Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*
  • *ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*
  • *ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*
  • *ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*
  • *ನಿಧನ ಸುದ್ದಿ*
  • *ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*
  • *ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೃಹ ಆರೋಗ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ : ಕೊಡಗಿನಲ್ಲಿ ಜ.6 ರಿಂದ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೃಹ ಆರೋಗ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ : ಕೊಡಗಿನಲ್ಲಿ ಜ.6 ರಿಂದ ಆರಂಭ*

ಜನವರಿ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.3 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ‘ಗೃಹ ಆರೋಗ್ಯ ಕಾರ್ಯಕ್ರಮ’ದ ಬಗ್ಗೆ ಮಾಹಿತಿಯನ್ನು ನೀಡಿದರು. 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ. ಕೊಡಗಿನಲ್ಲಿ ಜನವರಿ 6 ರಿಂದ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವುದು ರಾಜ್ಯ ಸರ್ಕಾರದ ಯೋಜನೆಯಾಗಿದೆ. ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರನ್ನು ಒಳಗೊಂಡ 150 ತಂಡಗಳು ವಾರದಲ್ಲಿ 3 ದಿನ ಪ್ರತಿ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಉಚಿತ ಔಷಧಿ ತಲುಪಿಸಲಾಗುತ್ತದೆ. ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ರಕ್ತದೊತ್ತಡ ಮಧುಮೇಹ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಗರ್ಭ ಕೊರಳಿನ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆಗಳು ನಿದ್ರಾಹೀನತೆ ಈ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಿದ್ದಾರೆ. ಕ್ಯಾನ್ಸರ್ ಚಿಹ್ನೆ ಲಕ್ಷಣಗಳು ಕಂಡುಬಂದಲ್ಲಿ ತಜ್ಞ ವೈದ್ಯರ ಮೂಲಕ ರೋಗ ನಿರ್ಣಯ ಖಾತ್ರಿಪಡಿಸಿ ಮುಂದಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಚ್‍ಒ ಮಾಹಿತಿ ನೀಡಿದರು. ಭಾರತದಲ್ಲಿ ಒಟ್ಟಾರೆ ಮರಣಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದ ಶೇ.61.8 ಮರಣಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟಲು ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಲು ಈ ಯೋಜನೆ ಅನುμÁ್ಠನ ಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶ್ರೀನಿವಾಸ್ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಗೃಹ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಮನೆ ಮನೆಗೆ ತಲುಪಿಸಿ ಯಶಸ್ವಿಗೊಳಿಸಲು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್, ತಾಲೂಕು ಆರೋಗ್ಯ ಅಧಿಕಾರಿಗಳು ಡಾ.ಇಂದೂಧರ್, ಡಾ.ಚೇತನ್, ಡಾ.ಯತಿರಾಜ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಡಿಪಿಸಿ ಡಾ.ಶಾಂಭವಿ, ಡಿಪಿಎಂ ದೇವರಾಜು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬ್ಯಾಡಗೊಟ್ಟದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಶಂಕೆ : ಶಾಸಕ ಡಾ.ಮಂತರ್ ಗೌಡ ಅಸಮಾಧಾನ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಬ್ಯಾಡಗೊಟ್ಟ: 64 ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸಲು ಯತ್ನ ಆರೋಪ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.2: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ…

*ಹರದೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ*

ಅಕ್ಟೋಬರ್ 2, 2026

*ಶ್ರೀ ಸಾಯಿ ಈವೆಂಟ್ಸ್; ಮಡಿಕೇರಿಯಲ್ಲಿ ಮೂರು ದಿನಗಳ ಬೃಹತ್ ಫುಡ್ ಫೆಸ್ಟಿವಲ್ : ಒಂದು ಸೀರೆ ಕೊಂಡರೆ ಒಂದು ಸೀರೆ ಉಚಿತ*

ಅಕ್ಟೋಬರ್ 2, 2026

*ನಿಧನ ಸುದ್ದಿ*

ಅಕ್ಟೋಬರ್ 2, 2026

*ಸುಂಟಿಕೊಪ್ಪದಲ್ಲಿ ಜನ ಜಾಗೃತಿ ಆಂದೋಲನ ರಥಕ್ಕೆ ಅದ್ಧೂರಿ ಸ್ವಾಗತ*

ಅಕ್ಟೋಬರ್ 2, 2026

*ಪೊನ್ನಂಪೇಟೆ ಕೊಡವ ಸಮಾಜದ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಅಕ್ಟೋಬರ್ 2, 2026

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.