Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕವಿಶಿಷ್ಯ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ : ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕವಿಶಿಷ್ಯ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ : ಪೂರ್ವಭಾವಿ ಸಭೆ*

ಜನವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 NEWS DESK : ಕನ್ನಡ ನಾಡಿನ ಹಿರಿಯ ಸಾಹಿತಿ ಶಿಶು ಸಾಹಿತ್ಯದ ಪಿತಾಮಹ “ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೊ” ಕೊಡಗಿನ ನಾಡಗೀತೆಯ ರಚನಾಕಾರ ಮಡಿಕೇರಿ ಸೆಂಟ್ರಲ್ ಹೈ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಬ್ರಿಟಿಷರ ಕಾಲದಲ್ಲಿ ಕೊಡಗಿನ ಶಾಲಾ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ಅಪ್ರತಿಮಾ ಸಂಘಟಕ, ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಡೆಸುವ ಸ್ಥಳ, ನಡೆಸುವ ರೀತಿಯ ಬಗ್ಗೆ ಸಲಹೆ ಸೂಚನೆ ನೀಡುವಂತೆ ಉಪಸ್ಥಿತರಿದ್ದವರಲ್ಲಿ ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಸಾಹಿತಿಗಳಾದ ಡಾ. ಜಿ.ಸೋಮಣ್ಣ, ಮಡಿಕೇರಿ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್, ಶಿಕ್ಷಣ ಇಲಾಖೆಯ ಗುರುರಾಜ್, ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಕಾರ್ಯಕ್ರಮದ ಕುರಿತು ಸಲಹೆ ನೀಡಿದರು. ಕಾರ್ಯಕ್ರಮದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೋರಿಕೊಂಡು ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಣಧಿಕಾರಿ, ಪೊಲೀಸ್ ಅಧೀಕ್ಷಕರು ಪೋಷಕರಾಗಿಯೂ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ವಿಶೇಷ ಅಹ್ವಾನಿತರಾಗಿ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ತಾಲೂಕು ಹೋಬಳಿ ಅಧ್ಯಕ್ಷರುಗಳು ಜಿಲ್ಲೆಯ ಇತರ ಸಂಘ-ಸಂಸ್ಥೆಗಳ ಅಧ್ಯಕ್ಷರುಗಳನ್ನು ಒಳಗೊಂಡ ಸಮಿತಿ ರಚಿಸುವಂತೆ ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಪಂಜೆ ಮಂಗೇಶರಾಯರ ಕಾರ್ಯಕ್ಷೇತ್ರವಾಗಿದ್ದ ಸೆಂಟ್ರಲ್ ಹೈಸ್ಕೂಲ್ ಅಂದರೆ ಈಗಿನ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಫೆ.7 ರಂದು ಕಾರ್ಯಕ್ರಮ ನಡೆಸುವಂತೆ ತಾತ್ಕಾಲಿಕ ದಿನ ನಿಗದಿಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜೆಯವರ ಬದುಕು, ಬರಹ, ಸಾಹಿತ್ಯ, ನಾಟಕ, ಕವನ ಇವುಗಳ ಕುರಿತು ರಾಜ್ಯದ ಹಿರಿಯ ಸಾಹಿತಿಗಳಿಂದ ವಿಚಾರಗೋಷ್ಠಿ ನಡೆಸುವಂತೆಯೂ, ಶಾಲಾ ವಿದ್ಯಾರ್ಥಿಗಳಿಂದ ಪಂಜೆಯವರ ಹಾಡುಗಳ ನೃತ್ಯರೂಪಕ ಮತ್ತು ಗೀತ ಗಾಯನ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ  ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ನಿರ್ದೇಶಕರುಗಳಾದ ಕೆ.ಟಿ.ಬೇಬಿ ಮ್ಯಾಥ್ಯು, ಸುನೀತಾ ಪ್ರೀತು, ಮಡಿಕೇರಿ ತಾಲೂಕು ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ ಮುದ್ದಯ್ಯ ಶಿಕ್ಷಣ ಇಲಾಖೆಯ ಕೆ.ಪಿ.ಗುರುರಾಜ್, ಎಂ.ಕೃಷ್ಣಪ್ಪ, ಸರ್ಕಾರಿ ಪ್ರೌಢಶಾಲಾ ಮುಖ್ಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ, ಕ್ರಸೆಂಟ್ ಶಾಲೆಯ ಅಧ್ಯಾಪಕ ನಾಗರಾಜ ಶೆಟ್ಟಿ, ಜಾನ್ಸನ್ ಕೆ ಎ ಮುಖ್ಯೋಪಾಧ್ಯಾಯರು ಸಂತಮೈಕಲರ ಪ್ರೌಢಶಾಲೆ, ಶ್ರೀಮತಿ ಆಶಾ ಎಚ್ ಕೊಡಗು ವಿದ್ಯಾಲಯ ಶಿಕ್ಷಕರು. ಅನುಸೂಯ ಬ್ಲಾಸಂ ಶಾಲಾ ಮುಖ್ಯೋಪಾಧ್ಯಾಯರು, ಸುನೀತಾ ಪ್ರೀತು ಲಿಟಲ್ ಫ್ಲವರ್ ಶಾಲೆ. ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಮುಕ್ತಾಕ್ಷಿ ಪದವಿಪೂರ್ವ ಕಾಲೇಜ್ ಉಪನ್ಯಾಸಕರು, ಮಹದೇವ್ ಪೇಟೆ ಶಾಲೆಯ ಮುಖ್ಯ ಶಿಕ್ಷಕಿ ಪ್ರಪುಲ್ಲ, ಜಿಟಿ ರಸ್ತೆ ಶಾಲೆಯ ಮುಖ್ಯ ಶಿಕ್ಷಕಿ ರೋಜಿ ಕ್ಷೇವಿಯರ್, ನರಲ್ ತಿಮ್ಮಯ್ಯ ಶಾಲಾ ಶಿಕ್ಷಕ ಹೆಚ್.ಎನ್.ಈರಪ್ಪ, ಮಡಿಕೇರಿ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಎಂ.ಡಿ.ಸೌಮ್ಯ, ಜಿಎಂಪಿ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಕೆ.ಸುಶೀಲ, ಸಂತ ಜೋಷಪರ ಶಾಲಾ ಶಿಕ್ಷಕಿ ಶೈಲ  ಹಾಗೂ ಸಾಹಿತ್ಯ ಪರಿಷತ್ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.