Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕದಲ್ಲಿ ಮೊಟ್ಟ ಮೊದಲ ಮೂಳೆ ದಾನ : ಸಾವಿನಲ್ಲೂ ಸಾರ್ಥಕತೆ ಮೆರೆದ ಜಂಬೂರು ಗ್ರಾಮದ ಈಶ್ವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕದಲ್ಲಿ ಮೊಟ್ಟ ಮೊದಲ ಮೂಳೆ ದಾನ : ಸಾವಿನಲ್ಲೂ ಸಾರ್ಥಕತೆ ಮೆರೆದ ಜಂಬೂರು ಗ್ರಾಮದ ಈಶ್ವರ*

ಡಿಸೆಂಬರ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.23 NEWS DESK : ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬುವವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಇದೇ ಡಿ.21 ರಂದು ರಾತ್ರಿ ತಾವು ಚಲಾಯಿಸುತ್ತಿದ್ದ ಪಿಕ್ ಅಪ್ ವಾಹನ ಗರಗಂದೂರು ಬಳಿ ನಿಯಂತ್ರಣ ಕಳೆದುಕೊಂಡು ಮಗುಚಿಕೊಂಡ ಪರಿಣಾಮ ಈಶ್ವರ್ ಎನ್. ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ನಿಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಈಶ್ವರ ಅವರು ಗಂಭೀರ ಸ್ಥಿತಿಯಲ್ಲಿದ್ದ ವಿಚಾರವನ್ನು ವೈದ್ಯರು ಅವರ ಸಹೋದರಿ ಸೌಮ್ಯ ಬಳಿ ತಿಳಿಸಿದಾಗ ಸ್ವಯಂಪ್ರೇರಿತರಾಗಿ ಅಂಗಾಂಗ ದಾನದ ಕುರಿತು ಆಸಕ್ತಿ ತೋರಿದರು. ಕಸಿ ಸಂಯೋಜಕರಾದ ಅಕ್ಷತಾ ಶೆಟ್ಟಿ ಹಾಗೂ ನರಶಸ್ತ್ರ ಚಿಕಿತ್ಸಕರು ಸೇರಿದಂತೆ ವೈದ್ಯಕೀಯ ತಂಡ ಸಮಾಲೋಚನೆ ನಡೆಸಿತು. ನಂತರ ಸಹೋದರಿ ಸೌಮ್ಯ ಹಾಗೂ ಕುಟುಂಬ ವರ್ಗ ಈಶ್ವರ ಅವರ ಮೂಳೆಗಳನ್ನು ಕಸಿ ಮಾಡಲು ದಾನ ನೀಡುವುದಾಗಿ ಒಪ್ಪಿಕೊಂಡರು. ಕೌನ್ಸಿಲಿಂಗ್ ಪ್ರಕ್ರಿಯೆಯ ಮೂಲಕ ದಾನದ ಪ್ರಯೋಜನಗಳು ಮತ್ತು ಸ್ವೀಕರಿಸುವವರ ಮೇಲೆ ಅದು ಬೀರಬಹುದಾದ ಪ್ರಭಾವವನ್ನು ಕುಟುಂಬವು ಅರ್ಥಮಾಡಿಕೊಂಡಿದೆ ಎಂದು ವೈದ್ಯರ ತಂಡ ಖಚಿತ ಪಡಿಸಿಕೊಂಡಿತು. ಇದು ಮೆಡಿಕೋ-ಲೀಗಲ್ ಪ್ರಕರಣವಾಗಿರುವುದರಿಂದ, ದಾನ ನೀಡುವ ಮೊದಲು ಪೊಲೀಸರು ಮತ್ತು ಈಶ್ವರ ಅವರ ಹತ್ತಿರದ ಸಂಬಂಧಿಕರಿಂದ ಅಗತ್ಯ ಅನುಮತಿಯನ್ನು ಪಡೆಯಲಾಯಿತು. ಆರ್ಥೋಪೆಡಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ವಿಕ್ರಂ ಶೆಟ್ಟಿ ನೇತೃತ್ವದಲ್ಲಿ ಪ್ರೊ.ಎಂ.ಶಾಂತರಾಮ ಶೆಟ್ಟಿ ಹಾಗೂ ಶಸ್ತ್ರಚಿಕಿತ್ಸಾ ತಂಡ ಮೂಳೆಯನ್ನು ಬೇರ್ಪಡಿಸಿತು. ಮೃತದೇಹದ ಮೂಳೆಗಳ ಸ್ಥಳದಲ್ಲಿ ಪ್ಲಾಸ್ಟಿಕ್ ಮೂಳೆಗಳನ್ನು ಸೇರಿಸಲಾಯಿತು. ಈ ಮೂಳೆ ದಾನದಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತ ಆರು ಮಕ್ಕಳ ಕೈಕಾಲುಗಳನ್ನು ಸಮರ್ಥವಾಗಿ ಉಳಿಸಬಹುದು. ಮೂಳೆಗಳನ್ನು ಅಂಗ ಉಳಿಸುವ ಶಸ್ತ್ರಚಿಕಿತ್ಸೆಗಳಿಗೆ ಬಳಸಲಾಗುತ್ತದೆ. ಯುವ ಕ್ಯಾನ್ಸರ್ ರೋಗಿಗಳಿಗೆ ಹೊಸ ಭರವಸೆಯನ್ನು ನೀಡುತ್ತದೆ ಎಂದು ಡಾ.ವರುಣ್ ಶೆಟ್ಟಿ ಹೇಳಿದ್ದಾರೆ. ಈ ದಾನವನ್ನು ಕರ್ನಾಟಕದಲ್ಲಿ ಪ್ರವರ್ತಕ ಉಪಕ್ರಮವೆಂದು ಶ್ಲಾಘಿಸಲಾಗುತ್ತಿದೆ. ಇದು ರಾಜ್ಯದಲ್ಲಿಯೇ ಮೊಟ್ಟಮೊದಲ ಮೃತದೇಹದ ಮೂಳೆ ದಾನವಾಗಿದ್ದು, ಪರಹಿತಚಿಂತನೆಯ ಕಾರ್ಯಗಳನ್ನು ಬೆಂಬಲಿಸುವಲ್ಲಿ ಆರೋಗ್ಯ ಸಂಸ್ಥೆಗಳು ಮತ್ತು ಕುಟುಂಬಗಳ ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸುತ್ತದೆ. ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಶೆಟ್ಟಿ ಅವರು ಕುಟುಂಬದ ಬೆಂಬಲ, ಸಹಕಾರ ಮತ್ತು ವೈದ್ಯಕೀಯ ತಂಡದ ಪರಿಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. *(ಬರಹ : ತೇಲಪಂಡ ಶಿವಕುಮಾರ್ ನಾಣಯ್ಯ 9845440267)*  

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.