Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಮಟ್ಟದ‌ ಮಕ್ಕಳ ಮೇಳಕ್ಕೆ ವರ್ಣರಂಜಿತ ತೆರೆ : ಸ್ಕೌಟ್ಸ್, ಗೈಡ್ಸ್ ಉತ್ತಮ ವ್ಯಕ್ತಿತ್ವ ರೂಪಿಸಲು ಸಹಕಾರಿ : ಬೇಬಿ ಮ್ಯಾಥ್ಯೂ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಮಟ್ಟದ‌ ಮಕ್ಕಳ ಮೇಳಕ್ಕೆ ವರ್ಣರಂಜಿತ ತೆರೆ : ಸ್ಕೌಟ್ಸ್, ಗೈಡ್ಸ್ ಉತ್ತಮ ವ್ಯಕ್ತಿತ್ವ ರೂಪಿಸಲು ಸಹಕಾರಿ : ಬೇಬಿ ಮ್ಯಾಥ್ಯೂ*

ಡಿಸೆಂಬರ್ 23, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಡಿ.23 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ ( ರ್‍ಯಾಲಿ ) ಕ್ಕೆ ವರ್ಣರಂಜಿತ ತೆರೆಬಿದ್ದಿತು. ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 600 ಮಕ್ಕಳು ಎರಡು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿವಿಧ ತರಬೇತಿ/ ಚಟುವಟಿಕೆಗಳಲ್ಲಿ ತಮ್ಮನ್ನು
ಸಕ್ರಿಯವಾಗಿ ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹತ್ವವನ್ನು ಸಾರಿದರು. ಶಿಕ್ಷಕರು ತರಬೇತಿ ನಿರತ ವಿದ್ಯಾರ್ಥಿಗಳಿಗೆ ವಿವಿಧ ಅಭ್ಯಾಸಾತ್ಮಕ ತರಬೇತಿ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಸ್ಕೌಟ್, ಗೈಡ್ ಆಂದೋಲನದ ಉದ್ದೇಶವು ವಿದ್ಯಾರ್ಥಿಗಳು, ಯುವಕರಲ್ಲಿ ಉತ್ತಮ ನಾಯಕತ್ವದೊಂದಿಗೆ ದೈಹಿಕ, ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಸಹಾಯ ಮಾಡುವ ಮೂಲಕ ಅವರನ್ನು ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಮುಖ್ಯ ಧ್ಯೇಯವಾಗಿದೆ ಎಂದರು. ಶಾಲಾ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ. ಎರಡು ದಿನಗಳ ಕಾಲ ಕುಶಾಲನಗರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ‌ ಮಕ್ಕಳ ಮೇಳ ( ರ್‍ಯಾಲಿ ) ದ ಯಶಸ್ವಿ ಸಂಘಟನೆಗೆ ಶ್ರಮಿಸಿದವರನ್ನು ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳ ಶ್ರಮದ ಕುರಿತು ಶ್ಲಾಘಿಸಿದರು. ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್, ಗೈಡ್ಸ್ ನ ಮಕ್ಕಳ ಮೇಳವು ಮಕ್ಕಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸ್ನೇಹಪರತೆ ಹಾಗೂ ಏಕತೆ ಬೆಳೆಸುವಲ್ಲಿ ಸಹಕಾರಿಯಾಗಿದೆ. ಇಂತಹ ಮೇಳವನ್ನು ಸಂಘಟಿಸಲು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ , ಎರಡು ದಿನಗಳ ಕಾಲ ಮಕ್ಕಳ ಮೇಳದಲ್ಲಿ ಮಕ್ಕಳಿಗೆ ಕಲಿಸಲಾದ ತರಬೇತಿ ವಿವರಗಳನ್ನು ತಿಳಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಹೇಳಿದರು. ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘ( ಗ್ರೇಡ್ – 1 ) ದ ಅಧ್ಯಕ್ಷ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಮಕ್ಕಳಲ್ಲಿ ಸ್ವಯಂ ಶಿಸ್ತು- ಸಂಯಮ ಬೆಳೆಸುವುದರೊಂದಿಗೆ ಅವರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ , ಎರಡು ದಿನಗಳ ಕಾಲ ನಡೆದ ಶಿಬಿರದ ಕುರಿತು ಮಾಹಿತಿ ನೀಡಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ, ಜಿಲ್ಲಾ ತರಬೇತಿ ಆಯುಕ್ತರಾದ ಕೆ.ಯು.ರಂಜಿತ್, ಎಚ್. ಮೈಥಿಲಿರಾವ್, ಸಂಸ್ಥೆಯ ರಾಜ್ಯ ಪ್ರತಿನಿಧಿ
ಬಿ.ಎಸ್.ಕಾವೇರಿ, ಗೈಡ್ಸ್ ನ ಪ್ರಮುಖರಾದ ಕೆ.ಬಿ.ಉಷಾರಾಣಿ, ಎನ್.ಎಸ್.ಇಂದಿರಾ, ಸಂಪನ್ಮೂಲ ವ್ಯಕ್ತಿ ಟಿ.ಬಿ.ಕುಮಾರಸ್ವಾಮಿ, ಫ್ಲಾಕ್ ಲೀಡರ್ ಬಿ.ಕೆ.ಲಲಿತಾ , ಗೈಡ್ ಕ್ಯಾಪ್ಟನ್ ಬಿ.ಬಿ.ಜಾಜಿ, ಬುಲ್ ಬುಲ್ ಫ್ಲಾಕ್ ಲೀಡರ್ ಎಂ. ಡೈಸಿ ಫ್ರಾನ್ಸಿಸ್ , ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕುಶಾಲನಗರ
ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಂ.ತಮ್ಮಯ್ಯ, ಉಪಾಧ್ಯಕ್ಷರಾದ ಕೆ.ವಿ.ಅರುಣ್, ರಾಜೇಗೌಡ, ಕೆ.ಪಿ.ರಾಜು, ತೀರ್ಥೇಶ್ ಕುಮಾರ್, ಶಾಂತಿ, ರೋಹಿಣಿ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಸಿ.ಆರ್.ಪಿ., ಟಿ.ಈ.ವಿಶ್ವನಾಥ್ ,ಸ್ಥಳೀಯ ಸಂಸ್ಥೆಯ ಸದಸ್ಯರಾದ ಜಯರಾಜ್ ಆಚಾರ್ಯ, ವಸಂತ್, ಸನ್ನಿ ತಮ್ಮಯ್ಯ, ಸಂತೋಷ್ , ಸಂಸ್ಥೆಯ ವಿವಿಧ ಹಂತದ ಪದಾಧಿಕಾರಿಗಳು, ಸ್ಕೌಟ್ಸ್ ಮಯ ಗೈಡ್ಸ್ ನ ದಳ ನಾಯಕರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಗಮನ ಸೆಳೆದ ಶಿಬಿರಾಗ್ನಿ ಶಿಬಿರ:: ಮಕ್ಕಳ ಮೇಳದ ಅಂಗವಾಗಿ ಏರ್ಪಡಿಸಿದ್ದ ಶಿಬಿರಾಗ್ನಿ ಶಿಬಿರ ಗಮನ ಸೆಳೆಯಿತು. ಶಿಬಿರಾಗ್ನಿಗೆ ಮಡಿಕೇರಿ ಬಿಇಓ ಡಾ ಬಿ.ಸಿ.ದೊಡ್ಡೇಗೌಡ ಚಾಲನೆ ನೀಡಿದರು. ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್ ಶಿಬಿರಾಗ್ನಿ ಶಿಬಿರ ನಿರ್ವಹಿಸಿದರು. ಸಿ.ಆರ್.ಪಿ., ಟಿ.ಇ.ವಿಶ್ವನಾಥ್ ಮತ್ತು ಸಂಸ್ಥೆಯ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಇದ್ದರು. ಶಿಬಿರಾಗ್ನಿ ವೇಳೆ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಮಕ್ಕಳು ಪ್ರದರ್ಶಿಸಿದ ಹಾಡು, ನೃತ್ಯ ಗಮನ ಸೆಳೆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.