Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಾಪೋಕ್ಲು : ವಿದ್ಯಾರ್ಥಿಗಳು ಶಿಸ್ತು ಜೊತೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಿ : ಬಿದ್ದಾಟಂಡ ಪವನ್ ಮುತ್ತಪ್ಪ*
ಇತ್ತೀಚಿನ ಸುದ್ದಿಗಳು

*ನಾಪೋಕ್ಲು : ವಿದ್ಯಾರ್ಥಿಗಳು ಶಿಸ್ತು ಜೊತೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಿ : ಬಿದ್ದಾಟಂಡ ಪವನ್ ಮುತ್ತಪ್ಪ*

January 1, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜ.1 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದ ಜೊತೆಗೆ ಉತ್ತಮ ಗುಣನಡತೆಗಳನ್ನು ರೂಢಿಸಿಕೊಂಡು ಸಮಾಜದ ಉತ್ತಮ ಪ್ರಜೆಗಳಾಗಬೇಕು ಎಂದು ಸೋಮವಾರಪೇಟೆ ಗ್ರೀನ್ ಲ್ಯಾಂಡ್ ಎಸ್ಟೇಟ್ ನ ಮಾಲೀಕ ಬಿದ್ದಾಟಂಡ ಪವನ್ ಮುತ್ತಪ್ಪ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವ್ಯಾವಹಾರಿಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದ ಅವರು ಇಂಗ್ಲೀಷ್ ಭಾಷೆ ಕಲಿಕೆಗೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಗಮನ ಹರಿಸಬೇಕು ಎಂದರು. ನಿವೃತ್ತ ಪ್ರಾಂಶುಪಾಲ, ಶಾಲೆಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಪ್ರೌಢ ಶಿಕ್ಷಣವನ್ನು ಹೊಂದಿದ ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹೊಂದುವಲ್ಲಿ ಪೋಷಕರ ಪಾತ್ರ ಮುಖ್ಯ. ಪೋಷಕರ ಸಹಕಾರದಿಂದ ವಿದ್ಯಾಸಂಸ್ಥೆಯಲ್ಲಿ ಉತ್ತಮ ವಿದ್ಯಾರ್ಥಿಗಳು ರೂಪಗೊಂಡು ಶಾಲೆಗೆ ಕೀರ್ತಿ ಬರುವಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಹಲವು ವರ್ಷಗಳಿಂದ ಶಾಲೆಯು ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ನೀಡುತ್ತಿದೆ. ಈಗಾಗಲೇ ಸಹಸ್ರಾರು ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ. ಇದು ಶಾಲೆಗೆ ಹೆಮ್ಮೆಯ ವಿಚಾರ. ಶಾಲೆ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದೆ. ಪಠ್ಯದೊಂದಿಗೆ ಕ್ರೀಡೆಗೂ ಪ್ರೋತ್ಸಾಹ ನೀಡಬೇಕಿದೆ. ಅಂತೆಯೇ ಶಾಲೆಗೆ ಸುಸಜ್ಜಿತ ಆಟದ ಮೈದಾನವನ್ನು ನಿರ್ಮಿಸಲು ಆಡಳಿತ ಮಂಡಳಿ ಉದ್ದೇಶಿಸಿದೆ ಎಂದರು. ಪೋಷಕರ ಸಹಕಾರದಿಂದ ಶಾಲೆಗೆ ಉತ್ತಮ ಫಲಿತಾಂಶ ತರಲು ಸಾಧ್ಯ. ಹಲವು ವರ್ಷಗಳಿಂದ ಶಾಲೆ ಉತ್ತಮ ಫಲಿತಾಂಶವನ್ನು ನೀಡುತ್ತಿದೆ. ಪರೀಕ್ಷಾ ದಿನಗಳು ಸಮೀಪಿಸುತ್ತಿರುವುದರಿಂದ ಮೊಬೈಲ್, ಟಿವಿಗಳಿಂದ ವಿದ್ಯಾರ್ಥಿಗಳು ದೂರವಿದ್ದು , ಓದಿನ ಕಡೆಗೆ ಗಮನ ಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ನಾಯಕಂಡ ದೀಪಕ್ ಚಂಗಪ್ಪ, ನಿರ್ದೇಶಕರಾದ ಬಿದ್ದಾಟಂಡ ಪಾಪ ಮುದ್ದಯ್ಯ, ಅಪ್ಪಾರಂಡ ಅಪ್ಪಯ್ಯ, ಕೊಂಬಂಡ ಗಣೇಶ್, ನಿವೃತ್ತ ಡಿವೈಸ್‍ಪಿ ಬೊಪ್ಪಂಡ ಕುಶಾಲಪ್ಪ, ನಿವೃತ್ತ ಎಸಿಪಿ ಬಿದ್ದಾಟಂಡ ಮುತ್ತಣ್ಣ, ಬೊಳ್ಳಚೆಟ್ಟಿರ ಸುರೇಶ್, ಕಲಿಯಂಡ ಕೌಶಿಕ್ ಕುಶಾಲಪ್ಪ, ಅಪ್ಪಚೇಟ್ಟೋಳ ನವೀನ್ ಅಪ್ಪಯ್ಯ, ಚೌರಿರ ಮಂದಣ್ಣ, ಶಾಲಾ ಶಿಕ್ಷಕ ಮತ್ತು ಸಿಬ್ಬಂದಿ, ಪೋಷಕರು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಪರಿದಿ ಪೊನ್ನಮ್ಮ ಪ್ರಾರ್ಥಿಸಿದರು. ಶಿಕ್ಷಕಿ ಕಲ್ಯಾಟಂಡ ತನುಜ ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲೆ ಕಲ್ಯಾಟಂಡ ಬಿ.ಎಂ.ಶಾರದ ಶಾಲಾ ವರದಿ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ವಿಶಾಲಾಕ್ಷಿ ಸಂಸ್ಕೃತ ವರದಿ ವಾಚಿಸಿದರು, ಅತಿಥಿಗಳ ಪರಿಚಯವನ್ನು ಉದಿಯಂಡ ಲೀಲಾವತಿ ಮಾಡಿ, ಪಾಡಿಯಮಂಡ ಚಂದ್ರಕಲಾ ಹಾಗೂ ಬೊಳ್ಳಚೆಟ್ಟಿರ ಶೋಭಾ ನಿರೂಪಿಸಿ ಕಂಗಾoಡ ಸ್ಮಿತಾ ವಂದಿಸಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕ್ರೀಡೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರಿಗೆ ಅತಿಥಿಗಳು ಬಹುಮಾನ ನೀಡಿ ಶುಭ ಹಾರೈಸಿದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರನ್ನು ಮನಸೂರೆಗೊಂಡಿತು.

ವರದಿ : ದುಗ್ಗಳ ಸದಾನಂದ.

 

 

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಸಹಕಾರ ಸಂಘಗಳಿಗೆ ಶಿಕ್ಷಣ ಕಾರ್ಯಕ್ರಮ : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ : ಎನ್.ಎ.ರವಿ ಬಸಪ್ಪ ಸಲಹೆ*
Next Article *ಅಖಿಲ ಭಾರತ ತುಳು ಒಕ್ಕೂಟಕ್ಕೆ ಕೊಡಗಿನ ಮೂವರು ಆಯ್ಕೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.