Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಬೆನ್ನು ಹುರಿ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಬೆನ್ನು ಹುರಿ ತಪಾಸಣಾ ಶಿಬಿರ*

ಜನವರಿ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಭಗವಾನ್ ಮಹವೀರ್ ಜೈನ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ 18 ವಯಸ್ಸಿನ ಒಳಗಿನ ಮಕ್ಕಳಿಗೆ ವಕ್ರ ಬೆನ್ನು ಹುರಿ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಗುರುತಿಸಲಾಗಿರುವ ಮಕ್ಕಳನ್ನು ಕರೆಸಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಭಗವಾನ್ ಮಹವೀರ್ ಜೈನ್ ಆಸ್ಪತ್ರೆಯಿಂದ ತಜ್ಞವೈದ್ಯರು ಬಂದಿದ್ದು, ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅವಶ್ಯಕತೆ ಕಂಡುಬರುವ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು, ತಪಾಸಣಾ ಶಿಬಿರಕ್ಕೆ ಹಾಜರಾಗಿರುವ ಮಕ್ಕಳ ಪೋಷಕರು ಸದುಪಯೋಗಪಡೆದುಕೊಳ್ಳುವಂತೆ ಕೋರಿದರು. ಭಗವಾನ್ ಮಹವೀರ್ ಜೈನ್ ಆಸ್ಪತ್ರೆಯ ಬೆನ್ನುಹುರಿ ಮೂಳೆ ಶಸ್ತ್ರಚಿಕಿತ್ಸಕ ತಜ್ಞವೈದ್ಯರಾದ ಡಾ.ಡಿ.ರಾಘವೇಂದ್ರ ರಾವ್ ಮಾತನಾಡಿ, ಬೆನ್ನುಮೂಳೆಗಳ ವಿರೂಪಗಳು ಮತ್ತು ಡೊಂಕುತನ ಸರಿಪಡಿಸಲು ನಮ್ಮದೇ ಆದ ವೈದ್ಯರ ತಂಡವನ್ನು ರಚಿಸಿಕೊಂಡು ಸಾರ್ವಜನಿಕ ದಾನಿಗಳ ಪ್ರೋತ್ಸಾಹ ಮತ್ತು ಉದ್ಯಮಿಗಳ ಸಹಕಾರದೊಂದಿಗೆ ಇದಕ್ಕೆ ಸಂಬಂಧಿಸಿದಂತೆ ಸುಸಜ್ಜಿತವಾದ ಅತ್ಯಾಧುನಿಕ ಯಂತ್ರೋಪಕರಣಗಳೊಂದಿಗೆ ಉತ್ತಮ ಆಸ್ಪತ್ರೆ ನಡೆಸಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಬೆನ್ನುಹುರಿ ವಿರೂಪಗಳು ಮತ್ತು ಡೊಂಕುತನಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಬೆನ್ನುಹುರಿ ವಿರೂಪಗಳಿಂದ ಮಕ್ಕಳು ಬೆಳೆದು ದೊಡ್ಡವರಾದ ನಂತರ ಅನುಭವಿಸುವ ತೊಂದರೆಗಳ ಬಗ್ಗೆ ವಿವರಿಸಿ ಆರೋಗ್ಯದಲ್ಲಾಗುವ ಏರುಪೇರುಗಳನ್ನು ಹಾಜರಾಗಿದ್ದ ಪೋಷಕರಿಗೆ ವಿವರಿಸಿದರು. ವಿರೂಪಗಳನ್ನು 18 ವಯಸ್ಸಿನ ಒಳಗೆ ಶಸ್ತ್ರಚಿಕಿತ್ಸೆ ಮಾಡಿ ಗುಣಪಡಿಸಿದಲ್ಲಿ ಮಕ್ಕಳು ಸಾಮಾನ್ಯ ಮಕ್ಕಳಂತೆ ಭವಿಷ್ಯದ ಜೀವನ ನಡೆಸಬಹುದು ಎಂದು ತಿಳಿಸಿದರು. ಪ್ರತೀ ವರ್ಷ 200 ಮಕ್ಕಳಿಗೆ ಶಸ್ತ್ರಚಿಕಿತ್ಸೆ ನಡೆಸುವ ಗುರಿ ಹೊಂದಿದ್ದು, ಇಲ್ಲಿಯವರೆಗೆ 120 ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದರು. ಈ ಶಿಬಿರಕ್ಕೆ ಒಟ್ಟು 8 ಮಕ್ಕಳು ಪೋಷಕರೊಂದಿಗೆ ಹಾಜರಾಗಿದ್ದರು. ಇವರನ್ನು ಪರೀಕ್ಷಿಸಿದ ವೈದ್ಯರು 6 ಮಕ್ಕಳಿಗೆ ಬೆಂಗಳೂರಿಗೆ ಬಂದು ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಹೆಚ್ಚಿನ ವಿರೂಪ ಮಕ್ಕಳನ್ನು ಪತ್ತೆಹಚ್ಚಿದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು. ಶಿಬಿರದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮಧುಸೂಧನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್‍ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಚೇತನ್ ಮತ್ತು ಡಾ.ಇಂದುಧರ ಮತ್ತು ಭಗವಾನ್ ಮಹವೀರ್ ಜೈನ್ ಆಸ್ಪತ್ರೆಯ ವ್ಯವಸ್ಥಾಪಕರು, ಶ್ರೀನಿವಾಸ್ ಬಿ.ವಿ ಹಾಗೂ ಆರ್.ಬಿ.ಎಸ್.ಕೆ ತಂಡದ ಎಲ್ಲಾ ವೈದ್ಯರು ಹಾಗೂ ಸಿಬ್ಬಂಧಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಎಸ್‌ಐಆರ್ ಅಕ್ರಮ ಆರೋಪ : ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆಗ್ರಹ : ಅ.3 ರಂದು ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ*

ಅಕ್ಟೋಬರ್ 2, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರು ಮೂರು…

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.