Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಯೋಧ ಪಳಂಗೋಟು ಪಿ.ದಿವಿನ್ ಪಂಚಭೂತಗಳಲ್ಲಿ ಲೀನ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್ ವಿಡಿಯೋ ಗ್ಯಾಲರಿ

*ಕೊಡಗಿನ ಯೋಧ ಪಳಂಗೋಟು ಪಿ.ದಿವಿನ್ ಪಂಚಭೂತಗಳಲ್ಲಿ ಲೀನ*

ಜನವರಿ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 NEWS DESK : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ.ದಿವಿನ್ ಅವರ ಅಂತ್ಯಕ್ರಿಯೆಯು ಹುಟ್ಟೂರಾದ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ  ನೆರವೇರಿತು. ಸಾಂಪ್ರದಾಯಿಕ ವಿಧಿ ವಿಧಾನಗಳ ನಂತರ ಮಾಲಂಬಿಯ ಜಮೀನಿನಲ್ಲಿ ಅಗ್ನಿಸ್ಪರ್ಶ ಮಾಡುವುದರೊಂದಿಗೆ ದಿವಿನ್ ಪಂಚಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲು ಮೇಜರ್ ನಿಖಿಲ್ ಹಾಗೂ ಸುಬೇದಾರ್ ಮಹೇಶ್ ಜಾಧವ್ ಅವರ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೇನಾ ವಾಹನದ ಮೂಲಕ ಕುಶಾಲನಗರಕ್ಕೆ ತರಲಾಗಿತ್ತು, ಬುಧವಾರ ಬೆಳಗ್ಗೆ 8 ರಿಂದ 11 ಗಂಟೆ ವರೆಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶಿಲ್ದಾರ್ ಕಿರಣ್ ಗೌರಯ್ಯ, ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಗಣಿ ಪ್ರಸಾದ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪೊನ್ನಚ್ಚನ ಮೋಹನ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಕುಶಾಲನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು ಸೇರಿದಂತೆ ಹಲವರು ದಿವಿನ್ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ದಿವಿನ್ ಅವರ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಕುಶಾಲನಗರದ ಪ್ರಮುಖ ಬೀದಿಯಿಂದ ಮೆರವಣಿಗೆ ಹೊರಟು ಕೂಡಿಗೆ, ಹೆಬ್ಬಾಲೆ ಮಾರ್ಗ ಹುಟ್ಟೂರಾದ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು, ಈ ಸಂದರ್ಭದಲ್ಲಿ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರೊಬೆಷನರಿ ಎಸ್‌ಪಿ ಬೆನಕ ಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತಹಶೀಲ್ದಾರ್ ಶ್ರೀಧರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯರಾದ ಸೂದನ ಈರಪ್ಪ, ಚಂದ್ರಾವತಿ ಬಡ್ಡಡ್ಕ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ ಇತರರು ಅಂತಿಮ ನಮನ ಸಲ್ಲಿಸಿದರು. ಹುತಾತ್ಮ ದಿವಿನ್ ಪಾರ್ಥಿವ ಶರೀರವನ್ನು ಸಾರ್ವಜನಿಕರ ವೀಕ್ಷಣೆಗೆ ಆಲೂರು ಸಿದ್ದಾಪುರದ ಶಾಲಾ ಆವರಣದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಸಿದ್ಧತೆ ಮಾಡಿಸಿದ್ದರು. ಅನಂತರ ನೇರವಾಗಿ ಮಾಲಂಬಿಯ ಮನೆಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಆ ಸಂಧರ್ಭದಲ್ಲಿಯೂ ಸಹ ಸಾರ್ವಜನಿಕರ ದರ್ಶನಕ್ಕೆ ಕೆಲಕಾಲ ಪಾರ್ಥಿವ ಶರೀರವನ್ನು ಇಡಲಾಗಿತ್ತು, ಗ್ರಾಮಸ್ಥರು, ಬಂಧು-ಬಳಗದವರು, ಅಗಲಿದ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ‘ಹುತಾತ್ಮ ಯೋಧ ದಿವಿನ್ ಅವರ ತಾಯಿ ಜಲಜಾಕ್ಷಿ ಅವರು ಅಂತಿಮ ನಮನ ಸಲ್ಲಿಸುವ ಸಂದರ್ಭದಲ್ಲಿ ಬಂಧು-ಬಳಗದವರು ಜೋರಾಗಿ ಅಳುತ್ತಾ ಕಣ್ಣೀರಿಟ್ಟ ಹೃದಯ ವಿದ್ರಾವಕ ದೃಶ್ಯ ಮನಕಲಕುವಂತಿತ್ತು.’ ಸಾಂಪ್ರದಾಯಿಕ ವಿಧಿ-ವಿಧಾನಗಳನ್ನು ಹುತಾತ್ಮ ಯೋಧ ದಿವಿನ್ ಕುಟುಂಬದ ಸಂಬಂಧಿ ಚಿರಾಗ್ ನೆರವೇರಿಸಿದರು.
ಆಲೂರು ಸಿದ್ದಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಜನರು ಅಂತಿಮ ದರ್ಶನದಲ್ಲಿ ಪಾಲ್ಗೊಂಡು ಹುತಾತ್ಮ ಯೋಧ ದಿವಿನ್‌ಗೆ ಗೌರವ ನಮನ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಮಾ.೫: ಪ್ರಶಾಂತ್ ಟಿ.ಆರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ನನ್ನ ಸೈಕಲ್ ಸವಾರಿ’ ಕಿರುಚಿತ್ರದ ಚಿತ್ರೀಕರಣ ಆರಂಭವಾಗಿದೆ.…

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.