Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ, ದಲ್ಲಾಳಿ ಮುಕ್ತಗೊಳಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ, ದಲ್ಲಾಳಿ ಮುಕ್ತಗೊಳಿಸಿ*

ಜನವರಿ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.8 NEWS DESK : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ ಮತ್ತು ದಲ್ಲಾಳಿ ಮುಕ್ತಗೊಳಿಸಬೇಕೆಂದು ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎ.ಎಸ್.ಕಟ್ಟಿ ಮಂದಯ್ಯ ಅವರು ಜಿಲ್ಲೆಯ ಕಂದಾಯ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅರ್ಜಿದಾರರಿಗೆ ಹೆಚ್ಚಾಗಿ ಸಮಸ್ಯೆ ಎದುರಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಐದು ತಾಲ್ಲೂಕುಗಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಭ್ರಷ್ಟಾಚಾರ ಎನ್ನುವುದು ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ, ಇಂದು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಮೂಲಕ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಅರ್ಜಿದಾರರು ನೀಡುವ ಹಣದಲ್ಲಿ ಅರ್ಧಭಾಗ ದಲ್ಲಾಳಿಗಳಿಗೆ, ಉಳಿದ ಅರ್ಧಭಾಗ ಅಧಿಕಾರಿಗಳಿಗೆ ಎಂದು ಹಂಚಿಕೆಯಾಗುತ್ತಿದೆ. ಈ ಹಿಂದೆ ಭಾರತೀಯ ಪ್ರಜೆಗಳು ಬ್ರಿಟಿಷರ ಗುಲಾಮರಾಗಿ ಸಂಕಷ್ಟದ ಜೀವನ ನಡೆಸಬೇಕಾಗಿತ್ತು. ಆದರೆ ಇಂದು ಅಧಿಕಾರಿಗಳ ಗುಲಾಮರಾಗುವ ದುಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು.
::: ಸಕಾಲ ಮರು ಜಾರಿಯಾಗಲಿ ::: ಸಾರ್ವಜನಿಕರ ಅರ್ಜಿಗಳು ಸೀಮಿತ ಅವಧಿಯಲ್ಲಿ ಶೀಘ್ರ ವಿಲೇವಾರಿಯಾಗಬೇಕೆಂದು ರಾಜ್ಯ ಸರಕಾರ ಸಕಾಲ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸಕಾಲ ಯೋಜನೆಯನ್ನೇ ಅಧಿಕಾರಿಗಳು ಮರೆತು ಬಿಟ್ಟಿದ್ದಾರೆ. ಅರ್ಜಿ ಸಲ್ಲಿಸಿದ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸಕಾಲವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.
::: ಸಿಸಿ ಕ್ಯಾಮರಾ ಹಾಕಿ ::: ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಡೆಯಲು ಸಿ.ಸಿ ಕ್ಯಾಮರಾ ಬಹಳ ಪ್ರಯೋಜನಕಾರಿಯಾಗಿದೆ. ಇದು ಸೆರೆ ಹಿಡಿಯುವ ದೃಶ್ಯಾವಳಿಗಳಿಂದ ಮಧ್ಯವರ್ತಿಗಳನ್ನು ಪತ್ತೆಹಚ್ಚಿ ಕಡಿವಾಣ ಹಾಕಬಹುದು ಎಂದು ಅಭಿಪ್ರಾಯಪಟ್ಟರು.
::: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಿ ::: ಸರಕಾರಿ ಕಚೇರಿಗಳಿಗೆ ಎಷ್ಟು ಅರ್ಜಿಗಳು ಬಂದಿವೆ, ಎಷ್ಟು ವಿಲೇವಾರಿಯಾಗಿವೆ, ಎಷ್ಟು ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ, ಯಾಕೆ ಬಾಕಿ ಉಳಿದಿವೆ ಎಂಬ ಮಾಹಿತಿಯನ್ನು ಮಾಹಿತಿ ಹಕ್ಕಿನ ಅಡಿಯಲ್ಲಿ ಇಲಾಖಾವಾರು ಸಂಘ- ಸಂಸ್ಥೆಗಳಿಗೆ ಒದಗಿಸಬೇಕು.
::: ಸ್ವೀಕೃತಿ ಪತ್ರ ನೀಡಿ ::: ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ತಮಗೆ ಬೇಕಾಗುವ ಸವಲತ್ತುಗಳನ್ನು ಪಡೆಯಲು ಮತ್ತು ವೈಯುಕ್ತಿಕ ಉಪಯೋಗಕ್ಕಾಗಿ ಸಲ್ಲಿಸುವ ಅರ್ಜಿಗಳಿಗೆ ಸ್ವೀಕೃತಿ ಪತ್ರವನ್ನು ನೀಡುವ ನಿಯಮವನ್ನು ಜಾರಿಗೆ ತರಬೇಕು. ಇದರಿಂದ ಕಡತ ನಾಪತ್ತೆಯಾಗಿದೆ ಅಥವಾ ನಮ್ಮ ಬಳಿ ಇಲ್ಲ ಎಂದು ಅಧಿಕಾರಿಗಳು ಕಾರಣ ಹೇಳುವುದನ್ನು ತಪ್ಪಿಸಬಹುದು.
::: ರೈತರ ಪಹಣಿ ::: ರೈತರ ಪಹಣಿ (ಆರ್.ಟಿ.ಸಿ) ದಾಖಲಾತಿಯಲ್ಲಿ 9ನೇ ಕಲಂನಲ್ಲಿ ರೈತರ ಹೆಸರನ್ನು ತೆಗೆಯದೆ ಶಾಶ್ವತವಾಗಿ ತರುವಂತಹ ವ್ಯವಸ್ಥೆಯನ್ನು ಮಾಡಬೇಕು. ಬೇರೆ ಜಿಲ್ಲೆಗಳಲ್ಲಿ ರೈತರು ವರ್ಷಕ್ಕೆ ಎರಡು ಮೂರು ಬೆಳೆಗಳನ್ನು ತೆಗೆಯುತ್ತಿರುವಾಗ ಅವರ ಹೆಸರನ್ನು ತೆಗೆಯುವುದು ಪುನಃ ಸೇರಿಸುವುದು ಸಮಂಜಸವಾಗಿದೆ. ಆದರೆ ಕೊಡಗಿನಲ್ಲಿ ಕಾಫಿ, ಭತ್ತ ಅಡಿಕೆಯು ಶಾಶ್ವತ ಬೆಳೆಗಳಾಗಿರುವುದರಿಂದ ಅದನ್ನು ಯಾವ ಕಾಲಕ್ಕೂ 9ನೇ ಕಲಂ ನಿಂದ ತೆಗೆಯದೆ ಹಾಗೆ ಉಳಿಸುವ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಎ.ಎಸ್.ಕಟ್ಟಿ ಮಂದಯ್ಯ ಒತ್ತಾಯಿಸಿದರು. ಸಮಿತಿಯ ಕಾರ್ಯಾಧ್ಯಕ್ಷ ಬಿ.ಎಸ್.ಕಾಶಿ ಕಾರ್ಯಪ್ಪ ಮಾತನಾಡಿ ಸರಕಾರಿ ಕಚೇರಿಗಳಲ್ಲಿ ಸಕಾಲ ಯೋಜನೆಯ ಫಲಕ ಮಾತ್ರ ಕಾಣುತ್ತಿದೆ. ಆದರೆ ಸಕಾಲ ನಿಯಮದಂತೆ ಯಾವ ಅರ್ಜಿಯೂ ವಿಲೇವಾರಿಯಾಗುತ್ತಿಲ್ಲ. ಕಂದಾಯ ಮತ್ತು ಭೂದಾಖಲೆ ಇಲಾಖೆಗಳಲ್ಲಿ ಪಹಣಿ, ಸರ್ವೆ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ರಾಜಕಾರಣಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಆರೋಪಿಸಿದರು. ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಕೊರತೆ ಇದೆ, ಇರುವ ಸಿಬ್ಬಂದಿಗಳು ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಈ ಲೋಪದೋಷಗಳ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಎಸ್.ಎ.ರತನ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ದಿಲೀಪ್ ಗಣಪತಿ ಹಾಗೂ ನಿರ್ದೇಶಕ ನಾಣಿರ ವಿಜಯ್ ನಂಜಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.