Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌಡಳ್ಳಿಯಲ್ಲಿ ಮಕ್ಕಳ ಗ್ರಾಮಸಭೆ : ಸಮಸ್ಯೆಗಳ ಕುರಿತು ಗಮನ ಸೆಳೆದ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೌಡಳ್ಳಿಯಲ್ಲಿ ಮಕ್ಕಳ ಗ್ರಾಮಸಭೆ : ಸಮಸ್ಯೆಗಳ ಕುರಿತು ಗಮನ ಸೆಳೆದ ವಿದ್ಯಾರ್ಥಿಗಳು*

ಜನವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.7 NEWS DESK : ಗೌಡಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆಯ ಸಹಯೋಗದಲ್ಲಿ ಗೌಡಳ್ಳಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಮಕ್ಕಳು ಮತ್ತು ಮಹಿಳೆಯರ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಟ್ಟರು. ಶುಂಠಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಾತನಾಡಿ, ಮೇಲ್ಚಾಚವಣಿಯ ಮರಗಳು ಗೆದ್ದಲು ಹಿಡಿದಿದ್ದು, ತರಗತಿಯಲ್ಲಿ ಕುಳಿತುಕೊಳ್ಳುವುದಕ್ಕೆ ಭಯವಾಗುತ್ತದೆ. ಮೈದಾನದಲ್ಲಿ ಕಾಡು ಬೆಳೆದಿರುವುದರಿಂದ ಕೆಲವೊಮ್ಮೆ ಹಾವುಗಳ ಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ. ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಜಿ.ಎಸ್.ಧ್ರುವ, ಕಾರ್ತಿಕ್, ಮೋಕ್ಷ ತಮ್ಮ ಶಾಲೆಯ ಸಮಸ್ಯೆಗಳನ್ನು ಬಿಚ್ಚಿಟ್ಟರು. ಶೌಚಾಗೃಹಕ್ಕೆ ಬಾಗಿಲು ಇಲ್ಲ. ಹೊಸ ಶೌಚಗೃಹ ಬೇಕು. ಕ್ರೀಡಾಸಾಮಾಗ್ರಿಗಳು ಬೇಕು. ಕೊಠಡಿಗೆ ಗಾರೆ ಹಾಕಿಸಿಕೊಡಿ ಎಂದು ಮನವಿ ಮಾಡಿದರು. ಗೌಡಳ್ಳಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಲೋಕೇಶ್, ಮನ್ವಿತ್, ವಿದ್ಯಾ, ಪ್ರಿಯಾಂಕ, ಪ್ರಜ್ವಲ್, ಶ್ರಾಧ್ಯ ಮಾತನಾಡಿ, ಶಾಲಾ ಮೈದಾನ ಒತ್ತುವರಿಯಾಗುತ್ತಿದೆ. ಟ್ರಂಚ್ ನಿರ್ಮಿಸಿ ಹದ್ದು ಬಸ್ತು ಗುರುತಿಸಿ ಮೈದಾನವನ್ನು ಉಳಿಸಿಕೊಳ್ಳಬೇಕು. ಶೌಚಗೃಹಕ್ಕೆ ಸಿಬ್ಬಂದಿ ಬೇಕು. ಸಂಜೆ ಶಾಲಾ ಆವರಣದಲ್ಲಿ ಕಿಡಿಗೇಡಿಗಳು ಓಡಾಡಿಕೊಂಡಿರುತ್ತಾರೆ. ಸಿ.ಸಿ.ಕ್ಯಾಮೆರಾ ಅಳವಡಿಸಿಕೊಡಬೇಕು. ಸ್ಮಾರ್ಟ್ ಕ್ಲಾಸ್‍ಗಳು ಬೇಕು. ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತವಾಗಿ ಸೈಕಲ್ ಕೊಡಬೇಕು ಎಂದು ಮನವಿ ಮಾಡಿದರು. 9ನೇ ತರಗತಿ ವಿದ್ಯಾರ್ಥಿನಿ ಕಳೆದ ಮೂರು ವರ್ಷಗಳಿಂದ ಶುಚಿ ಪ್ಯಾಡ್ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಮಾತನಾಡಿ, ಕಟ್ಟಡ ದುರಸ್ತಿ, ಕುಡಿಯುವ ನೀರು, ಶೌಚಗೃಹ, ಕಾಂಪೌಂಡ್ ಸೇರಿದಂತೆ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಅವರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯು ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ.35ರಷ್ಟು ಮಕ್ಕಳಿದ್ದಾರೆ. ಗ್ರಾಮೀಣ ಜನಸಂಖ್ಯೆಯಲ್ಲಿ ಶೇ.45ರಷ್ಟು ಮಕ್ಕಳಿದ್ದಾರೆ. ಈ ಮಕ್ಕಳಿಗೆ ಶೇ.2ರಷ್ಟು ಅನುದಾನ ನೀಡಿದರೆ ಮಕ್ಕಳಿಗೆ ಮೂಲಭೂತ ಸೌಕರ್ಯ ತಲುಪಿಸಲು ಸಾಧ್ಯವಾಗುವುದಿಲ್ಲ. ಜನನವಾದ 1000 ಮಕ್ಕಳಲ್ಲಿ ಒಂದು ವರ್ಷ ತುಂಬುದರೊಳಗೆ 25 ಮಕ್ಕಳು ಸಾಯುತ್ತಿದ್ದಾರೆ. 15ರಿಂದ 49 ವರ್ಷದೊಳಗಿನ ಮಹಿಳೆಯರಲ್ಲಿ ಶೇ 49ರಷ್ಟು ಮಂದಿ ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಪೌಷ್ಠಿಕಾಂಶ ಕೊರತೆ ಮತ್ತು ಮಾನಸಿಕ ಅರೋಗ್ಯ ಸಮಸ್ಯೆಯಿಂದ ರಕ್ತಹೀನತೆಗೆ ಕಾರಣ ಎಂದು ತಿಳಿದುಬಂದಿರುವ ಸತ್ಯವಾಗಿದೆ. ಮಕ್ಕಳ ರಕ್ಷಣೆಗೆ ಇಡೀ ಸಮಾಜ ಕೈಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಜಿ.ಎಸ್.ನಾಗರಾಜು, ಉಪಾಧ್ಯಕ್ಷೆ ಮಲ್ಲಿಕಾ, ಸದಸ್ಯರಾದ ರೋಹಿಣಿ, ಸುಮಾ, ವೆಂಕಟೇಶ್, ಮಂಜುನಾಥ್, ಗಣೇಶ್, ಪಿಡಿಒ ಲಿಖಿತಾ, ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.