Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ ಕೊಡವ ಸಮಾಜದಲ್ಲಿ ಪುತ್ತರಿ ನಮ್ಮೆರ ಊರೊರ್ಮೆ‌ : ಕೃಷಿಯನ್ನು ಉಳಿಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ : ಪೆಮ್ಮಂಡ ಮಂದಣ್ಣ*
ಇತ್ತೀಚಿನ ಸುದ್ದಿಗಳು

ಮಡಿಕೇರಿ ಕೊಡವ ಸಮಾಜದಲ್ಲಿ ಪುತ್ತರಿ ನಮ್ಮೆರ ಊರೊರ್ಮೆ‌ : ಕೃಷಿಯನ್ನು ಉಳಿಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ : ಪೆಮ್ಮಂಡ ಮಂದಣ್ಣ*

December 30, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.30 NEWS DESK : ಮಡಿಕೇರಿ‌‌ ಕೊಡವ ಸಮಾಜದ ಪುತ್ತರಿ ನಮ್ಮೆರ ಊರೊರ್ಮೆ ಸಮಾರಂಭವು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜದ ಕಲ್ಯಾಣ ಮಂಟಪ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯ ಮೆನೆಜಿಂಗ್ ಡೈರೆಕ್ಟರ್ ಪೆಮ್ಮಂಡ ಎ.ಮಂದಣ್ಣ, ಕೊಡಗಿನ ಪುತ್ತರಿ ಹಾಗೂ ಕೈಲ್ ಪೊಳ್ದ್ ಹಬ್ಬದ ಆಚರಣೆಯ ಹಿಂದೆ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವುದು ವಿಷಾದನೀಯ. ಭತ್ತದ ಕೃಷಿ ಇಲ್ಲದೆ ಹಬ್ಬ ಆಚರಣೆ ಅರ್ಥಹೀನವಾಗುವುದರಿಂದ ಸಂಘ ಸಂಸ್ಥೆಗಳು, ಸಮಾಜಗಳು ಭತ್ತದ ಕೃಷಿಗೆ ಹೆಚ್ಚಿನ ಒತ್ತು ನೀಡುವಂತಾಗಬೇಕೆಂದರು. ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಮಾತನಾಡಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಒಗ್ಗಟ್ಟು ಇದ್ದರೆ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಮರಗೋಡುವಿನ ಕಟ್ಟೆಮಾಡುವಿನ ಮಹಾಮೃತ್ಯುಂಜಯ ದೇವಾಲಯದ ವಾರ್ಷಿಕ ಉತ್ಸವದಲ್ಲಿ ಕೊಡವರ ಉಡುಪನ್ನು ಅವಮಾನಿಸಿರುವುದು ಖಂಡನೀಯ. ಎಲ್ಲರ ಸಹಕಾರದಿಂದ ಮಡಿಕೇರಿ ಕೊಡವ ಸಮಾಜ ಅಭಿವೃದ್ಧಿಯ ಜೊತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತ ಬರುತ್ತಿದೆ ಎಂದರು.  ಸಭಾ ಕಾರ್ಯಕ್ರಮಕ್ಕೂ ಮುನ್ನ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ದೇವರ ನೆಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಥಿಗಳಿಗೆ ಸಮಾಜದ ವತಿಯಿಂದ ಕೊಡವ ಒಡಿಕತ್ತಿ ನೀಡಿ ಗೌರವಿಸ ಲಾಯಿತು. ಹೆಚ್ಚು ಅಂಕಪಡೆದ ಸದಸ್ಯರ ಮಕ್ಕಳಿಗೆ ಬಹುಮಾನ ನೀಡಲಾಯಿತು. ಫೆಡರೇಶನ್ ಆಫ್ ಕೊಡವ ಸಮಾಜ ಬಾಳುಗೋಡ್ ನಲ್ಲಿ ಆಯೋಜಿಸಿರುವ ಕೊಡವ ಮೇಳದಲ್ಲಿ ಸಮಾಜದಿಂದ ಭಾಗವಹಿಸಿ ವಿವಿಧ ಸ್ಪರ್ಧೆಯಲ್ಲಿ ವಿಜೇತರದವರನ್ನು ಗೌರವಿಸಲಾಯಿತು.  ಸಮಾಜದ ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕಾರದ ಕನ್ನಂಡ ಕವಿತಾ ಬೊಳ್ಳಪ್ಪ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮೂವೇರ ಜಯರಾಂ, ಪುತ್ತರಿರ ಕರುಣ್‌ ಕಾಳಯ್ಯ, ಕಾಂಡೆರ ಲಲ್ಲು ಕುಟ್ಟಪ್ಪ, ಸಮಾಜದ ಸದಸ್ಯರು,ಮಡಿಕೇರಿಯ ಕೊಡವ ಕೇರಿಯವರು, ಪೊಮ್ಮಕ್ಕಡ ಕೂಟದ ಸದಸ್ಯರು ಹಾಜರಿದ್ದರು. ನಿರ್ದೇಶಕರಾದ ಮಂಡಿರ ಸದಾ ಮುದ್ದಪ್ಪ ಅತಿಥಿಗಳ ಪರಿಚಯ‌ಮಾಡಿದರು. ಬೊಪ್ಪಂಡ ಸರಳ ಕರುಂಬಯ್ಯ ಪ್ರಾರ್ಥಿಸಿದರು, ಉಪಾಧ್ಯಕ್ಷ ಕೇಕಡ ವಿಜುದೇವಯ್ಯ ಸ್ವಾಗತಿಸಿದರು.ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್ ವಂದಿಸಿದರು. ನಂತರ ತಳಿಯಕ್ಕಿ ದೀಪದೊಂದಿಗೆ ಕಾವೇರಿ ಕೇರಿಯವರು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಪುರಾತನ ಪುತ್ತರಿ ಕೋಲ್ ಮಂದ್ ಸ್ವಾಗತಿಸಿದರು. ನಂತರ ಕೋಲಾಟ್, ಬೊಳಕಾಟ್ ಹಾಗೂ ಮಹಿಳೆಯರ ಉಮ್ಮತಾಟ್ ವಾಲಗತಾಟ್ ಪ್ರದರ್ಶನ ನೆರವೇರಿತು.

ವರದಿ: ಪುತ್ತರಿರ ಕರುಣ್ ಕಾಳಯ್ಯ

 

Share. Facebook Twitter Pinterest LinkedIn Tumblr Email WhatsApp
Previous Article*ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯ ವ್ಯಾಪ್ತಿಯಲ್ಲಿ ಪೊಲೀಸ್ ಸರ್ಪಗಾವಲು*
Next Article *ಕೊಮ್ಮೆತೋಡು-ಹಾತೂರು ರಸ್ತೆ ದುರಸ್ತಿ ಕಾಮಗಾರಿ ಆರಂಭ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.