Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಿರಂತರ ಜಾಗೃತಿಯಿಂದ ಕಾವೇರಿ ನದಿ ಸಂರಕ್ಷಣೆ ಸಾಧ್ಯ*
ಇತ್ತೀಚಿನ ಸುದ್ದಿಗಳು

*ನಿರಂತರ ಜಾಗೃತಿಯಿಂದ ಕಾವೇರಿ ನದಿ ಸಂರಕ್ಷಣೆ ಸಾಧ್ಯ*

December 29, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಡಿ.29 : ನಿರಂತರ ಜಾಗೃತಿಯಿಂದ ಕಾವೇರಿ ನದಿ ಸಂರಕ್ಷಣೆ ಸಾಧ್ಯ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯುವ ಬ್ರಿಗೇಡ್ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಕಾವೇರಿ ನಮನ ಕಾರ್ಯಕ್ರಮ ಅಂಗವಾಗಿ  ಭಾನುವಾರ ಕುಶಾಲನಗರ ಕಾವೇರಿ ಸೇತುವೆ ಕೆಳಭಾಗದಲ್ಲಿ ಸಾಂಕೇತಿಕವಾಗಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹರಿಯುವ ನದಿ ಕೋಟ್ಯಂತರ ಜನ ಜಾನುವಾರುಗಳಿಗೆ ಹಲವು ರೀತಿಯಲ್ಲಿ ನಿತ್ಯ ಹಾಸು ಹೊಕ್ಕಾಗಿದ್ದು, ಕಾವೇರಿಯನ್ನು ಕಲುಷಿತಗೊಳಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದ ಅವರು, ಇದರ ಪ್ರತಿಫಲವನ್ನು ಮುಂದಿನ ದಿನಗಳಲ್ಲಿ ನಾವುಗಳೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕಾವೇರಿ ನೀರನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸೆಲೆಯಾಗಿ ಬಳಸುತ್ತಿದ್ದು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.  ಆದರೆ ಮೂಲ ಕಾವೇರಿಯಿಂದ ಜೀವನದಿಯನ್ನು ಸ್ವಚ್ಛ ಶುದ್ಧ ಮಾಡುವ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ವೃಷಭಾವತಿ ನದಿ ರೀತಿಯಲ್ಲಿ ಕಾವೇರಿ ನದಿಯ ಅವನತಿ ಯಾದಲ್ಲಿ ದಕ್ಷಿಣ ಭಾರತ ಜನತೆ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು. ಕನ್ನಡತನ ಉಳಿಸುವಲ್ಲಿ ಕನ್ನಡ ನಾಡಿನ ಜೀವನದಿ ಕಾವೇರಿ ಪಾತ್ರ ಮಹತ್ವದ್ದಾಗಿದ್ದು ಕಾವೇರಿ ಉಳಿಸುವ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕಾಗಿದೆ ಈ ಸಂಬಂಧ ಕಾವೇರಿ ಹರಿಯುವ ಭಾಗಗಳಲ್ಲಿ ಯುವ ಬ್ರಿಗೇಡ್ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಹಯೋಗದೊಂದಿಗೆ ಕಾವೇರಿ ನದಿ ದಾರಿ ಉದ್ದಕ್ಕೂ ಜನರಿಗೆ ನದಿ ಸ್ವಚ್ಛತೆ ಬಗ್ಗೆ ಜಾಗೃತಿ ಅರಿವು ಮೂಡಿಸಲಾಗುತ್ತಿದೆ ಎಂದರು. ಸ್ವಚ್ಛತಾ ಕಾರ್ಯಕ್ರಮಕ್ಕೆ ಮುನ್ನ ನದಿ ತಟದಲ್ಲಿ ಗಿಡಗಳನ್ನು ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರದಲ್ಲಿ ಸ್ವಚ್ಛತಾ ಅಭಿಯಾನ ಸಂದರ್ಭ ಯುವ ಬ್ರಿಗೇಡ್ ನ ಪ್ರಮುಖರಾದ ನಂಜನಗೂಡು ಚಂದ್ರಶೇಖರ್, ಧಾರ್ಮಿಕ ವಿಭಾಗದ ಚಂದ್ರಶೇಖರ್, ಸೇರಿದಂತೆ ಬ್ರಿಗೇಡ್  ನ 75ಕ್ಕೂ ಅಧಿಕ ಸ್ವಯಂಸೇವಕರು, ಸ್ಥಳೀಯ ವಾಸವಿ ಯುವಕ ಸಂಘದ ಪ್ರಮುಖರಾದ ವೈಶಾಖ್, ಪ್ರವೀಣ್, ರಾಕೇಶ್, ರವಿಪ್ರಕಾಶ್, ಆದರ್ಶ್ ಹಿಂದೂಪರ ಸಂಘಟನೆ ಪ್ರಮುಖ ನವನೀತ್, ಪವನ್ ಬಿದ್ದಪ್ಪ,  ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಎಂ ಎನ್ ಚಂದ್ರಮೋಹನ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಚೈತನ್ಯ, ಸುಮನ ಮಳಲಗದ್ದೆ, ವಜ್ರಕಾಯ ತಂಡದ ಸದಸ್ಯರು, ಮತ್ತಿತರ ಸಂಘ ಸಂಸ್ಥೆಯ ಪ್ರಮುಖರು ಇದ್ದರು. ನದಿಯಿಂದ ತೆರವುಗೊಳಿಸಿದ ತ್ಯಾಜ್ಯಗಳನ್ನ ಕುಶಾಲನಗರ ಪುರಸಭೆಯ ಸ್ವಚ್ಛತಾ ವಾಹನಗಳಿಗೆ ತುಂಬಿ ಸಾಗಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯ ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ನಲ್ಲಿ ವಿಶೇಷ ಧ್ಯಾನ : ರಾಣಿ ಮಾಚಯ್ಯರಿಗೆ ಸನ್ಮಾನ*
Next Article *ಕಟ್ಟೆಮಾಡು ಪ್ರಕರಣ : ಕೊಡಗಿನ ಗೌಡ ಸಮಾಜಗಳ ಮತ್ತು ಗೌಡ ಸಂಘಟನೆಗಳ ಪ್ರಮುಖರ ಸಭೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.