Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಂಸಿಸಿ ಕಪ್ ಫುಟ್ಬಾಲ್ : ಟೀಂ ಭಗವತಿ ಚಾಂಪಿಯನ್ :  ಸಂಗಂ ಎಫ್‌ಸಿ ರನ್ನರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಂಸಿಸಿ ಕಪ್ ಫುಟ್ಬಾಲ್ : ಟೀಂ ಭಗವತಿ ಚಾಂಪಿಯನ್ :  ಸಂಗಂ ಎಫ್‌ಸಿ ರನ್ನರ್*

ಜನವರಿ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 NEWS DESK : ಮ್ಯಾನ್ಸ್ ಕಾಂಪೌಂಡ್ ಕ್ಲಬ್(ಎಂಸಿಸಿ) ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮೂರನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸತತ ಮೂರನೇ ಬಾರಿಗೆ ಜಯಗಳಿಸಿ ಹ್ಯಾಟ್ರಿಕ್ ಸಾಧನೆಯೊಂದಿಗೆ ಟೀಂ ಭಗವತಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಸಂಗಂ ಎಫ್‌ಸಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಕಳೆದ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಅಂತಿಮ ಸುತ್ತಿಗೆ ಪ್ರವೇಶಿಸಿದ ಭಗವತಿ ಹಾಗೂ ಸಂಗಂ ತಂಡಗಳ ನಡುವೆ ರೊಚಕತೆಯಿಂದ ಪಂದ್ಯಾಟ ನಡೆಯಿತು. ಉಭಯ ತಂಡಗಳು ಪೈಪೋಟಿಯೊಂದಿಗೆ ಸೆಣೆಸಾಟ ನಡೆಸಿದರೂ ಬಲಿಷ್ಠವಾಗಿದ್ದ ಭಗವತಿ ತಂಡ ಸಂಗಂ ತಂಡವನ್ನು 5-1 ಗೋಲುಗಳಿಂದ ಮಣಿಸಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ಸಂಗಂ ತಂಡ ಎರಡನೇ ಸ್ಥಾನಕ್ಕೆ ತೃಪ್ತಿಕೊಟ್ಟುಕೊಳ್ಳಬೇಕಾಯಿತು. ಸಂಜೆ ನಡೆದ ಅಂತಿಮ ಪಂದ್ಯಾವಳಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಆಟಗಾರರನ್ನು ಪರಿಚಯಿಸಿಕೊಳ್ಳುವದರ ಮೂಲಕ ಉದ್ಘಾಟಿಸಿದರು. ನಂತರ ಎಂಸಿಸಿ ಅಧ್ಯಕ್ಷ ಎಂ.ಎ.ಕ್ರಿಸ್ಟೋಫರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಯಾಥೋಲಿಕ್ ಕ್ರಿಷ್ಚಿಯನ್ ಅಸೋಸಿಯೇಶನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಎಂಸಿಸಿ ಹಿರಿಯ ಆಟಗಾರ, ಭಾರತ ತಂಡದಲ್ಲಿ ಆಡಿದ ಬೆಪ್ಪುರನ ಅಣ್ಣಪ್ಪ, ಹಿರಿಯ ಆಟಗಾರರುಗಳಾದ ವಾಸು, ರವಿ, ರಾಜೇಶ್, ಪ್ರದೀಪ್, ಚಿಣ್ಣಪ್ಪ ಪಾಲಾಕ್ಷ, ಪೀಟರ್ ಅವರುಗಳು ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು. ವಿಜೇತರಿಗೆ ಶಾಸಕ ಡಾ. ಮಂತರ್ ಗೌಡ ಅವರು ಪ್ರಯೋಜಿಸಿದ್ದ ರೂ.30ಸಾವಿರ ನಗದು ಹಾಗೂ ದಿ.ವಿಜಯಲಕ್ಷ್ಮಿ ಟಿ.ಕೆ ಅವರ ಜ್ಞಾಪಕಾರ್ಥ ಆರ್. ವೇಲಾಯುಧನ್ ಮತ್ತು ಸಂಸಾರದವರು ಪ್ರಯೋಜಿಸಿದ್ದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ಜಾನ್ಸನ್ ಪಿಂಟೋ ಪ್ರಾಯೋಜಿಸಿದ್ದ ರೂ.20ಸಾವಿರ ನಗದು ಹಾಗೂ ಎಂಸಿಸಿಯ ಪದಾಧಿಕಾರಿ ಬೆಂಜಮಿನ್ ಪ್ರಶಾಂತ್ ಅವರು ದಿ.ಸೆಲೆಸ್ಟಿನ್ ಡಿಸೋಜ ಅವರ ಜ್ಞಾಪಕಾರ್ಥ ಪ್ರಾಯೊಜನೆ ಮಾಡಿದ್ದ ಟ್ರೋಫಿಯನ್ನು ವಿತರಣೆ ಮಾಡಲಾಯಿತು. ದಿ. ಗೌರಮ್ಮ ಪೆರುಮಾಳ್ ಅವರ ಜ್ಞಾಪಕಾರ್ಥ ಮಡಿಕೇರಿ ಮುಡಾ ಸದಸ್ಯ ಆರ್.ಪಿ.. ಚಂದ್ರಶೇಖರ್ ಪ್ರಾಯೋಜಿಸಿದ್ದ ಉತ್ತಮ ತಂಡ ಬಹುಮಾನವನ್ನು ಅಮೇಟಿ ಎ ಗದ್ದೆಹಳ್ಳ ತಂಡ ಪಡೆದುಕೊಂಡರೆ, ದಿ. ಸುಶೀಲಮ್ಮ ಜ್ಞಾಪಕಾರ್ಥ ಎಂಸಿಸಿ ಕಾರ್ಯದರ್ಶಿ ಉಮೇಶ್‌ಕುಮಾರ್ ಪ್ರಾಯೋಜಿಸಿದ್ದ ಟಾಪ್ ಸ್ಕೋರರ್ ಬಹುಮಾನವನ್ನು ಅಮೇಟಿ ಬಿ ತಂಡದ ಮಸೂದ್ ಪಡೆದುಕೊಂಡರೆ, ದಿ.ಪಾಪು, ಎಲ್ಲಮ್ಮ ಜ್ಞಾಪಕಾರ್ಥ ಎಂಸಿಸಿ ಪದಾಧಿಕಾರಿ ಸುರ್ಜಿತ್ ಪ್ರಾಯೋಜನೆ ಮಾಡಿದ್ದ ಉತ್ತಮ ಆಟಗಾರ ಬಹುಮಾನವನ್ನು ಟೀಂ ಭಗವತಿ ತಂಡದ ರಂಗ ಪಡೆದುಕೊಂಡರು. ಕ್ರಾಸ್ ರೋಡ್ ಫುಟ್ವೇರ್ ಮಾಲೀಕ, ಎಂಸಿಸಿ ಪದಾಧಿಕಾರಿ ತೌಸೀಫ್ ಪ್ರಾಯೋಜನೆ ಮಾಡಿದ್ದ ಉತ್ತಮ ಗೋಲ್‌ಕೀಪರ್ ಬಹುಮಾನವನ್ನು ಟೀಂ ಭಗವತಿಯ ಕೆವಿನ್ ಪಡೆದುಕೊಂಡರೆ, ಎಂಸಿಸಿ ಕಾರ್ಯದರ್ಶಿ ಉಮೇಶ್‌ಕುಮಾರ್ ತಮ್ಮ ಪುತ್ರಿ ದಿ.ಶುದ್ಧಿ ಅವರ ಜ್ಞಾಪಕಾರ್ಥ ಪ್ರಯೋಜನೆ ಮಾಡಿದ್ದ ಉದಯೋನ್ಮುಖ ಆಟಗಾರ ಬಹುಮಾನವನ್ನು ಎಂಸಿಸಿ ತಂಡದ ರಾಶಿಕ್ ಪಡೆದುಕೊಂಡರು. ಪ್ರಥಮ ಹಾಗೂ ದ್ವಿತೀಯ ಸ್ಥಾನ ಪೆದ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನಗಳನ್ನು ಬೆಪ್ಪುರನ ಅಣ್ಣಪ್ಪ ಅವರು ಪ್ರಾಯೋಜನೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಉಮೇಶ್ ಕುಮಾರ್, ಖಜಾಂಚಿ ಪ್ರಸನ್ನ, ಪದಾಧಿಕಾರಿಗಳಾದ ವಿವೇಕ್, ಸಚಿನ್ ವಾಸುದೇವ್, ಸೆಟ್ಟೆಜನ ಚಂದ್ರು, ಜಾಕ್, ಸುರ್ಜಿತ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಎಂಸಿಸಿ ಕ್ಲಬ್ ಉಪಾಧ್ಯಕ್ಷ ಕುಡೆಕಲ್ ಸಂತೋಷ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರೆ, ಸದಸ್ಯ ಅಶೋಕ್ ಬಹುಮಾನ ವಿತರಣಾ ಕಾರ್ಯ ನೆರವೇರಿಸಿಕೊಟ್ಟರು. ಬೆಂಜಮಿನ್ ಪ್ರಶಾಂತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.