Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ : ಮುಖ್ಯಮಂತ್ರಿ ಸಿದ್ದರಾಮಯ್ಯ* 
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ : ಮುಖ್ಯಮಂತ್ರಿ ಸಿದ್ದರಾಮಯ್ಯ* 

ಡಿಸೆಂಬರ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಳಗಾವಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು ::  2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.

ಅವರ ನಿಧನದಿಂದ ದೇಶಕ್ಕೆ ದೊಡ್ಡ ನಷ್ಟ ::  ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ ::  ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ ::  ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.