Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್ ವಿಡಿಯೋ ಗ್ಯಾಲರಿ

ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ

ಜನವರಿ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜ.3 : ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ::: ಬಗೆಹರಿಯದ ಸಮಸ್ಯೆ ::: ಕಳೆೆದ ಎರಡು ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮೀಣ ಭಾಗಗಳು ಕಾಡಾನೆ ಹಾವಳಿಯಿಂದ ನಲುಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಜೀವ ಮತ್ತು ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ ತಮ್ಮ ನೆಲೆಯನ್ನಾಗಿಸಿಕೊಂಡಿವೆ. ಇವುಗಳನ್ನು ಅರಣ್ಯಕ್ಕೆ ಅಟ್ಟುವ ಸಾಕಷ್ಟು ಪ್ರಯತ್ನಗಳನ್ನು ಅರಣ್ಯ ಇಲಾಖೆ ನಡೆಸಿದೆ. ಅರಣ್ಯಕ್ಕೆ ಅಟ್ಟಲ್ಪಟ್ಟ ಕಾಡಾನೆಗಳು ಮರಳಿ ತೋಟಗಳಿಗೆ ಆಗಮಿಸುತ್ತಿರುವುದು ಸಮಸ್ಯೆ ಬಗೆಹರಿಯದೆ ಇರಲು ಕಾರಣವಾಗಿದೆ. ::: ಸಂಕೇತ್ ಭೇಟಿ ::: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರಿಗೆ ಸಾಂತ್ವನ ಹೇಳಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತೋಟಗಳಲ್ಲಿ ನೆಲೆ ನಿಂತು ನಿರಂತರ ಜೀವ ಮತ್ತು ಬೆಳೆಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಸರಕಾರದ ಮೂಲಕ ನಡೆಯುತ್ತಿದೆ ಎಂದರು. ಕೊಡಗು, ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಅವುಗಳಿಗೆ ಪುನರ್ವಸತಿ ಒದಗಿಸಬೇಕಾಗಿದೆ. ಇದಕ್ಕೆ ಅಗತ್ಯ ಜಾಗವನ್ನು ಗುರುತಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈಗಾಗಲೇ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಎರಡು ಮೂರು ವರ್ಷಗಳ ಕಾಲಾವಧಿ ಬೇಕಾಗಬಹುದೆಂದು ಸಂಕೇತ್ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.26 : 2026-27ನೇ ಸಾಲಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪಟ್ಟಿಯಲ್ಲಿ ತಿಯನ್…

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.