Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ ಮೀಸಲಿಡಿ : ಚಕ್ರವರ್ತಿ ಸೂಲಿಬೆಲೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ : ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ ಮೀಸಲಿಡಿ : ಚಕ್ರವರ್ತಿ ಸೂಲಿಬೆಲೆ*

December 29, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಡಿ.29 : ಯುವ ಪೀಳಿಗೆ ಜೀವನದ ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ, ದೇಶದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಅವರು ಕುಶಾಲನಗರ ವಿವೇಕಾನಂದ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಶಿಸ್ತು ದೃಢತೆ ಮೂಲಕ ಗುರಿ ಸಾಧಿಸಲು ಸಾಧ್ಯ ಎಂದ ಅವರು, ಸ್ವಾಮಿ ವಿವೇಕಾನಂದರ ಕೆಲವು ದೃಷ್ಟಾಂತಗಳನ್ನು ನೆನಪಿಸಿದರು. ಹಣದ ವ್ಯಾಮೋಹ ಮರೆತು ತಮ್ಮ ಉದ್ದೇಶಗಳ ಈಡೇರಿಕೆಗೆ ಸದಾ ಚಟುವಟಿಕೆಯಲ್ಲಿರಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದೆ. ತರಗತಿಗಳಲ್ಲಿ ವಿದ್ಯಾರ್ಥಿಗಳ ಮನೋಬಲವನ್ನು ಕನಿಷ್ಠ ಅವಧಿ ಕೂಡ ಹಿಡಿದಿಟ್ಟುಕೊಳ್ಳುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಕನಿಷ್ಠ ಕೆಲವೇ ಸೆಕೆಂಡುಗಳಷ್ಟು ಅವಧಿಯ ಏಕಾಗ್ರತೆ ಹೊಂದುವ ಮನಸ್ಥಿತಿ ಮಕ್ಕಳಲ್ಲಿ  ಇಲ್ಲದಂತಾಗಿರುವ ಬಗ್ಗೆ  ಆತಂಕ  ವ್ಯಕ್ತಪಡಿಸಿದರು. ಯಾವುದೇ ಕೆಲಸದಲ್ಲಿಯೂ ಹಿಂಜರಿಕೆ ಸಲ್ಲದು, ಗುರಿ ತಲಪುವ ತನಕ ಸಾಧನೆ ಮಾಡುವ ಪ್ರಯತ್ನ ನಿರಂತರವಾಗಿ ಸಾಗಬೇಕು. ತಮ್ಮಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರ ತರುವ ನಿಟ್ಟಿನಲ್ಲಿ ಸದಾ ಜಾಗೃತರಾಗಬೇಕು. ಪೋಷಕರು ಮಕ್ಕಳನ್ನು ಕೇವಲ ಪದವಿ ಪಡೆಯುವ ಯಂತ್ರಗಳನ್ನಾಗಿಸುವುದು ಸರಿಯಲ್ಲ. ಸಮಾಜದ ಆಗು ಹೋಗುಗಳ ಬಗ್ಗೆ ಅರಿವು ಜಾಗೃತಿ ಮೂಡಿಸಬೇಕಾಗಿದೆ ಎಂದರು. ಇಂದಿನ ದಿನಗಳಲ್ಲಿ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು. ವಿಶ್ವದಲ್ಲಿಯೇ ಅಪರೂಪವಾದ ಸಂಸ್ಕೃತಿ ನಮ್ಮ ದೇಶದಲ್ಲಿದ್ದು ಅದನ್ನು ನಶಿಸಿ ಹೋಗದಂತೆ ಎಚ್ಚರ ಅಗತ್ಯ ಎಂದರು. ಕುಶಾಲನಗರ ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಶಂಭುಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿವೇಕಾನಂದ ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಹಿಂದು ಜಾಗರಣ ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕರಾಗಿ ರಂಜನ್ ಗೌಡ ಆಯ್ಕೆ*
Next Article *ಈಶ ಗ್ರಾಮೋತ್ಸವಮ್ : ಮರಗೋಡು ತಂಡ ಚಾಂಪಿಯನ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.