ಸಾಧ್ಯ : ಬಿ.ಜಿ ಅನಂತಶಯನ ಸಲಹೆ*

ಡಿಸೆಂಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.23 NEWS DESK : ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಪ್ರಮುಖ ಘಟ್ಟವಾಗಿದ್ದು, ಯಶಸ್ಸಿನ ಮೆಟ್ಟಿಲನ್ನು ಏರಲು ವಿದ್ಯಾರ್ಥಿಗಳು ಸತತವಾಗಿ ಶ್ರಮವಹಿಸಬೇಕು ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ ಅನಂತಶಯನ ಹೇಳಿದರು. ಕೆಪಿಎಸ್ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪರೀಕ್ಷಾ ಸಿದ್ಧತೆ ಪ್ರೇರಣಾ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಅಸಾಧ್ಯವಾದದ್ದು, ಏನೂ ಇಲ್ಲ. ಗುರು ನಿಮ್ಮ ಭವಿಷ್ಯವನ್ನು ರೂಪಿಸುತ್ತಾರೆ. ಅದಕ್ಕೆ ಗುರುವಿಗೆ ದೇವರ ಸ್ಥಾನವನ್ನು ಕಲ್ಪಿಸಲಾಗಿದೆ ಎಂದರು. ಭವಿಷ್ಯವನ್ನು ರೂಪಿಸಲು ಅಧಿಕ ತಯಾರಿ ನಡೆಸಬೇಕಾಗುತ್ತದೆ. ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಸಮಾಜವನ್ನು ಬೆಳೆಸುವ, ಕಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದ ಅವರು ತಯಾರಿಗೆ ಸಮಯ ವ್ಯರ್ಥ ಮಾಡದೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕೂಡಿಗೆ ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಮಾತನಾಡಿ, ಬದಲಾದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸ್ನೇಹಿತರನ್ನಾಗಿ ಶಿಕ್ಷಣ ಇಲಾಖೆ ನೋಡುತ್ತಿದೆ. ಈಗಿನ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಮತ್ತು ಸೌಲಭ್ಯವಿದೆ. ಪರೀಕ್ಷೆ ಎಂದರೆ ಭಯ ಬೇಡ ಎಂದ ಅವರು, ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಪರವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಮನೆಯಲ್ಲಿ ಸಮಸ್ಯೆ ಇದ್ದರೆ ಪೆÇೀಷಕರೊಂದಿಗೆ, ಶಾಲೆಯಲ್ಲಿ ಸಮಸ್ಯೆ ಇದ್ದರೆ ಶಿಕ್ಷಕರೊಂದಿಗೆ, ಆರೋಗ್ಯದಲ್ಲಿ ಸಮಸ್ಯೆ ಇದ್ದರೆ ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚಿಸಿ, ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಯ ಏಳಿಗೆಗೆ ಶ್ರಮಿಸಲಾಗುವುದು ಎಂದು ಹೇಳಿದರು. ವಿದ್ಯಾರ್ಥಿಗಳು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು ಎಂದ ಅವರು ಪ್ರಾಮಾಣಿಕವಾಗಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣವಾಗುವ ಜವಾಬ್ದಾರಿಯನ್ನು ಹೊಂದಬೇಕು ಎಂದರು. ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಎಸ್ ಎಲ್ ಸಿ ಒಂದು ಪ್ರಮುಖ ಘಟ್ಟ. ನಾಪೋಕ್ಲು ಭಾಗದಲ್ಲಿ ವಿದ್ಯಾರ್ಥಿಗಳಲ್ಲಿ ಓದುವ ಮನೋಭಾವನೆ ಕಡಿಮೆ ಇರುವುದು ಕಂಡುಬರುತ್ತಿದೆ ಎಂದ ಅವರು ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆಯಿಂದ ಉತ್ತಮವಾಗಿ ಓದದಿದ್ದರೆ ಸಮಸ್ಯೆಯ ಸುಳಿಯೊಳಗೆ ಸಿಲುಕುತ್ತಾರೆ. ಇದನ್ನು ಮನಗಂಡು ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಎಸ್‍ಎಲ್ಸಿ ಪರೀಕ್ಷೆಯನ್ನು ಭಯವಿಲ್ಲದೆ ಎದುರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರೇರಣಾ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಲೇಖಕ ಸಾಹಿತಿ ಭಾರಧ್ವಾಜ ಕೆ.ಆನಂದ, ಸರಕಾರಿ ಪ್ರೌಢಶಾಲೆ, ಕಡಗದಾಳು ಗಣಿತ ಶಿಕ್ಷಕಿ ಹೆಚ್.ಎನ್.ಭಾರತಿ, ಊ.ರ. ನಾಗೇಶ್, ನಿವೃತ್ತ ಶಿಕ್ಷಕರು ಕುಶಲನಗರ, ಶಿಕ್ಷಣ ಸಂಯೋಜಕ ಕೆಪಿಎಸ್ ಶಾಲೆಯ ಉಪಪ್ರಾಂಶುಪಾಲ ಶಿವಣ್ಣ ಎಂ.ಎಸ್, ಶಿಕ್ಷಣ ಸಂಯೋಜಕಿ ಜಾನೆಟ್, ಕೊಡುಗೆ ಡಯಟ್ ನ ಹಿರಿಯ ಉಪನ್ಯಾಸಕ ಸ್ವಾಮಿ, ಬಿಆರ್ ಸಿ ಗುರುರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿ ಸರಳ ಗಣಿತ, ಬೆರಳಿನಿಂದ ಎಣಿಕೆ, ಪ್ರಶ್ನ ಪತ್ರಿಕೆ ವಿನ್ಯಾಸ, ನೀಲಿ ನಕ್ಷೆ ಎಂಬ ವಿಷಯಗಳ ಬಗ್ಗೆ ತಿಳಿಸಿ ಪ್ರತಿ ಪಾಠಗಳಿಗೆ ಹಂಚಿಕೆಯಾಗಿರುವ ಅಂಕಗಳ ಬಗ್ಗೆ ಹಾಗೂ ಒಂದು ವರ್ಷದಲ್ಲಿ ಓದಿದ ವಿಷಯಗಳನ್ನು ಮೂರು ಗಂಟೆಯಲ್ಲಿ ಬರೆಯಬೇಕಾದ ಸವಾಲುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭ ಎಸ್ ಡಿ ಎಂ ಸಿ ಪದಾಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು, ನರಿಯಂದಡ ಕೇಂದ್ರ ಪ್ರೌಢಶಾಲೆ, ಕಕ್ಕಬ್ಬೆ ಪ್ರೌಢಶಾಲೆ, ನೇತಾಜಿ ಪ್ರೌಢಶಾಲೆ, ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಇನ್ನಿತರ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.