Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು*

ಜನವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 NEWS DESK : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಮೂನೆ-6 ರಲ್ಲಿ 1549 ಸ್ವೀಕೃತವಾಗಿದ್ದು, 1460 ಅರ್ಜಿಗಳು ಅಂಗೀಕಾರವಾಗಿದೆ. 89 ಅರ್ಜಿಗಳು ತಿರಸ್ಕøತವಾಗಿವೆ. ನಮೂನೆ-7ರಡಿ 1631 ಅರ್ಜಿಗಳು ಸ್ವೀಕೃತವಾಗಿದ್ದು, 1549 ಅರ್ಜಿಗಳು ಅಂಗೀಕೃತವಾಗಿದೆ. 82 ಅರ್ಜಿಗಳು ತಿರಸ್ಕøತಗೊಂಡಿವೆ. ಹಾಗೆಯೇ ನಮೂನೆ-8 ರಲ್ಲಿ 3123 ಅರ್ಜಿಗಳು ಸ್ವೀಕೃತವಾಗಿದ್ದು, 2,871 ಅರ್ಜಿಗಳು ಅಂಗೀಕೃತವಾಗಿದೆ. 252 ಅರ್ಜಿಗಳು ತಿರಸ್ಕøತಗೊಂಡಿವೆ. ‘ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ 18-19 ವರ್ಷದ ಯುವ ಮತದಾರರ ನೋಂದಣಿ ಕುರಿತಂತೆ ನಮೂನೆ-6 ನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ಜಿಲ್ಲೆಯಲ್ಲಿ 500 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ 490 ಅರ್ಜಿ ಅಂಗೀಕೃತವಾಗಿದ್ದು, 10 ಅರ್ಜಿ ಅರ್ಜಿಗಳು ತಿರಸ್ಕøತವಾಗಿವೆ.’ ‘ಪ್ರಸ್ತುತ 2025 ರ ಜನವರಿ, 6 ಕ್ಕೆ ಅಂತಿಮ ಮತದಾರರ ಪಟ್ಟಿಯಂತೆ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು ಇದ್ದಾರೆ. 552 ಮತಗಟ್ಟೆಗಳಲ್ಲಿ 2,32,042 ಪುರುಷ ಮತ್ತು 2,42,321 ಮಹಿಳಾ ಮತದಾರರು ಇದ್ದು, 13 ಇತರೆ ಮತದಾರರು ಇದ್ದಾರೆ.’ ದಿನಾಂಕ:06-01-2025 ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 29-10-2024 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಗೆ ಹೊಲಿಸಿದ್ದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಂದ 279 ಮತದಾರರು ನಿವ್ವಳ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ನಡೆಯುತ್ತಿದ್ದು, ಈ ಅವಧಿಯಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಮೂನೆ-6, 6ಎ, 7 ಮತ್ತು 8 ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂhttps://voters.eci.gov.in/ / VOTERS’ SERVICE PORTAL ಮೂಲಕ ಆನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬೇಕಿದೆ. ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿ ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದು, ಎಲ್ಲಾ ಮತದಾರರು/ ನಾಗರಿಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಡೌನ್‍ಲೋಡ್ ಮಾಡಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿ ಪಡೆಯಬಹುದು. ಸೇವಾ ಮತದಾರರ ಪಟ್ಟಿ ಪ್ರಕಟಣೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸೇವಾ ಮತದಾರರ ಅಂತಿಮ ಪಟ್ಟಿಯನ್ನು ಜನವರಿ, 06 ರಂದು ಪ್ರಕಟಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿ 1343 ಸೇವಾ ಮತದಾರರು ಇದ್ದಾರೆ. ಇದರಲ್ಲಿ 1,284 ಪುರುಷ ಮತ್ತು 59 ಮಹಿಳಾ ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.